ಕಾಂಗ್ರೆಸ್ ಆಂತರಿಕ ಬಿಕ್ಕಟ್ಟು: ಸಿದ್ದರಾಮಯ್ಯ ಅಧಿಕಾರ ಅಂತ್ಯ ಸನಿಹಕ್ಕೆ?; ದಲಿತ ಸಿಎಂ ಕೂಗು ಮತ್ತೆ ಮುನ್ನೆಲೆಗೆ!

ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಇತ್ತೀಚೆಗೆ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ನಡೆಸಿದ ಮಾತುಕತೆಗಳು ಈ ಊಹಾಪೋಹಗಳಿಗೆ ಪುಷ್ಟಿ ನೀಡಿದೆ.
CM Siddaramaiah
ಮುಖ್ಯಮಂತ್ರಿ ಸಿದ್ದರಾಮಯ್ಯ
Updated on

ಬೆಂಗಳೂರು: ಕಳೆದ 2 ವಾರಗಳಿಂದ ರಾಜ್ಯ ಕಾಂಗ್ರೆಸ್ ಅಲ್ಲೋಲ ಕಲ್ಲೋಲಗೊಂಡಿದೆ. ಶಾಸಕ ಬಿಆರ್ ಪಾಟೀಲ್, ರಾಜೂ ಕಾಗೆ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದರಿಂದ ಕಾಂಗ್ರೆಸ್ ಪಕ್ಷ ಮುಜುಗರಕ್ಕೊಳಗಾಗುವಂತಾಗಿದೆ. ಈ ನಡುವಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕಾರಾವಧಿಯ ಎರಡೂವರೆ ವರ್ಷಗಳು ಪೂರ್ಣಗೊಳ್ಳುವ ಹಂತದಲ್ಲಿದ್ದು, ದಲಿತ ಮುಖ್ಯಮಂತ್ರಿ ಕೂಗು ಮತ್ತೆ ಮುನ್ನೆಲೆಗೆ ಬರುವ ಸಾಧ್ಯತೆಗಳಿವೆ.

ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಇತ್ತೀಚೆಗೆ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ನಡೆಸಿದ ಮಾತುಕತೆಗಳು ಈ ಊಹಾಪೋಹಗಳಿಗೆ ಪುಷ್ಟಿ ನೀಡಿದಂತಾಗಿದೆ.

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಮುಂದುವರಿಯಲು ತಮ್ಮ ಕೈಲಾದಷ್ಟು ಪ್ರಯತ್ನ ನಡೆಸುತ್ತಿದ್ದಾರೆ. ಆದರೆ, ಬದಲಾವಣೆ ಪರಿಸ್ಥಿತಿ ಉದ್ಭವಿಸಿದ್ದೇ ಆದರೆ, ಸರ್ಕಾರದ ಮೇಲಿನ ತಮ್ಮ ಹಿಡಿತವನ್ನು ಬಿಡದಿರಲು ಪರಮೇಶ್ವರ ಅವರನ್ನು ತಮ್ಮ ಉತ್ತರಾಧಿಕಾರಿಯಾಗಿ ಹೆಸರಿಸಲು ಚಿಂತನೆ ನಡೆಸಿದ್ದಾರೆಂದು ನವದೆಹಲಿಗೆ ಭೇಟಿ ನೀಡಿದ ಹಿರಿಯ ಕಾಂಗ್ರೆಸ್ ನಾಯಕರೊಬ್ಬರು ಹೇಳಿದ್ದಾರೆ.

ಮೂಲಗಳ ಪ್ರಕಾರ, ರಾಷ್ಟ್ರ ರಾಜಧಾನಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಜೊತೆ ಮಾತುಕತೆ ನಡೆಸಿದ ಸಿದ್ದರಾಮಯ್ಯ ಅವರು, ಈ ಮಾತುಕತೆ ಕುರಿತು ಪರಮೇಶ್ವರ್ ಹಾಗೂ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಮಾಹಿತಿ ನೀಡಿರಬಹುದು. ಈ ಮೂಲಕ ಸಿದ್ದು ಪರವಾಗಿರುವ ನಾಯಕರು ಪರಿಸ್ಥಿತಿಗಳ ಎದುರಿಸಲು ಸಿದ್ಧತೆ ಆರಂಭಿಸಿದ್ದಾರೆಂದು ತಿಳಿದುಬಂದಿದೆ.

