14ನೇ ಹಣಕಾಸು ಆಯೋಗಕ್ಕೆ ಹೋಲಿಸಿದರೆ 15ನೇ ಹಣಕಾಸು ಆಯೋಗದಲ್ಲೇ ರಾಜ್ಯಕ್ಕೆ ಹೆಚ್ಚು ಹಣ ಬರುತ್ತದೆ: ಸಂಸದ ಬೊಮ್ಮಾಯಿ

ಪ್ರಧಾನಿ ಮೋದಿಯವರು ಕೇಂದ್ರದ ಅನುದಾನ ಶೇ 32 ರಿಂದ ಶೇ 42 ಕ್ಕೆ ಏರಿಸಿದ್ದರು. ಅವರು ಶೇ 10ರಷ್ಟು ಹೆಚ್ಚಳ ಮಾಡಿದ್ದಾರೆ.
Basavaraj Bommai
ಬಸವರಾಜ ಬೊಮ್ಮಾಯಿ
Updated on

ಬೆಂಗಳೂರು: 14ನೇ ಹಣಕಾಸು ಆಯೋಗಕ್ಕಿಂತ 15ನೇ ಹಣಕಾಸು ಆಯೋಗದ ಅಡಿಯಲ್ಲಿ ಕರ್ನಾಟಕಕ್ಕೆ 1 ಲಕ್ಷ ಕೋಟಿ ರೂ.ಗಳಿಗೂ ಹೆಚ್ಚು ಹಣ ದೊರೆಯಲಿದೆ ಎಂದು ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಅವರು ಶನಿವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖಾತರಿ ಯೋಜನೆಗಳಿಗೆ ಹಣ ಹಂಚಿಕೆ ಮಾಡಲು ಸಾಧ್ಯವಾಗದ ಕಾರಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ಧ ರಾಜಕೀಯ ಹೇಳಿಕೆಗಳನ್ನು ನೀಡುತ್ತಿದ್ದಾರೆಂದು ಆರೋಪಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಹೊಸದೇನು ಹೇಳಿಲ್ಲ ಈಗಾಗಲೇ ಹಲವಾರು ಬಾರಿ ಸುಳ್ಳು ಹೇಳಿದ್ದಾರೆ. ಈಗ ಅದನ್ನೇ ಮತ್ತೆ ಹೇಳಿದ್ದಾರೆ. ಪ್ರಧಾನಿ ಮೋದಿಯವರು ಕೇಂದ್ರದ ಅನುದಾನ ಶೇ 32 ರಿಂದ ಶೇ 42 ಕ್ಕೆ ಏರಿಸಿದ್ದರು. ಅವರು ಶೇ 10ರಷ್ಟು ಹೆಚ್ಚಳ ಮಾಡಿದ್ದಾರೆ. ಎಲ್ಲವು ಗೊತ್ತಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮರೆ ಮಾಚುತ್ತಾರೆ. ಶೇಕಡಾ 40 ರಿಂದ 50 ರಷ್ಟು ಹೆಚ್ಚಳ ಮಾಡಬೇಕೆನ್ನುವುದು ನಮ್ಮೆಲ್ಲರ ಬೇಡಿಕೆಯಾಗಿದೆ. 14ನೇ ಹಣಕಾಸು ಆಯೋಗ ಸಭೆ ನಡೆಸಿದ ಸಂದರ್ಭದಲ್ಲಿ ಐದು ಜನ ಕಾಂಗ್ರೆಸ್ ಸಚಿವರಿದ್ದರು. ಆಗ ರಾಜ್ಯದ ಪರವಾಗಿ ಸರಿಯಾಗಿ ವಾದ ಮಾಡದೇ ತಮ್ಮ ತಪ್ಪು ಮುಚ್ಚಿಕೊಳ್ಳಲು ಈ ರೀತಿ ಮಾತನಾಡುತ್ತಿದ್ದಾರೆ. ರಾಜ್ಯಕ್ಕೆ ಕಾಂಗ್ರೆಸ್ ನಿಂದಲೇ ಅನ್ಯಾಯವಾಗಿದೆ ಎಂದು ಕಿಡಿಕಾರಿದರು.

14ನೇ ಹಣಕಾಸು ಆಯೋಗಕ್ಕೆ ಹೋಲಿಕೆ ಮಾಡಿದರೆ 15 ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಕೇಂದ್ರದಿಂದ 1 ಲಕ್ಷ ಕೋಟಿ ರೂ. ಹೆಚ್ಚಿಗೆ ಬರುತ್ತದೆ. ಈಗಾಗಲೇ 14ನೇ ಹಣಕಾಸು ಆಯೋಗದಲ್ಲಿ ಬಂದಷ್ಟು ಹಣ ರಾಜ್ಯಕ್ಕೆ ಬಂದಿದೆ. ಇನ್ನು ಎರಡು ವರ್ಷ ಬರುತ್ತದೆ. ಗ್ಯಾರೆಂಟಿ ಯೋಜನೆಗೆ ಹಣ ಹೊಂದಿಸಲಾಗದೇ ಸಿಎಂ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ದ ಆರೋಪ ಮಾಡುತ್ತಿದ್ದಾರೆಂದು ತಿರುಗೇಟು ನೀಡಿದರು.

