
ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಕಲಹವಿಲ್ಲ. ಸಚಿವ ಕೆ.ಎನ್.ರಾಜಣ್ಣ ಹೇಳಿಕೆಯನ್ನು ನಿರ್ಲಕ್ಷಿಸಿ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ವಿಧಾನಸೌಧಲ್ಲಿ ನಾಡಪ್ರಭು ಕೆಂಪೇಗೌಡರ 516ನೇ ಜಯಂತಿಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಬಳಿಕ ಮಾತನಾಡಿದ ಅವರು, ಪಕ್ಷದಲ್ಲಿ ಆಂತರಿಕ ಜಗಳ ಇರುವ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದರು. ಸಚಿವ ಕೆ.ಎನ್.ರಾಜಣ್ಣ ಅವರು ರಾಜ್ಯ ರಾಜಕೀಯದಲ್ಲಿ ಬೆಳವಣಿಗೆಯಾಗಬಹುದು ಎಂದು ಹೇಳಿದ್ದಾರೆ. ಇಂಥದ್ದೇ ಆಗುತ್ತದೆ ಎಂದು ಹೇಳಿಲ್ಲ ಎಂದರು.
ಸೆಪ್ಟೆಂಬರ್ ನಲ್ಲಿ ಕ್ರಾಂತಿಯಾಗಲಿದೆ, ಸರ್ಕಾರದಲ್ಲಿ ಪವರ್ ಸೆಂಟರ್ ಜಾಸ್ತಿಯಾಗಿವೆ ಎಂಬ ಸಚಿವ ರಾಜಣ್ಣ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿ.ಕೆ ಶಿವಕುಮಾರ್ ನನಗೆ ಈ ವಿಚಾರ ಗೊತ್ತಿಲ್ಲ. ನೀವು ಅವರನ್ನೇ ಕೇಳಿ. ನಾವು ಅವರ ಜೊತೆ ಚರ್ಚೆ ಮಾಡಿದ ನಂತರ ಪ್ರತಿಕ್ರಿಯೆ ನೀಡುತ್ತೇನೆ ಎಂದು ತಿಳಿಸಿದರು.
ಇನ್ನೂ ಕೆಎನ್ ರಾಜಣ್ಣ ವಿಷಯವಾಗಿ ಮಾತನಾಡಿದ ಮಾಜಿ ಸಂಸದ ಡಿ.ಕೆ ಸುರೇಶ್ “ರಾಜಣ್ಣ ಅವರು ಸರ್ಕಾರದ ಒಂದು ಭಾಗ. ಅವರು ಯಾವ ಅರ್ಥದಲ್ಲಿ ಹೇಳಿಕೆ ನೀಡಿದ್ದಾರೆ ಎಂಬುದು ನನಗೆ ಗೊತ್ತಿಲ್ಲ. ಯಾವ ಅರ್ಥದಲ್ಲಿ ಹೇಳಿದ್ದಾರೆ ಎಂದು ಅವರನ್ನೇ ಕೇಳಬೇಕೇ ಹೊರತು ಬೇರೆಯವರನ್ನಲ್ಲ” ಎಂದರು.
Advertisement