ಅಣ್ಣಾಮಲೈ ಅವನೊಬ್ಬ.... ಆತನಿಗೆ ನಮ್ಮ ಬಲ ಏನು ಗೊತ್ತು: ಕಪ್ಪು ಬಾವುಟ ತೋರಿಸಿದ BJP ನಾಯಕನ ವಿರುದ್ಧ ಡಿಕೆ ಶಿವಕುಮಾರ್ ಲೇವಡಿ, Video!

ಕೇಂದ್ರ ಸರ್ಕಾರದ ಕ್ಷೇತ್ರ ಪುನರ್ವಿಂಗಡಣೆ ಪ್ರಸ್ತಾವನೆಯನ್ನು ವಿರೋಧಿಸುತ್ತೇವೆ. ಅಲ್ಲದೆ ರಾಜ್ಯಗಳಲ್ಲಿನ ಯಾವುದೇ ಲೋಕಸಭೆ ಸ್ಥಾನಗಳನ್ನು ಕಡಿಮೆ ಮಾಡದಂತೆ ಒಟ್ಟಾಗಿ ಕೆಲಸ ಮಾಡುತ್ತವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
Annamalai-DK Shivakumar
ಅಣ್ಣಾಮಲೈ-ಡಿಕೆ ಶಿವಕುಮಾರ್
Updated on

ಚೆನ್ನೈ: ಕೇಂದ್ರ ಸರ್ಕಾರದ ಕ್ಷೇತ್ರ ಪುನರ್ವಿಂಗಡಣೆ ಪ್ರಸ್ತಾವನೆಯನ್ನು ವಿರೋಧಿಸುತ್ತೇವೆ. ಅಲ್ಲದೆ ರಾಜ್ಯಗಳಲ್ಲಿನ ಯಾವುದೇ ಲೋಕಸಭೆ ಸ್ಥಾನಗಳನ್ನು ಕಡಿಮೆ ಮಾಡದಂತೆ ಒಟ್ಟಾಗಿ ಕೆಲಸ ಮಾಡುತ್ತವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಹೇಳಿದ್ದಾರೆ.

ಚೆನ್ನೈನಲ್ಲಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಶಿವಕುಮಾರ್, "ನಾವು ಒಗ್ಗಟ್ಟಿನಿಂದ ನಿಂತು ಇದರ ವಿರುದ್ಧ ಹೋರಾಡುತ್ತೇವೆ. ನಮ್ಮ ಯಾವುದೇ ಸ್ಥಾನಗಳು ಕಡಿಮೆಯಾಗದಂತೆ ನೋಡಿಕೊಳ್ಳುತ್ತೇವೆ. ನಾವೆಲ್ಲರೂ ಒಟ್ಟಾಗಿ ಹೋಗೋಣ. ಮಾಧ್ಯಮಗಳು ನಮ್ಮ ಕಾಳಜಿಯನ್ನು ಅರ್ಥಮಾಡಿಕೊಳ್ಳುತ್ತವೆ ಎಂದು ನಾನು ಭಾವಿಸುತ್ತೇನೆ. ನಾವು ವೈಯಕ್ತಿಕ ಕಾರಣಕ್ಕಾಗಿ ಹೋರಾಡುತ್ತಿಲ್ಲ, ಆದರೆ ಈ ದೇಶದ ದೊಡ್ಡ ಉದ್ದೇಶಕ್ಕಾಗಿ. ನಾವು ಅತ್ಯಂತ ಸಾಕ್ಷರ ರಾಜ್ಯಗಳಲ್ಲಿ ಒಂದಾಗಿದ್ದೇವೆ ಮತ್ತು ಆರ್ಥಿಕವಾಗಿ, ನಾವು ರಾಷ್ಟ್ರದ ಬೆಳವಣಿಗೆಗೆ ಗಮನಾರ್ಹವಾಗಿ ಕೊಡುಗೆ ನೀಡುತ್ತಿದ್ದೇವೆ ಎಂದರು.

