Congress MLA ಗಳಿಗೆ ಸುರ್ಜೆವಾಲಾ ಬುಲಾವ್: ಸಿಎಂ ಬದಲಾವಣೆ ಕುರಿತಂತೆ ಶಾಸಕರ ಮನಸ್ಥಿತಿ ಅರಿತು ಹೈಕಮಾಂಡ್ ಗೆ ರಿಪೋರ್ಟ್ ಕಾರ್ಡ್ ಸಲ್ಲಿಕೆ!

ಸರ್ಕಾರ ಮತ್ತು ಸಚಿವರ ಕಾರ್ಯಕ್ಷಮತೆ ಮೌಲ್ಯಮಾಪನ ಮಾಡಲು ಈ ಚರ್ಚೆ ನಿರ್ಣಾಯಕವಾಗಿದೆ, ಇದರಿಂದಾಗಿ ಹೈಕಮಾಂಡ್ ಸಿದ್ದರಾಮಯ್ಯ ಸಚಿವ ಸಂಪುಟವನ್ನು ಪುನರ್ರಚಿಸಬೇಕೆ ಅಥವಾ ಮುಖ್ಯಮಂತ್ರಿ ಬದಲಾವಣೆ ತರಬೇಕೆ ಎಂದು ನಿರ್ಧರಿಸಬಹುದು ಎಂದು ಮೂಲಗಳು ತಿಳಿಸಿವೆ.
 Siddaramaiah, Randeep Singh Surjewala, DK Shivakumar
ರಣದೀಪ್ ಸುರ್ಜೇವಾಲಾ. ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್
Updated on

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಆಡಳಿತಾರೂಢ ಸರ್ಕಾರದ ವಿರುದ್ಧ ಕೆಲವು ಕಾಂಗ್ರೆಸ್ ಶಾಸಕರು ಧ್ವನಿ ಎತ್ತುತ್ತಿದ್ದು, ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಇಂದಿನಿಂದ ಮೂರು ದಿನಗಳ ಕಾಲ ರಾಜ್ಯ ರಾಜಧಾನಿಯಲ್ಲಿ ಮೊಕ್ಕಾಂ ಹೂಡಿ ಅವರ ಅಹವಾಲುಗಳನ್ನು ಆಲಿಸುತ್ತಿದ್ದಾರೆ.

ಸರ್ಕಾರದಲ್ಲಿ ನಾಯಕತ್ವ ಬದಲಾವಣೆ ಮತ್ತು ಕೆಪಿಸಿಸಿ ಅಧ್ಯಕ್ಷ ಹುದ್ದೆಯ ಬಗ್ಗೆ ಊಹಾಪೋಹಗಳ ನಡುವೆ, ಸುರ್ಜೇವಾಲಾ ಅವರು ಶಾಸಕರ ಮನಸ್ಥಿತಿಯನ್ನು ಅರಿತು ಪಕ್ಷದ ಹೈಕಮಾಂಡ್‌ಗೆ ವರದಿ ಮಾಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಸರ್ಕಾರ ಮತ್ತು ಸಚಿವರ ಕಾರ್ಯಕ್ಷಮತೆ ಮೌಲ್ಯಮಾಪನ ಮಾಡಲು ಈ ಚರ್ಚೆ ನಿರ್ಣಾಯಕವಾಗಿದೆ, ಇದರಿಂದಾಗಿ ಹೈಕಮಾಂಡ್ ಸಿದ್ದರಾಮಯ್ಯ ಸಚಿವ ಸಂಪುಟವನ್ನು ಪುನರ್ರಚಿಸಬೇಕೆ ಅಥವಾ ಮುಖ್ಯಮಂತ್ರಿ ಬದಲಾವಣೆ ತರಬೇಕೆ ಎಂದು ನಿರ್ಧರಿಸಬಹುದು ಎಂದು ಮೂಲಗಳು ತಿಳಿಸಿವೆ.

