
ಬೆಂಗಳೂರು: ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕರಾಗಿ ಬಿಜೆಪಿ ಎಂಎಲ್ ಸಿ ಎನ್.ರವಿ ಕುಮಾರ್ ಅವರನ್ನು ಸೋಮವಾರ ನೇಮಕ ಮಾಡಲಾಗಿದೆ.
ಇಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಪತ್ರ ಬರೆದು ಮಾಹಿತಿ ನೀಡಿದ್ದಾರೆ.
ಛಲವಾದಿ ನಾರಾಯಣಸ್ವಾಮಿ ಅವರು ಬರೆದಿರುವ ಪತ್ರದಲ್ಲಿ ಕರ್ನಾಟಕ ವಿಧಾನ ಪರಿಷತ್ ಸದಸ್ಯರಾದಂತ ರವಿಕುಮಾರ್. ಎನ್ ಅವರನ್ನು ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕರಾಗಿ ನೇಮಿಸಿರುವುದಾಗಿ ತಿಳಿಸಿದ್ದಾರೆ.
ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕರಾಗಿ ನೇಮಕಗೊಂಡ ರವಿಕುಮಾರ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಭಿನಂದಿಸಿದ್ದಾರೆ.
Advertisement