R.Ashok
ವಿಪಕ್ಷ ನಾಯಕ ಆರ್.ಅಶೋಕ್

ಇತರ ರಾಜ್ಯಗಳ ಚುನಾವಣೆಗೆ ಹಣ ಒದಗಿಸಲು ಕಾಂಗ್ರೆಸ್ ಕರ್ನಾಟಕದಲ್ಲಿ ಲೂಟಿ ಮಾಡುತ್ತಿದೆ: ಆರ್.ಅಶೋಕ್ ಆರೋಪ

ಹೈಕಮಾಂಡ್‌ಗೆ ಕಪ್ಪ ಕಾಣಿಕೆ ಸಲ್ಲಿಸಲು ರಾಜ್ಯ ಸರ್ಕಾರದಿಂದ ಲೂಟಿ ನಡೆಯುತ್ತಿದೆ. 60 ಪರ್ಸೆಂಟೇಜ್‌ನ ಈ ಸರ್ಕಾರದಲ್ಲಿ ಪ್ರತಿ ಇಲಾಖೆ ಯಲ್ಲೂ ಭ್ರಷ್ಟಾಚಾರ ನಡೀತಿದೆ.
Published on

ಮೈಸೂರು: ಬಿಹಾರ ಸೇರಿ ಇತರೆ ರಾಜ್ಯಗಳಲ್ಲಿ ಚುನಾವಣೆ ಹತ್ತಿರ ಬರುತ್ತಿದ್ದು, ಈ ಚುನಾವಣೆಗಳಿಗೆ ಹಣ ಒದಗಿಸುವ ಸಲುವಾಗಿ ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕದಲ್ಲಿ ಲೂಟಿ ಮಾಡುತ್ತಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಭಾನುವಾರ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕವು "ತುಘಲಕ್ ಶೈಲಿಯ" ಆಡಳಿತದಲ್ಲಿದೆ, ಎಲ್ಲಾ ಸರ್ಕಾರಿ ಇಲಾಖೆಗಳಲ್ಲಿ ಶೇಕಡಾ 60 ರಷ್ಟು ಭ್ರಷ್ಟಾಚಾರದ ಆರೋಪಗಳಿವೆ, ವಸತಿ ಇಲಾಖೆಯಿಂದ ಪ್ರಯೋಜನ ಪಡೆಯಲು ಬಡವರು ಕಮಿಷನ್ ಪಾವತಿಸುವಂತಾಗಿದೆ. ಇದು ನಿಜಕ್ಕೂ ದುರಾದೃಷ್ಟಕರ ಸಂಗತಿ ಎಂದು ಹೇಳಿದರು.

ಹೈಕಮಾಂಡ್‌ಗೆ ಕಪ್ಪ ಕಾಣಿಕೆ ಸಲ್ಲಿಸಲು ರಾಜ್ಯ ಸರ್ಕಾರದಿಂದ ಲೂಟಿ ನಡೆಯುತ್ತಿದೆ. 60 ಪರ್ಸೆಂಟೇಜ್‌ನ ಈ ಸರ್ಕಾರದಲ್ಲಿ ಪ್ರತಿ ಇಲಾಖೆ ಯಲ್ಲೂ ಭ್ರಷ್ಟಾಚಾರ ನಡೀತಿದೆ. ಬಡವರಿಗೆ ಮನೆ ಹಂಚಿಕೆ ಮಾಡಲು ಹಣ ವಸೂಲಿ ಮಾಡುತ್ತಿದ್ದಾರೆ. ಶೇ.36ರಷ್ಟು ಹಣವನ್ನು ವಸತಿ ಇಲಾಖೆಯಲ್ಲೂ ಕೇಳುತ್ತಿದ್ದಾರೆ. ಅಬಕಾರಿ ಇಲಾಖೆ ಯಲ್ಲೂ ಲೂಟಿ ಮಾಡಿದ್ದಾರೆ. ವಾಲ್ಮೀಕಿ ಹಗರಣ, ಮುಡಾ ಹಗರಣದಲ್ಲೂ ಲೂಟಿ ಆಯಿತು. ಮುಖ್ಯಮಂತ್ರಿಯಿಂದ ಎಲ್ಲಾ ಸಚಿವರವರೆಗೂ ಲೂಟಿ ಮಾಡುವ ಕೆಲಸಕ್ಕೆ ಇಳಿದಿದ್ದಾರೆ ಎಂದು ಅವರು ವಾಗ್ದಾಳಿ ನಡೆಸಿದರು.

ಹೈಕಮಾಂಡ್‌ಗೆ ಕಪ್ಪ ಕಾಣಿಕೆ ನೀಡಲು ನಾ ಮುಂದು, ತಾ ಮುಂದು ಎಂದು ಎಲ್ಲರೂ ನಿಂತಿದ್ದಾರೆ. ಹೈಕಮಾಂಡ್‌ಗೆ ಯಾರು ಜಾಸ್ತಿ ಕಪ್ಪ ಕಾಣಿಕೆ ನೀಡುತ್ತಾರೋ ಅವರಿಗೆ ಬೆಲೆ ಜಾಸ್ತಿ. ಬಿಹಾರ ಸೇರಿದಂತೆ ಬೇರೆ ರಾಜ್ಯಗಳ ಚುನಾವಣೆಗಾಗಿ ಕರ್ನಾಟಕದಿಂದ ಲೂಟಿ ಮಾಡಲಾಗುತ್ತಿದೆ ಎಂದು ಕಿಡಿಕಾರಿದರು.

ಇದೇ ವೇಳೆ ರಾಜ್ಯ ಸರ್ಕಾರದ ಈ ಭ್ರಷ್ಟಾಚಾರದ ವಿರುದ್ಧ ರಾಜ್ಯಾದ್ಯಂತ ಹೋರಾಟ ನಡೆಸಲಿದ್ದೇವೆಂದ ಅವರು, ಮುಖ್ಯಮಂತ್ರಿಗೆ ಗೌರವವಿದ್ದರೆ ಇಷ್ಟೊತ್ತಿಗೆ ಸಚಿವರ ರಾಜೀನಾಮೆ ಪಡೆಯಬೇಕಿತ್ತು ಎಂದು ಹೇಳಿದರು.

R.Ashok
ಕಾಂಗ್ರೆಸ್ ಸಿಎಂ ಕುರ್ಚಿ ಜಟಾಪಟಿ, ಸರ್ಕಾರದ ಪತನಕ್ಕೆ ಕಾರಣವಾಗುತ್ತದೆ: ಆರ್.ಅಶೋಕ್

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com