ನಾವು ಒಕ್ಕೂಟ ರಚನೆಯನ್ನು ಎತ್ತಿಹಿಡಿಯುತ್ತಿದ್ದೇವೆ ಎಂದು ನನಗೆ ತುಂಬಾ ಹೆಮ್ಮೆ ಇದೆ. ನಾನು ಯಾವಾಗಲೂ ಎಲ್ಲರೂ ಒಟ್ಟಿಗೆ ಬರುವುದು ಆರಂಭ, ಸಮಸ್ಯೆಗಳನ್ನು ಚರ್ಚಿಸುವುದು ಪ್ರಗತಿ ಮತ್ತು ಒಟ್ಟಿಗೆ ಕೆಲಸ ಮಾಡುವುದು ಯಶಸ್ಸು ಎಂದು ಭಾವಿಸುತ್ತೇವೆ. ಈ ವಿಚಾರದಲ್ಲಿ ಯಾವುದೇ ಬೆಲೆ ತೆತ್ತಾದರೂ, ನಾವು ನಮ್ಮ ದೇಶ ಅಥವಾ ನಮ್ಮ ಸ್ಥಾನಗಳನ್ನು ಬಿಟ್ಟುಕೊಡಲು ಸಾಧ್ಯವಿಲ್ಲ. ಮಾಜಿ ಪ್ರಧಾನಿ, ದಿವಂಗತ ಅಟಲ್ ಬಿಹಾರಿ ವಾಜಪೇಯಿ, 2002ರಲ್ಲಿ 84ನೇ ಸಾಂವಿಧಾನಿಕ ತಿದ್ದುಪಡಿಯನ್ನು ಪರಿಚಯಿಸಿದರು, ಅದನ್ನು ಬದಲಾಯಿಸಲಾಗುವುದಿಲ್ಲ ಎಂದು ಹೇಳಿದರು.

ಬಿಜೆಪಿ ಮುಖಂಡರು ಕಪ್ಪು ಬಾವುಟ ಪ್ರದರ್ಶಿಸಿದ್ದನ್ನು ಡಿಕೆ ಶಿವಕುಮಾರ್ ಖಂಡಿಸಿದರು. ಇನ್ನು ಕರ್ನಾಟಕದಲ್ಲಿ ಐಪಿಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಸದ್ಯ ತಮಿಳುನಾಡು ಬಿಜೆಪಿ (BJP) ಮುಖ್ಯಸ್ಥ ಕೆ. ಅಣ್ಣಾಮಲೈ (Annamalai) ಪ್ರತಿಭಟನೆ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ ಡಿಕೆ ಶಿವಕುಮಾರ್​, ಅಣ್ಣಾಮಲೈ ಒಬ್ಬ ಪುವರ್​ ಮ್ಯಾನ್​. ಕರ್ನಾಟಕದಲ್ಲಿ ಕಾರ್ಯನಿರ್ವಹಿಸುತ್ತಿದ್ದಾಗ ಅವರಿಗೆ ನಮ್ಮ ಶಕ್ತಿ ಬಗ್ಗೆ ಗೊತ್ತಿದೆ. ಪ್ರತಿಭಟನೆ ಮಾಡಲಿ, ಅದಕ್ಕೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ಅವರಿಗೆ ಶುಭವಾಗಲಿ ಎಂದು ಕಿಡಿಕಾರಿದ್ದಾರೆ.

Annamalai-DK Shivakumar
ತಾರತಮ್ಯದ 'ಕ್ಷೇತ್ರ ಪುನರ್ ವಿಂಗಡಣೆ' ರಾಜ್ಯಗಳನ್ನು ರಾಜಕೀಯವಾಗಿ ದುರ್ಬಲಗೊಳಿಸುತ್ತದೆ: JAC ಸಭೆಯಲ್ಲಿ ಸಿಎಂ ಸ್ಟಾಲಿನ್

ಡಿಕೆ ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿದ ಅಣ್ಣಾಮಲೈ, ಹೌದು. ನಾನು ಪೊಲೀಸ್ ಅಧಿಕಾರಿಯಾಗಿ ಕರ್ನಾಟಕದ ಜನರಿಗೆ ಶ್ರದ್ಧೆಯಿಂದ ಸೇವೆ ಸಲ್ಲಿಸಿದ್ದೇನೆ. ಇದನ್ನು ನೆನಪಿಸಿಕೊಂಡಿದ್ದಕ್ಕೆ ನಿಮಗೆ ಧನ್ಯವಾದಗಳು ಡಿಕೆ ಶಿವಕುಮಾರ್​​ ಅವರೇ ಎಂದು ಎಕ್ಸ್ ನಲ್ಲಿ ಬರೆದಿದ್ದಾರೆ. ಅಲ್ಲದೆ, ಸಿಎಂ ಸಿದ್ದರಾಮಯ್ಯ ಅವರನ್ನು ಕುರ್ಚಿಯಿಂದ ಕೆಳಗಿಳಿಸಿ ಕರ್ನಾಟಕದ ಮುಖ್ಯಮಂತ್ರಿಯಾಗುವ ನಿಮ್ಮ ನಿರಂತರ ಪ್ರಯತ್ನಗಳಿಗೆ ಈ ಬಡವನಿಂದ ನಿಮಗೆ ಶುಭಾಶಯಗಳು ಎಂದು ಹಾಸ್ಯಮಯವಾಗಿ ಕಾಲೆಳೆದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com