
ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶುಕ್ರವಾರ ವಿಧಾನಸಭೆಯಲ್ಲಿ ರಾಜ್ಯ ಬಜೆಟ್ ಮಂಡನೆಗೂ ಮುನ್ನ ಬಿಜೆಪಿಯನ್ನು ತೀವ್ರವಾಗಿ ಟೀಕಿಸಿದರು.
'ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ರಾಜ್ಯಕ್ಕಾಗಿ ಏನು ಕೊಡುಗೆ ನೀಡಿದೆ ಎಂದು ಉತ್ತರಿಸಬೇಕು. ಅವರಿಗೆ ಕರ್ನಾಟಕವನ್ನು ಉಳಿಸುವ ಧೈರ್ಯ, ಧ್ವನಿ, ಶಕ್ತಿ ಮತ್ತು ನೈತಿಕ ಹಕ್ಕಿಲ್ಲ. ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಏನನ್ನೂ ನೀಡಿಲ್ಲ. ಕರ್ನಾಟಕದ ಕಾಂಗ್ರೆಸ್ ಸರ್ಕಾರ ಜನರನ್ನು ರಕ್ಷಿಸುತ್ತಿದೆ ಮತ್ತು ತಾನು ಕೊಟ್ಟ ಎಲ್ಲ ಭರವಸೆಗಳನ್ನು ಈಡೇರಿಸಿದೆ' ಎಂದು ಹೇಳಿದರು.
'ಅವರು ಏನು ಬೇಕಾದರೂ ಮಾಡಲಿ. ಅದು ಅವರ ಇಚ್ಛೆ ಮತ್ತು ಕರ್ನಾಟಕದ ಜನರನ್ನು ರಕ್ಷಿಸಲು ನಾವಿದ್ದೇವೆ. ಅದು ಅವರ ಬಜೆಟ್ ಮತ್ತು ಅವರ ಅಧಿಕಾರಾವಧಿಯಂತಲ್ಲ. ನಾವು ನೀಡಿದ ಎಲ್ಲ ಭರವಸೆಗಳನ್ನು ಈಡೇರಿಸಲಾಗಿದೆ' ಎಂದು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ರಾಜ್ಯ ಬಜೆಟ್ ಮಂಡಿಸುತ್ತಿದ್ದಾರೆ. ಬಜೆಟ್ ಮಂಡನೆಗೂ ಮುನ್ನ ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ದಾಖಲೆಯೊಂದಿಗೆ ವಿಧಾನಸೌಧಕ್ಕೆ ಆಗಮಿಸಿದರು. ಅವರೊಂದಿಗೆ ಅವರ ಸಂಪುಟ ಸದಸ್ಯರು ಇದ್ದರು.
ಈ ವೇಳೆ ಸುದ್ದಿಗಾರರ ಜೊತೆ ಮಾತನಾಡಿದ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್, 'ಇದು ಸಿದ್ದರಾಮಯ್ಯ ಅವರ ಕೊನೆಯ ಬಜೆಟ್ ಆಗಿದ್ದು, ಅವರು ನಿರ್ಗಮಿತ ಮುಖ್ಯಮಂತ್ರಿಯಾಗಿದ್ದಾರೆ'ಎಂದರು.
ಕಳೆದ ಎರಡು ವರ್ಷಗಳಲ್ಲಿ ಅವರು ಏನನ್ನೂ ಮಾಡಿಲ್ಲ... ಆಸ್ಪತ್ರೆಯಲ್ಲಿ ಔಷಧಿಗಳಿಲ್ಲ. ಪೆಟ್ರೋಲ್, ಡೀಸೆಲ್, ಹಾಲು ಎಲ್ಲದರ ಬೆಲೆ ಏರಿಕೆಯಾಗಿದೆ... ಕನಿಷ್ಠ ಈ ಬಜೆಟ್‌ನಲ್ಲಿ ಅಭಿವೃದ್ಧಿಗಾಗಿ ಅವರು ಘೋಷಣೆಗಳನ್ನು ಮಾಡಬೇಕು. ಅದು ನಮ್ಮ ಬೇಡಿಕೆಯಾಗಿದೆ' ಎಂದು ಎಲ್‌ಒಪಿ ಸುದ್ದಿಗಾರರಿಗೆ ತಿಳಿಸಿದರು.
Advertisement