ಮಹಾಭಾರತದಲ್ಲಿ ಜಯಗಳಿಸಿದ್ದು ಕೃಷ್ಣಾರ್ಜುನರೆ ಹೊರತು ಶಕುನಿ ಹಾಗೂ ಧೃತರಾಷ್ಟ್ರರಲ್ಲ: ಯತ್ನಾಳ್

ರಾಜ್ಯದಲ್ಲಿ ಹೊಂದಾಣಿಕೆ ರಾಜಕಾರಣದ ವಿರುದ್ಧ ನಮ್ಮೆಲ್ಲರ ಹೋರಾಟ ಆರಂಭವಾಗಲಿದೆ.
yatnal
ಬಸನಗೌಡ ಪಾಟೀಲ್ ಯತ್ನಾಳ್
Updated on

ವಿಜಯಪುರ: ಬಿಜೆಪಿಯಿಂದ ಉಚ್ಛಾಟನೆಗೊಂಡಿರುವ ವಿಜಯಪುರ ಶಾಸಕ, ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ತಮ್ಮ ಟೀಕಾ ಪ್ರಹಾರವನ್ನು ಮುಂದುವರಿಸಿದ್ದು, ಮಹಾಭಾರತದಲ್ಲಿ ಜಯಗಳಿಸಿದ್ದು ಕೃಷ್ಣಾರ್ಜುನರೆ ಹೊರತು ಶಕುನಿ ಹಾಗೂ ಧೃತರಾಷ್ಟ್ರರಲ್ಲ ಎಂದು ಮಾರ್ಮಿಕ ನುಡಿದಿದ್ದಾರೆ.

ಯುಗಾದಿ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಸಂಕಲ್ಪ ಪತ್ರ. ಬಂಧುಗಳೇ, ಎಲ್ಲರಿಗೂ ಯುಗಾದಿ ಹಬ್ಬದ ಶುಭಾಶಯಗಳು. ಶ್ರೀ ವಿಶ್ವಾವಸು ಸಂವತ್ಸರವು ನಿಮಗೆಲ್ಲರಿಗೂ ಸುಖ, ಶಾಂತಿ, ನೆಮ್ಮದಿಯನ್ನು ನೀಡಲಿ. ರೈತರಿಗೆ, ಶ್ರಮಿಕರಿಗೆ ಈ ಸಂವತ್ಸರವು ಫಲಪ್ರದಾಯಕವಾಗಲಿ ಎಂದು ಆಶಿಸುತ್ತೇನೆ. ಜನ ಸೇವೆ ಮಾಡದೆ, ಪ್ರಜೆಗಳ ಕಷ್ಟ ಕಾರ್ಪಣ್ಯಕ್ಕೆ ಧ್ವನಿಯಾಗದೆ, ತಮ್ಮ ರಾಜಕೀಯ ಅಭ್ಯುದಯಕ್ಕೆ ಹೊಂದಾಣಿಕೆ ರಾಜಕಾರಣ ಮಾಡುವವರ ವಿರುದ್ಧ ನನ್ನ ಹೋರಾಟ ಮುಂದುವರೆಯುತ್ತದೆ ಎಂದು ಹೇಳಿದ್ದಾರೆ.

ಮಹಾಭಾರತದಲ್ಲಿ ಜಯಗಳಿಸಿದ್ದು ಕೃಷ್ಣಾರ್ಜುನರೆ ಹೊರತು ಶಕುನಿ ಹಾಗೂ ಧೃತರಾಷ್ಟ್ರರಲ್ಲ. ರಾಜ್ಯದಲ್ಲಿ ಹೊಂದಾಣಿಕೆ ರಾಜಕಾರಣದ ವಿರುದ್ಧ ನಮ್ಮೆಲ್ಲರ ಹೋರಾಟ ಆರಂಭವಾಗಲಿದೆ. ಅಲ್ಲದೆ, ರಾಮ ರಾಜ್ಯ ಸ್ಥಾಪನೆ, ಉತ್ತರ ಕರ್ನಾಟಕದ ಅಭಿವೃದ್ಧಿ, ನೀರಾವರಿ, ಗೋ ರಕ್ಷಣೆ, ಕನ್ನಡ ಮಾಧ್ಯಮ ಪರೀಕ್ಷಾರ್ಥಿಗಳಿಗೆ ಆಗುತ್ತಿರುವ ಅನ್ಯಾಯ, ಬಾಣಂತಿಯರ ಸಾವು, ಲವ್ ಜಿಹಾದ್, ವಕ್ಫ್ ವಿರುದ್ಧ ನನ್ನ ಹೋರಾಟವನ್ನು ತೀಕ್ಷ್ಣಗೊಳಿಸಿ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವ ಪ್ರಯತ್ನ ಮಾಡುತ್ತೇನೆ.

ಜಾಲತಾಣದ ಮೂಲಕ ತಮ್ಮ ಶುಭ ಹಾರೈಕೆಗಳನ್ನು, ಬೆಂಬಲ, ಪ್ರೋತ್ಸಾಹವನ್ನು ತೋರಿಸುತ್ತಿರುವ ಎಲ್ಲಾ ಸಹೃದಯೀ ಸ್ನೇಹಿತರಿಗೂ, ಅಭಿಮಾನಿಗಳಿಗೂ, ಹಿತೈಷಿಗಳಿಗೂ ಹಾಗೂ ಕರೆ ಮಾಡಿ ಬೆಂಬಲ, ಮನೋಸ್ಥೈರ್ಯ ನೀಡಿರುವ ಎಲ್ಲರಿಗೂ ಧನ್ಯವಾದಗಳು. ಭಾರತ ಮಾತೆಗೆ ಜಯವಾಗಲಿ ಎಂದು ತಿಳಿಸಿದ್ದಾರೆ.

yatnal
ನಾಮ ಹಾಕಿದ ಮಾತ್ರಕ್ಕೆ ಹಿಂದೂ ಆಗಲ್ಲ: ಯತ್ನಾಳ್ ವಿರುದ್ಧ ಕಲ್ಲಡ್ಕ ಪ್ರಭಾಕರ್ ಭಟ್ ಕಿಡಿ

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com