'ಜನರೊಂದಿಗೆ ಜನತಾದಳ' ಅಭಿಯಾನ ಆರಂಭಿಸಿದ ನಿಖಿಲ್: ಜಿಲ್ಲಾ ಪಂಚಾಯತ್, ತಾ.ಪಂ ಚುನಾವಣೆಯಿಂದ ಬಿಜೆಪಿ ದೂರವಿಡುವ ಯೋಜನೆ!

2025 ರ ನವೆಂಬರ್‌ನಲ್ಲಿ ನಡೆಯಲಿರುವ ಜಿಲ್ಲಾ ಪಂಚಾಯತ್/ತಾಪಂ ಮತ್ತು ಬಿಬಿಎಂಪಿ ಚುನಾವಣೆಗಳು ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷವನ್ನು ಮುನ್ನಡೆಸುವ ಪೂರ್ವಭಾವಿಯಾಗಿ ಅವರ ಪ್ರಚಾರ ಕೈಗೊಂಡಿದ್ದಾರೆ ಎನ್ನಲಾಗಿದೆ.
Nikhil Kumaraswamy
ನಿಖಿಲ್ ಕುಮಾರಸ್ವಾಮಿ
Updated on

ತುಮಕೂರು: ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ 'ಜನರೊಂದಿಗೆ ಜನತಾದಳ' (ಜೆಡಿ-ಎಸ್ ಜನರೊಂದಿಗೆ) ಅಭಿಯಾನ ಆರಂಭಿಸಿದ್ದಾರೆ. ಈ ಮೂಲಕ ಪ್ರಾದೇಶಿಕ ರಾಜಕೀಯ ಪಕ್ಷವು ವಿಶೇಷವಾಗಿ ಹಳೆಯ ಮೈಸೂರು ಪ್ರದೇಶದಲ್ಲಿ, ಒಕ್ಕಲಿಗ ಭದ್ರಕೋಟೆಯಲ್ಲಿ ಇನ್ನೂ ಒಂದು ಪ್ರಬಲ ಶಕ್ತಿಯಾಗಿದೆ ಎಂಬ ಸಂದೇಶವನ್ನು ವಿರೋಧಿಗಳಿಗೆ ರವಾನಿಸಿದರು.

ಪ್ರಮುಖ ಲಿಂಗಾಯತ ಧಾರ್ಮಿಕ ಸಂಸ್ಥೆಯಾದ ಸಿದ್ದಗಂಗಾ ಮಠಕ್ಕೆ ಆಗಮಿಸಿದ ನಿಖಿಲ್ ಅವರನ್ನು ಬಿಜೆಪಿ ಶಾಸಕರಾದ ಬಿ ಸುರೇಶ್ ಗೌಡ ಮತ್ತು ಜಿಬಿ ಜ್ಯೋತಿಗಣೇಶ್ ಸ್ವಾಗತಿಸಿದರು. ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದು ಶಿವಕುಮಾರ ಸ್ವಾಮಿಗಳ 'ಗದ್ದುಗೆ' (ಸಮಾಧಿ) ಮುಂದೆ ಪ್ರಾರ್ಥನೆ ಸಲ್ಲಿಸಿದರು.

ಜೆಡಿಎಸ್ ರಾಜ್ಯ ಅಧ್ಯಕ್ಷರಾಗಿ ನಿಖಿಲ್ ಕುಮಾರಸ್ವಾಮಿ ಅವರನ್ನು ನೇಮಕ ಮಾಡುವ ಸಾಧ್ಯತೆಯಿದೆ. 2025 ರ ನವೆಂಬರ್‌ನಲ್ಲಿ ನಡೆಯಲಿರುವ ಜಿಲ್ಲಾ ಪಂಚಾಯತ್/ತಾಪಂ ಮತ್ತು ಬಿಬಿಎಂಪಿ ಚುನಾವಣೆಗಳು ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷವನ್ನು ಮುನ್ನಡೆಸುವ ಪೂರ್ವಭಾವಿಯಾಗಿ ಅವರ ಪ್ರಚಾರ ಕೈಗೊಂಡಿದ್ದಾರೆ ಎನ್ನಲಾಗಿದೆ.

