
ಮೈಸೂರು: ರಾಜಕಾರಣದಲ್ಲಿ ಯಾವುದೂ ನಿಂತ ನೀರಲ್ಲ. ಕರ್ನಾಟಕದ ಆಡಳಿತ ಪಕ್ಷದಲ್ಲಿ ಏಕನಾಥ ಶಿಂದೆ ಯಾರೆಂಬುದು ಸದ್ಯದಲ್ಲೇ ಗೊತ್ತಾಗಲಿದೆ, ರಾಜ್ಯದಲ್ಲಿ ಏಕನಾಥ ಶಿಂಧೆ ಎಪಿಸೋಡ್ ಮರುಕಳಿಸಿದರೆ ಆಶ್ಚರ್ಯಪಡಬೇಕಿಲ್ಲ ಎಂದು ಬಿಜೆಪಿ ಮುಖಂಡ ಬಿ.ಶ್ರೀರಾಮುಲು ಹೇಳಿದರು.
ಮೈಸೂರಿನಲ್ಲಿ ಮಾತನಾಡಿದ ಅವರು, ವೀರೇಂದ್ರ ಪಾಟೀಲ, ಡಿ.ದೇವರಾಜ ಅರಸು ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ್ದನ್ನು ನೋಡಿದ್ದೇವೆ. ಮಹಾರಾಷ್ಟ್ರದಲ್ಲಿ ಕಂಡ ಕ್ಷಿಪ್ರ ರಾಜಕಾರಣವನ್ನೂ ರಾಜ್ಯದಲ್ಲೂ ನೋಡಲಿದ್ದೇವೆ’ ರಾಜ್ಯ ರಾಜಕೀಯದಲ್ಲಿಯೂ ಇಂತಹ ಬೆಳವಣಿಗೆಗಳು ಮತ್ತೆ ಪುನರಾವರ್ತನೆಯಾಗುವ ಸಾಧ್ಯತೆಗಳಿವೆ ಎಂದು ಅವರು ಹೇಳಿದರು.
ಒಂದು ವೇಳೆ ಅಂತಹ ಬೆಳವಣಿಗೆಗಳು ನಡೆದರೇ, ಅಂತಹ ನಾಯಕನನ್ನು ಬೆಂಬಲಿಸಬೇಕೆ ಎಂದು ನಿರ್ಧರಿಸುವುದು ಬಿಜೆಪಿ ಹೈಕಮಾಂಡ್‌ಗೆ ಬಿಟ್ಟದ್ದು ಎಂದು ಹೇಳಿದರು. ಜಾತಿ ಜನಗಣತಿ ವರದಿಯ ಬಗ್ಗೆ ಕೇಳಿದಾಗ, ಅನೇಕರು ಇದರಿಂದ ಅಸಮಾಧಾನಗೊಂಡಿದ್ದಾರೆ ಮತ್ತು ಇದು ಶೀಘ್ರದಲ್ಲೇ ಬಹಿರಂಗಗೊಳ್ಳಲಿದೆ ಎಂದು ಶ್ರೀರಾಮುಲು ಹೇಳಿದರು.
ರಾಜ್ಯ ಬಿಜೆಪಿ ಘಟಕದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳು ಅಥವಾ ಗುಂಪುಗಾರಿಕೆ ಇಲ್ಲ ಎಂದರು. ಬೆಂಗಳೂರಿನಲ್ಲಿ ಸಭೆ ನಡೆಸುವ ಬಂಡಾಯ ನಾಯಕರ ಯೋಜನೆ ಬಗ್ಗೆ ಪ್ರತಿಕ್ರಿಯಿಸಿದ ಅವರು ಹೈಕಮಾಂಡ್ ಎಲ್ಲಾ ಭಿನ್ನಾಭಿಪ್ರಾಯಗಳನ್ನು ನಿವಾರಿಸುತ್ತದೆ ಮತ್ತು ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಒಗ್ಗಟ್ಟಿನ ಹೋರಾಟವನ್ನು ನಡೆಸುತ್ತದೆ ಎಂದು ಅವರು ಹೇಳಿದರು.
Advertisement