Basavaraj Bommai
ಜಾತಿ ಗಣತಿ ಮರು ಸಮೀಕ್ಷೆ: ಸಚಿವ ಸಂಪುಟ ಸಭೆ ಒಪ್ಪಿಗೆ

ರಾಜ್ಯದ ರೈಲ್ವೆ ಯೋಜನೆಗೆ ಯುಪಿಎ ಅವಧಿಯಲ್ಲಿ 700 ಕೋಟಿ ರೂ. ಬಂದಿತ್ತು. ಈ ವರ್ಷ ಕೇಂದ್ರ ಸರ್ಕಾರ 7,700 ಕೋಟಿ ರೂ. ಕೊಟ್ಟಿದೆ. ಅದಕ್ಕೆ ಹೊಂದಿಕೆಯಾಗುವ ಅನುದಾನವನ್ನು ಕೊಡಲು ರಾಜ್ಯ ಸರ್ಕಾರಕ್ಕೆ ಆಗುತ್ತಿಲ್ಲ. ಆರೋಗ್ಯ, ಗ್ರಾಮಿಣಾಭಿವೃದ್ದಿ, ರಸ್ತೆ ಸೇರಿದಂತೆ ಹಲವಾರು ಯೋಜನೆಗಳಿಗೂ ಕೇಂದ್ರ ಸರ್ಕಾರ ಅನುದಾನ ನೀಡುತ್ತಿದೆ‌. ಅದನ್ನು ರಾಜ್ಯ ಸರ್ಕಾರ ಹೇಳುವುದಿಲ್ಲ ಎಂದು ತಿಳಿಸಿದರು.

ಜಾತಿಗಣತಿ ವಿಚಾರ ಕುರಿತು ಮಾತನಾಡಿ, ಜಾತಿ ಸಮೀಕ್ಷೆ ಮಾಡುವ ಅಧಿಕಾರ ಕೇಂದ್ರ ಸರ್ಕಾರಕ್ಕಿದೆ. ಮುಖ್ಯಮಂತ್ರಿಗಳು ಸುಮ್ಮನೆ ಹಿಂದುಳಿದ ವರ್ಗದ ಜನರ ಕಣ್ಣಿಗೆ ಮಣ್ಣೆರಚುತ್ತಿದ್ದಾರೆ. ಹತ್ತು ವರ್ಷದಿಂದ ಇವರೇ ಸಿಎಂ ಇದ್ದರು, ಆಗ ಯಾಕೆ ಮಾಡಲಿಲ್ಲ. ಜಾತಿ ಸಮೀಕ್ಷೆ ವಿಚಾರದಲ್ಲಿ ಸಿಎಂ ಬಹಳ ಸಂಕಷ್ಟಕ್ಕೆ ಸಿಲುಕಿದ್ದರು. ಹೈಕಮಾಂಡ್ ಅದರಿಂದ ಇವರನ್ನು ರಕ್ಷಿಸಿದೆ. ಆದರೆ, ಕೇಂದ್ರ ಸರ್ಕಾರವೇ ಮಾಡುವ ಜಾತಿ ಸಮೀಕ್ಷೆ ಅಂತಿಮ ಎಂದು ಹೇಳಿದರು.

ಇರಾನ್ ಮೇಲೆ ಇಸ್ರೇಲ್ ದಾಳಿ ವಿಚಾರ ಕುರಿತು ಮಾತನಾಡಿ. ಇದು ಆಘಾತಕಾರಿ ವಿಚಾರ, ಈ ಬಗ್ಗೆ ಅಮೆರಿಕಾ ಕೂಡ ತುರ್ತು ಸಭೆ ನಡೆಸಿದೆ. ಒಂದೆಡೆ ರಷ್ಯಾ ಉಕ್ರೇನ್ ಯುದ್ದ, ಇದು ವಿಶ್ವದ ಮೇಲೆ ಬಹಳಷ್ಟು ಪರಿಣಾಮ ಬೀರುತ್ತದೆ. ವಿಶ್ವದ ಎಲ್ಲ ನಾಯಕರು ಯುದ್ದ ನಿಲ್ಲಿಸುವ ನಿಟ್ಟಿನಲ್ಲಿ ಪ್ರಯತ್ನಿಸಬೇಕು ಎಂದು ಆಗ್ರಹಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com