
ಮೈಸೂರು: ಈ ಬಾರಿಯ ದಸರಾ ಉತ್ಸವವನ್ನು ನೂತನ ಮುಖ್ಯಮಂತ್ರಿ ಉದ್ಘಾಟಿಸುತ್ತಾರೆ ಎಂಬ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರ ಹೇಳಿಕೆಗೆ ಸಚಿವ ಸಚಿವ ಹೆಚ್.ಸಿ.ಮಹದೇವಪ್ಪ ಅವರು ಭಾನುವಾರ ತಿರುಗೇಟು ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್ ಅಶೋಕ್ ಕಾಂಗ್ರೆಸ್ ಹೈ ಕಮಾಂಡ್ ಅಲ್ಲ. ಆರ್.ಅಶೋಕ್ ಕೇವಲ ವಿರೋಧ ಪಕ್ಷದ ನಾಯಕ ಅಷ್ಟೇ. ಅವರಿಗೂ ಕಾಂಗ್ರೆಸ್ ಪಕ್ಷಕ್ಕೂ ಏನು ಸಂಬಂಧ ಹೇಳಿ? ಆ ರೀತಿಯ ಯಾವ ಚರ್ಚೆಗಳೂ ನಡೆದಿಲ್ಲ. ಅಧಿಕಾರದ ಯಾವ ಒಪ್ಪಂಗಳಿದೆ ಎಂಬುದು ಯಾವುದು ನನ್ನ ಗಮನಕ್ಕೆ ಬಂದಿಲ್ಲ. ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿದ್ದಾರೆ. ಅವರೇ ದಸರಾ ಉದ್ಘಾಟನೆ ಮಾಡುತ್ತಾರೆ. ಅವರೇ ಸಿಎಂ ಸ್ಥಾನದಲ್ಲಿ ಇರುತ್ತಾರೆ. ಇದು ಸತ್ಯ. 5 ವರ್ಷವೂ ಕಾಂಗ್ರೆಸ್ ಸರ್ಕಾರ ಸ್ಥಿರವಾಗಿಯೇ ಇರುತ್ತದೆ ಎಂದು ಹೇಳಿದರು.
ನನ್ನ ಆತ್ಮ ವಿಶ್ವಾಸದ ಪ್ರಕಾರವೂ ಕಾಂಗ್ರೆಸ್ ಸರ್ಕಾರ ಗಟ್ಟಿಯಾಗಿರುತ್ತದೆ. ಸಿದ್ದರಾಮಯ್ಯ ಸಿಎಂ ಆಗಿದ್ದಾರೆ. ಮುಂದೆಯೂ ಸಿಎಂ ಆಗಿಯೇ ಇರುತ್ತಾರೆ. ಆನೆ ಹೋಗುತ್ತಿರುತ್ತದೆ ಅದನೋ ಬೀಳುತ್ತೆ ಅಂತ ಕಾಯುವ ಸ್ಥಿತಿಯಲ್ಲಿ ಬಿಜೆಪಿ ಇದೆ. ಅದು ಬೀಳುವುದಿಲ್ಲ ಇವರು ಕಾಯುವುದು ಬಿಡುವುದಿಲ್ಲ.
ಶಾಸಕರುಗಳು ಯಾವ ಅರ್ಥದಲ್ಲಿ ಮೂರು ತಿಂಗಳಲ್ಲಿ ಕ್ರಾಂತಿ ಎಂದು ಹೇಳಿದ್ದಾರೆ ಅವರನ್ನೇ ಕೇಳಿ. ಕೆಲವು ಶಾಸಕರು ಅವರವರ ಅನೂಕಲಕ್ಕೆ ತಕ್ಕಂತೆ ಹೇಳಿಕೆ ನೀಡಿರಬಹುದು. ಅದಕ್ಕೂ ನಮಗೂ ಸಂಬಂಧ ಇಲ್ಲ. ರಾಜಕೀಯವಾಗಿ ಕ್ರಾಂತಿಗಳು ಯಾವಾಗಲೂ ನಡೆಯುತ್ತಿರುತ್ತದೆ. ಸಂಕ್ರಾಂತಿಯನ್ನು ಜೋರಾಗಿ ಮಾಡೋಣ ಬಿಡಿ ಎಂದು ವ್ಯಂಗ್ಯವಾಡಿದರು.
ಈ ನಡುವೆ ಸಚಿಚವರು ಚಾಮುಂಡಿ ಬೆಟ್ಟದಲ್ಲಿ ಆಷಾಢ ಮಾಸಾಚರಣೆ ಪ್ರಯುಕ್ತ ದೇವಸ್ಥಾನಕ್ಕೆ ತೆರಳಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದರು. ಆಷಾಢ ಮಾಸದ ದರ್ಶನಕ್ಕೆ ಭಕ್ತರಿಗೆ ಮಾಡಿರುವ ವ್ಯವಸ್ಥೆಯನ್ನು ಪರಿಶೀಲನೆ ನಡೆಸಿದರು.
ಈ ವೇಳೆ ಭಕ್ತರಿಗೆ ಯಾವುದೇ ಅನಾನುಕೂಲತೆ ಉಂಟಾಗದಂತೆ ನೋಡಿಕೊಳ್ಳಲು ಮುಂಬರುವ ವಾರಗಳಲ್ಲಿ ಕೆಲವು ಸಣ್ಣಪುಟ್ಟ ಲೋಪಗಳನ್ನು ಸರಿಪಡಿಸುವಂಚೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
Advertisement