ಪ್ರತಿದಿನ, ಸುರ್ಜೇವಾಲಾ ಸುಮಾರು ನಲವತ್ತು ಶಾಸಕರನ್ನು ಭೇಟಿಯಾಗುತ್ತಾರೆ, ಪ್ರತಿಯೊಬ್ಬರೊಂದಿಗೆ ಸರಾಸರಿ ಇಪ್ಪತ್ತು ನಿಮಿಷಗಳನ್ನು ನಿಗದಿ ಪಡಿಸಲಾಗಿದೆ. ಮೂರು ದಿನಗಳ ಅವಧಿಯಲ್ಲಿ ಎಲ್ಲಾ 137 ಶಾಸಕರನ್ನು ಭೇಟಿ ಮಾಡುವ ನಿರೀಕ್ಷೆಯಿದೆ. ಶಾಸಕರು ತಮ್ಮ ತಮ್ಮ ಕ್ಷೇತ್ರಗಳಿಗೆ ಅಭಿವೃದ್ಧಿ ನಿಧಿಯ ಕೊರತೆ ಮತ್ತು ಸಚಿವರ ಅಸಹಕಾರದಂತಹ ವಿಷಯಗಳ ಬಗ್ಗೆ ಪ್ರಸ್ತಾಪಿಸುವ ಸಾಧ್ಯತೆಯಿದೆ. ಸುರ್ಜೇವಾಲಾ ಅವರು ಖಾತರಿಗಳ ಅನುಷ್ಠಾನ ಮತ್ತು ತಳಮಟ್ಟದಲ್ಲಿ ಪಕ್ಷದ ಸಂಘಟನಾ ಬಲದ ಬಗ್ಗೆ ಮಾಹಿತಿಯನ್ನು ಸಂಗ್ರಹಿಸುವ ನಿರೀಕ್ಷೆಯಿದೆ.

 Siddaramaiah, Randeep Singh Surjewala, DK Shivakumar
ಕಾಂಗ್ರೆಸ್ ಪಾಳಯದಲ್ಲಿ ಅಸಮಾಧಾನ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್ ಮುಂದು; 42 ಮಂದಿ ಶಾಸಕರೊಂದಿಗೆ ಸುರ್ಜೇವಾಲಾ ಮುಖಾಮುಖಿ ಚರ್ಚೆ

ಶಾಸಕರ ಜೊತೆಗೆ, ಅವರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಬಯಸುವ ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡುವ ಸಾಧ್ಯತೆಯಿದೆ. ಇತ್ತೀಚೆಗೆ ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರದ ಆರೋಪ ಮಾಡುವ ಮೂಲಕ ವಿವಾದ ಹುಟ್ಟುಹಾಕಿದ ಸಿದ್ದರಾಮಯ್ಯ ಆಪ್ತರಾದ ಹಿರಿಯ ನಾಯಕ ಬಿ.ಆರ್. ಪಾಟೀಲ್ ಅವರೊಂದಿಗೆ ಚರ್ಚೆ ಆರಂಭವಾಗಲಿದೆ.

ಪಾಟೀಲ್ ಅವರನ್ನು ಬೆಂಬಲಿಸಿದ, ಶಾಸಕ ರಾಜು ಕಾಗೆ ಅವರು ಸರ್ಕಾರದಿಂದ ಅನುಮೋದಿತ ಅಭಿವೃದ್ಧಿ ಕಾರ್ಯಗಳಿಗೆ ಕೆಲಸದ ಆದೇಶಗಳನ್ನು ನೀಡುವಲ್ಲಿ ವಿಳಂಬವಾಗಿದೆ ಎಂದು ಆರೋಪಿಸಿದರು. ಹೈಕಮಾಂಡ್‌ನ ಸೂಚನೆಗಳನ್ನು ಅನುಸರಿಸಿ, ಸಿದ್ದರಾಮಯ್ಯ ಅವರಿಬ್ಬರನ್ನೂ ಮತ್ತು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಈ ವಿಷಯದ ಬಗ್ಗೆ ಪ್ರತ್ಯೇಕ ಚರ್ಚೆಗೆ ಕರೆದಿದ್ದರು.

