
ಬೆಂಗಳೂರು: ರಾಜ್ಯದಲ್ಲಿ ನಂದಿನಿ ಹಾಲು, ಮೊಸರು ಮೇಲಿನ ದರ 4 ರುಪಾಯಿ ಏರಿಸಿರುವುದು ಖಂಡನೀಯ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, 2023 ಆಗಸ್ಟ್‌ನಲ್ಲಿ 3, 2024 ಜೂನ್‌ನಲ್ಲಿ 2 ಮತ್ತು 2025 ಮಾರ್ಚ್ ಅಂದರೆ ಈಗ 4 ಏರಿಕೆ ಮಾಡುವ ಮೂಲಕ ಸರ್ಕಾರ ಒಂದು ಕೈಯಲ್ಲಿ ಕೊಟ್ಟು ಹತ್ತು ಕೈಗಳಲ್ಲಿ ಕಿತ್ತುಕೊಳ್ಳುವ ದಶಾವತಾರಿ ರಾವಣರೂಪಿ ಸುಲಿಗೆ ಪ್ರವೃತ್ತಿ ಹೊಂದಿದೆ. ಇದು ಕನ್ನಡಿಗರ ಪಾಲಿಗೆ ಮರಣಶಾಸನ ಎಂದು ಕಿಡಿಕಾರಿದ್ದಾರೆ.
ಈಗ ಎಲ್ಲರಿಗೂ ಪ್ರತೀ ಯೂನಿಟ್ಟಿಗೆ 36 ಪೈಸೆ ಬರೆ. ಹಾಲು, ವಿದ್ಯುತ್ ದರ ಏರಿಕೆ ಖಂಡನೀಯ. ನೆಪ ರೈತರದು, ಲಾಭ ಕೆಎಂಎಫ್‌ಗೆ. ಈ ಹಣ ಏನು ಮಾಡುತ್ತೀರಿ? ರೈತರಿಗೆ ವರ್ಗಾಯಿಸುತ್ತೀರೋ ಅಥವಾ ಕೆಎಂಎಫ್ ತಾನೇ ಉಳಿಸಿಕೊಳ್ಳಲಿದೆಯೋ? ಸ್ಪಷ್ಟಪಡಿಸಿ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಇದು ಪ್ರಜಾಪ್ರಭುತ್ವ ಸರ್ಕಾರವಲ್ಲ. ದರ ಏರಿಕೆ, ತೆರಿಗೆ ಹೇರಿಕೆ ಸರ್ಕಾರ. ಇದು ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ! ಸುಲಿಗೆಯಷ್ಟೇ ನಿತ್ಯಕೃತ್ಯ. ಕರ್ನಾಟಕ ರಾಜ್ಯ, ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಕಪಿಮುಷ್ಟಿಯಲ್ಲಿದೆ ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ. ಒಂದು ಕೈಯಲ್ಲಿ ಕೊಟ್ಟು ಹತ್ತು ಕೈಗಳಲ್ಲಿ ಕಿತ್ತುಕೊಳ್ಳುವ ದಶಾವತಾರಿ ರಾವಣರೂಪಿ ಸುಲಿಗೆ ಪ್ರವೃತ್ತಿ ಕನ್ನಡಿಗರ ಪಾಲಿಗೆ ಮರಣಶಾಸನ. ಹಾಲು, ವಿದ್ಯುತ್ ದರ ಏರಿಕೆ ಖಂಡನೀಯ. ನೆಪ ರೈತರದು, ಲಾಭ ಕೆಎಂಎಫ್ ಗೆ! ಕಂಪನಿ ಆಡಳಿತ ನಡೆಸುತ್ತಿದೆ ಸರಕಾರ ಎಂದು ವಾಗ್ದಾಳಿ ನಡೆಸುತ್ತಿದೆ.
Advertisement