ಮೂಲಗಳ ಪ್ರಕಾರ, ಹಳೆಯ ಮೈಸೂರು ಪ್ರದೇಶಕ್ಕೆ ಪ್ರವೇಶಿಸಿರುವ ಬಿಜೆಪಿ , ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮೈತ್ರಿಕೂಟದೊಂದಿಗೆ ಹೋಗಲು ಸಿದ್ಧವಾಗಿಲ್ಲ. ಹಿಗಾಗಿ ಜೆಡಿಎಸ್ ಕೂಡ ಯಾವುದೇ ಪರಿಸ್ಥಿತಿ ಎದುರಾದರು ಹೋರಾಡಲು ಸಿದ್ಧತೆ ನಡೆಸುತ್ತಿದೆ . "ಇನ್ನೂ ಮೈತ್ರಿ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ನಿಖಿಲ್ ಕಾದು ನೋಡೋಣ ಎಂದಿದ್ದಾರೆ.

Nikhil Kumaraswamy
ಮೂರು ಬಾರಿ ಮುಗ್ಗರಿಸಿದ್ದರೂ ಎದೆಗುಂದದ ನಿಖಿಲ್: ಪಟ್ಟಾಭಿಷೇಕಕ್ಕೂ ಮುನ್ನ ರಾಜ್ಯ ಪ್ರವಾಸ; ಸೊರಗಿದ JDSಗೆ ಯುವರಾಜನ 'ಬೂಸ್ಟ್'!

ಇತ್ತೀಚಿನ ಚನ್ನಪಟ್ಟಣ ಉಪಚುನಾವಣೆ ಸೇರಿದಂತೆ ಮೂರು ಚುನಾವಣೆಗಳಲ್ಲಿ ಸೋತಿರುವ ನಿಖಿಲ್, ರಾಜಕೀಯ ಸಂಘಟಕರಾಗಿ ತಮ್ಮ ಕೌಶಲ್ಯವನ್ನು ಪರೀಕ್ಷಿಸಬೇಕಾಗುತ್ತದೆ ಎಂದು ವಿಶ್ಲೇಷಕರು ಹೇಳಿದ್ದಾರೆ. ವರ್ಷಗಳಿಂದ ವಿಳಂಬವಾಗುತ್ತಿರುವ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ದಿನಾಂಕಗಳನ್ನು ಘೋಷಿಸುವಂತೆ ನಿಖಿಲ್ ಕುಮಾರಸ್ವಾಮಿ ಕಾಂಗ್ರೆಸ್ ಸರ್ಕಾರವನ್ನು ಒತ್ತಾಯಿಸಿದರು.

ಯಾವುದೇ ರಾಜಕೀಯ ಪಕ್ಷಕ್ಕೆ, ವಿಶೇಷವಾಗಿ ಪ್ರಾದೇಶಿಕ ಪಕ್ಷಗಳಿಗೆ, ಸ್ಥಳೀಯ ಸಂಸ್ಥೆಗಳಿಗೆ ನಡೆಯುವ ಚುನಾವಣೆಗಳು ತಮ್ಮ ಮತದ ಪಾಲನ್ನು ಸುಧಾರಿಸುವ ಮೂಲಕ ತಮ್ಮ ನೆಲೆಯನ್ನು ಬಲಪಡಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತವೆ ಮತ್ತು ಜೆಡಿಎಸ್ ಕೂಡ ಅದರ ಮೇಲೆ ಗಮನ ಕೇಂದ್ರೀಕರಿಸುತ್ತಿದೆ ಎಂದು ತಜ್ಞರು ಹೇಳುತ್ತಾರೆ.

2023 ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಮತ ಪಾಲು ಕೇವಲ ಶೇ. 13.29ಕ್ಕೆ ಕುಸಿದಿದೆ, 2018 ರಲ್ಲಿ ಶೇ. 18.36 ರಷ್ಟಿತ್ತು ಮತ್ತು ಪಕ್ಷವು ಕೇವಲ 19 ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಯಿತು. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷದ ಮತ ಪಾಲನ್ನು ಶೇಕಡಾ 20 ರಷ್ಟು ಮರಳಿ ಪಡೆಯಲು ಮತ್ತು ಭವಿಷ್ಯದಲ್ಲಿ ಕರ್ನಾಟಕದ ರಾಜಕೀಯದಲ್ಲಿ ಜೆಡಿಎಸ್ ಕಿಂಗ್‌ಮೇಕರ್ ಪಾತ್ರ ವಹಿಸುವಂತೆ ನೋಡಿಕೊಳ್ಳಲು ನಿಖಿಲ್ ಯೋಜಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com