ಸಂವಿಧಾನ ಬದಲಾಯಿಸುತ್ತೇವೆಂದು ಎಲ್ಲಿಯೂ ಹೇಳಿಲ್ಲ, ಅಪಪ್ರಚಾರ ವಿರುದ್ಧ ಕಾನೂನು ಹೋರಾಟ: ಡಿ.ಕೆ ಶಿವಕುಮಾರ್

ಕಳೆದ 36 ವರ್ಷಗಳಿಂದ ಶಾಸಕನಾಗಿ ವಿಧಾನಸಭೆಯಲ್ಲಿದ್ದೇನೆ. ನನಗೂ ಸಾಮಾನ್ಯ ಜ್ಞಾನವಿದೆ. ಇಂತಹ ವಿಚಾರದಲ್ಲಿ ಜೆ.ಪಿ ನಡ್ಡಾ ಅವರಿಗಿಂತಲೂ ನಾನು ಉತ್ತಮ ಸೂಕ್ಷ್ಮತೆ ಇರುವ ರಾಜಕಾರಣಿ. ಆದರೆ, ಬಿಜೆಪಿ ಜನಸಾಮಾನ್ಯರ ದಾರಿ ತಪ್ಪಿಸುತ್ತಿದೆ.
ಡಿಕೆ.ಶಿವಕುಮಾರ್
ಡಿಕೆ.ಶಿವಕುಮಾರ್
Updated on

ಬೆಂಗಳೂರು: ಸಂವಿಧಾನ ಬದಲಾವಣೆ ಮಾಡುವುದಾಗಿ ನಾನು ಎಲ್ಲಿಯೂ ಹೇಳಿಲ್ಲ. ನನ್ನ ಹೇಳಿಕೆಯನ್ನು ತಿರುಚಿ ಸುಖಾಸುಮ್ಮನೆ ಬಿಜೆಪಿ ಅಪಪ್ರಚಾರ ಮಾಡುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಸೋಮವಾರ ಹೇಳಿದ್ದಾರೆ.

ರಾಜ್ಯಸಭೆಯಲ್ಲಿ ತಮ್ಮ ಹೇಳಿಕೆ ಪ್ರಸ್ತಾಪವಾದ ಬೆನ್ನಲ್ಲೇ ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದರು.

ನಾನು ಹಾಗೆ ಹೇಳಿಯೇ ಇಲ್ಲ. ನನ್ನ ಹೇಳಿಕೆಯನ್ನು ಬಿಜೆಪಿ ತಿರುಚಿದೆ. ಕಳೆದ 36 ವರ್ಷಗಳಿಂದ ಶಾಸಕನಾಗಿ ವಿಧಾನಸಭೆಯಲ್ಲಿದ್ದೇನೆ. ನನಗೂ ಸಾಮಾನ್ಯ ಜ್ಞಾನವಿದೆ. ಇಂತಹ ವಿಚಾರದಲ್ಲಿ ಜೆ.ಪಿ ನಡ್ಡಾ ಅವರಿಗಿಂತಲೂ ನಾನು ಉತ್ತಮ ಸೂಕ್ಷ್ಮತೆ ಇರುವ ರಾಜಕಾರಣಿ. ಆದರೆ, ಬಿಜೆಪಿ ಜನಸಾಮಾನ್ಯರ ದಾರಿ ತಪ್ಪಿಸುತ್ತಿದೆ. ನಮ್ಮದು ರಾಷ್ಟ್ರೀಯ ಪಕ್ಷ. ಸುಳ್ಳು ಹೇಳಿಕೆ ಸೃಷ್ಟಿಸಿ, ನನ್ನ ಹೆಸರನ್ನು ಎಳೆದು ತರಲಾಗುತ್ತಿದೆ. ನಾನು ಈ ಬಗ್ಗೆ ಎಲ್ಲಿಯೂ ಹೇಳಿಕೆ ನೀಡಿಲ್ಲ ಎಂದು ಹೇಳಿದರು.

ನ್ಯಾಯಾಲಯಗಳ ತೀರ್ಪಿನ ಅನುಸಾರ ತಿದ್ದುಪಡಿ ತಂದಿರುವ ನಿದರ್ಶನವಿದೆ ಎಂದು ಹೇಳಿದ್ದೇನೆಯೇ ಹೊರತು, ಸಂವಿಧಾನವನ್ನು ಬದಲಾವಣೆ ಮಾಡುತ್ತೇವೆ ಎಂದು ಎಲ್ಲಿಯೂ ಹೇಳಿಲ್ಲ. ನನ್ನ ಹೇಳಿಕೆಯನ್ನು ತಿರುಚಿರುವ ಬಗ್ಗೆ ಕಾನೂನು ಹೋರಾಟ ಮಾಡುತ್ತೇನೆಂದು ತಿಳಿಸಿದರು.

ಡಿಕೆ.ಶಿವಕುಮಾರ್
Watch | ಡಿಕೆಶಿ ಹೇಳಿಕೆಗೆ ರಾಜ್ಯಸಭೆ ಕೋಲಾಹಲ; ರಿಜಿಜು-ನಡ್ಡಾ-ಖರ್ಗೆ ವಾಗ್ವಾದ

ನಮ್ಮದು ರಾಷ್ಟ್ರೀಯ ಪಕ್ಷ, ಸಂವಿಧಾನವನ್ನು ಜಾರಿಗೆ ತಂದಿದ್ದೇ ನಮ್ಮ ಪಕ್ಷ. ಸಂವಿಧಾನದ ಮಹತ್ವ ಬೇರೆಲ್ಲರಿಗಿಂತ ನಮಗೆ ಚೆನ್ನಾಗಿ ಗೊತ್ತಿದೆ. ಕೇಂದ್ರ ಸರ್ಕಾರ ತನ್ನ ಬಜೆಟ್ ನಲ್ಲಿ ವಿಫಲವಾಗಿದೆ. ಬಜೆಟ್ ನಲ್ಲಿ ಏನೂ ಇಲ್ಲದೇ ಇರುವ ಕಾರಣಕ್ಕೆ ಬಿಜೆಪಿ ಈ ರೀತಿ ಇಲ್ಲಸಲ್ಲದ ವಿಚಾರವನ್ನು ಪ್ರಸ್ತಾವ ಮಾಡುತ್ತಿದೆ. ಇದೊಂದು ನನ್ನ ಹಾಗೂ ಕಾಂಗ್ರೆಸ್ ಪಕ್ಷದ ವಿರುದ್ಧ ಮುಂದುವರೆದಿರುವ ರಾಜಕೀಯ ಪಿತೂರಿ ಎಂದು ಸ್ಪಷ್ಟಪಡಿಸಿದರು.

ರಾಜ್ಯದ ಹಿಂದುಳಿದ ವರ್ಗಗಳ ವರದಿ ಆಧಾರದ ಮೇಲೆ ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿ ನೀಡಲಾಗಿದೆ. ಮಹಾರಾಷ್ಟ್ರ, ಹರಿಯಾಣ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಮೀಸಲಾತಿ ವಿಚಾರವಾಗಿ ನ್ಯಾಯಲಯಗಳ ಮೆಟ್ಟಿಲೇರಲಾಗಿದ್ದು, ಆ ನ್ಯಾಯಾಲಯಗಳ ತೀರ್ಪುಗಳ ಆಧಾರದ ಮೇಲೆ ಕೆಲವು ಬದಲಾವಣೆ ಮಾಡಿ ಅವಕಾಶ ನೀಡಲಾಗಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com