ಇತ್ತೀಚೆಗೆ, ಸಹಕಾರ ಸಚಿವ ಕೆ.ಎನ್. ರಾಜಣ್ಣ ಸೆಪ್ಟೆಂಬರ್ ನಂತರ ರಾಜ್ಯ ರಾಜಕೀಯದಲ್ಲಿ "ಕ್ರಾಂತಿ" ನಡೆಯಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ವಿಶ್ಲೇಷಕರು ಇದನ್ನು ಪಕ್ಷದ ಹೈಕಮಾಂಡ್‌ಗೆ ಪರೋಕ್ಷ ಸಂದೇಶ ಎಂದು ವ್ಯಾಖ್ಯಾನಿಸುತ್ತಾರೆ, ಏಕೆಂದರೆ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯಾಗಿ ಎರಡೂವರೆ ವರ್ಷ ಪೂರೈಸಿದ ನಂತರ ಅಕ್ಟೋಬರ್‌ನಲ್ಲಿ ರಾಜೀನಾಮೆ ನೀಡಿದರೆ ಅದು ರಾಜಕೀಯ ಬೆಳವಣಿಗೆಗಳಿಗೆ ಕಾರಣವಾಗಬಹುದು ಎಂದು ಹೇಳಲಾಗುತ್ತಿದೆ.

ಆದರೆ, ಸಿದ್ದರಾಮಯ್ಯ ಅವರ ಪುತ್ರ, ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ, ತಮ್ಮ ತಂದೆಗೆ ರಾಜೀನಾಮೆ ನೀಡುವಂತೆ ಹೈಕಮಾಂಡ್ ಯಾವುದೇ ಸೂಚನೆ ನೀಡಿಲ್ಲ ಮತ್ತು ಅವರು ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎಂದು ಹೇಳಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ನಿಷ್ಠಾವಂತ ಮತ್ತು ರಾಮನಗರ ಶಾಸಕ ಇಕ್ಬಾಲ್ ಹುಸೇನ್, ಎರಡೂವರೆ ವರ್ಷಗಳ ನಂತರ ನಾಯಕತ್ವದಲ್ಲಿ ಬದಲಾವಣೆಯಾಗಬೇಕು ಎಂದು ಹೈಕಮಾಂಡ್ ಮಟ್ಟದಲ್ಲಿ ಒಪ್ಪಂದವಾಗಿದೆ ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ಅಧಿಕಾರ ಹಸ್ತಾಂತರಿಸಬೇಕು, ಮತ್ತು ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಾರೆ, ಏಕೆಂದರೆ ಹೈಕಮಾಂಡ್ ಎರಡರಿಂದ ಮೂರು ತಿಂಗಳಲ್ಲಿ ನಿರ್ಧಾರ ತೆಗೆದುಕೊಳ್ಳುವ ನಿರೀಕ್ಷೆಯಿದೆ ಎಂದು ಅವರು ಹೇಳಿದರು.

"ನನ್ನ ಕ್ಷೇತ್ರದ ಅಭಿವೃದ್ಧಿಗಾಗಿ ನಿಧಿಯ ಕುರಿತು ಮತ್ತು ಸರ್ಕಾರ ಮತ್ತು ಸಚಿವರ ಬಗ್ಗೆ ನನ್ನ ಅಭಿಪ್ರಾಯವನ್ನು ವ್ಯಕ್ತಪಡಿಸಲು ಇಂದು ಸುರ್ಜೇವಾಲಾ ಅವರನ್ನು ಭೇಟಿ ಮಾಡಲು ನಾನು ಉತ್ಸುಕನಾಗಿದ್ದೇನೆ. ಆದಾಗ್ಯೂ, ರಾಜ್ಯವನ್ನು ಬೇರೆ ಯಾವುದೇ ನಾಯಕರು ನಿರ್ವಹಿಸಲು ಸಾಧ್ಯವಿಲ್ಲದ ಕಾರಣ, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಮುಂದುವರಿಯಬೇಕೆಂದು ನಾನು ಬಯಸುತ್ತೇನೆ" ಎಂದು ಹಳೆ ಮೈಸೂರು ಪ್ರದೇಶದ ಹಿರಿಯ ಶಾಸಕರೊಬ್ಬರುದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com