ಈ ನಡುವೆ ಅಕ್ಟೋಬರ್ ವೇಳೆಗೆ ರಾಜ್ಯಕ್ಕೆ ಹೊಸ ಸಿಎಂ ಬರಲಿದ್ದಾರೆಂಬ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಎಂಬಿ.ಪಾಟೀಲ್ ಅವರು, ಅಶೋಕ್ ಮೊದಲು ತಮ್ಮ ಹುದ್ದೆಯನ್ನು ಉಳಿಸಿಕೊಳ್ಳಲಿ. ಹೈಕಮಾಂಡ್ ಮತ್ತು ಸಿಡಬ್ಲ್ಯೂಸಿ ನಿರ್ಧಾರ ತೆಗೆದುಕೊಳ್ಳುವುದರಿಂದ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಕುರಿತು ಯಾವುದೇ ಬೆಳವಣಿಗೆಗಳಾಗುತ್ತಿಲ್ಲ ಎಂದು ಹೇಳಿದ್ದಾರೆ.

CM Siddaramaiah
2028 ರವರೆಗೆ ದಲಿತ ಸಿಎಂ ಬಗ್ಗೆ ಧ್ವನಿ ಎತ್ತುವುದು ಬೇಡ: ಸತೀಶ್ ಜಾರಕಿಹೊಳಿ

ಏತನ್ಮಧ್ಯೆ, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ​​ಮುನಿಯಪ್ಪ ಮಾತನಾಡಿ, ದಲಿತ ಸಿಎಂ ವಿಷಯದ ಕುರಿತ ಚರ್ಚೆ ಬೇಡ, ಅದು ಹಳೆಯ ವಿಚಾರ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರೇಸ್‌ನಲ್ಲಿದ್ದಾಗಿನಿಂದಲೂ ಈ ಬಗ್ಗೆ ಮಾತನಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

2023 ರಲ್ಲಿ ಪಕ್ಷ ಅಧಿಕಾರಕ್ಕೆ ಬಂದಾಗ ಮುನಿಯಪ್ಪ ಖರ್ಗೆ ಅವರ ಹೆಸರನ್ನು ಪ್ರಸ್ತಾಪಿಸಿದ್ದರು. ಆದರೆ, ಈಗ ಖರ್ಗೆ ರಾಜ್ಯ ರಾಜಕೀಯಕ್ಕೆ ಮರಳುವ ಸಾಧ್ಯತೆಗಳು ದೂರವಿದೆ. ಪಕ್ಷದಲ್ಲಿ ಬದಲಾವಣೆಗಳು ಅನಿವಾರ್ಯವಿದ್ದು, ನಾಯಕರು ದಲಿತ ನಾಯಕನ ಹೆಸರನ್ನು ಪ್ರಸ್ತಾಪಿಸುತ್ತಾರೋ ಇಲ್ಲವೋ ಎಂಬುದನ್ನು ಕಾದು ನೋಡಬೇಕು ಎಂದು ಕಾಂಗ್ರೆಸ್ ನಾಯಕರೊಬ್ಬರು ಹೇಳಿದ್ದಾರೆ.

ಈ ನಡುವೆ ಡಿಕೆ.ಶಿವಕುಮಾರ್ ಅವರ ನಿಷ್ಠಾವಂತ ಮತ್ತು ರಾಮನಗರ ಶಾಸಕ ಇಕ್ಬಾಲ್ ಹುಸೇನ್, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಮುಂದಿನ ಎರಡು ಮೂರು ತಿಂಗಳಲ್ಲಿ ರಾಜ್ಯದ ಮುಖ್ಯಮಂತ್ರಿಯಾಗುವ ಅವಕಾಶ ಸಿಗಬಹುದು ಎಂದು ಹೇಳಿದ್ದರೆ, ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ. ಮಹದೇವಪ್ಪ ಅವರು ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎಂದು ಪ್ರತಿಪಾದಿಸಿದ್ದಾರೆ.

ಪರಮೇಶ್ವರ ಅವರು ಡಿಕೆ.ಶಿವಕುಮಾರ್ ಅವರನ್ನು ಭೇಟಿಯಾದಾಗ ನಾಲ್ಕು ಎಂಎಲ್‌ಸಿಗಳ ನಾಮನಿರ್ದೇಶನ ಸೇರಿದಂತೆ ಇತರ ವಿಷಯಗಳ ಬಗ್ಗೆ ಚರ್ಚಿಸಿರಬಹುದು, ಇದಕ್ಕೆ ಹೈಕಮಾಂಡ್ ಅನುಮೋದನೆಗಾಗಿ ಕಾಯಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಕೌನ್ಸಿಲ್ ಸ್ಥಾನಕ್ಕೆ ತಮ್ಮ ನಿಷ್ಠಾವಂತ ಮತ್ತು ಹಿಂದುಳಿದ ಸಮುದಾಯದ ನಾಯಕ ಎಂಸಿ ವೇಣುಗೋಪಾಲ್ ಅವರಿಗೆ ಸ್ಥಾನ ಒದಗಿಸಲು ಪರಮೇಶ್ವರ್ ಅವರು ಯತ್ನಿಸುತ್ತಿದ್ದಾರೆಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com