ವರ್ಷದಿಂದ ಅಪರಾಧಗಳ ಸಂಖ್ಯೆ ಕಡಿಮೆ: ಕುಮಾರಸ್ವಾಮಿ ರಾಮನಗರ ಜಿಲ್ಲೆ ರಚಿಸುವಾಗ ಇತಿಹಾಸದ ಬಗ್ಗೆ ಯೋಚಿಸಿರಲಿಲ್ಲವೇ?

ರಾಜ್ಯದಲ್ಲಿ ಅಪರಾಧ ಪ್ರಕರಣಗಳ ವಿರುದ್ಧ ಕಠಿಣ ಕ್ರಮವಾಗುತ್ತಿದೆ. ಆದ್ದರಿಂದ ಕಳೆದ ಒಂದು ವರ್ಷದಿಂದ ರಾಜ್ಯದಲ್ಲಿ ಅಪರಾಧಗಳ ಸಂಖ್ಯೆ ಕಡಿಮೆಯಾಗಿದ್ದು, ಬಿಜೆಪಿ ಅವಧಿಗೆ ಹೋಲಿಸಿದರೆ ನಮ್ಮ ಸರ್ಕಾರದ ಅವಧಿಯಲ್ಲಿ ಅಪರಾಧಗಳ ಸಂಖ್ಯೆ ಕಡಿಮೆಯಿದೆ.
Siddaramaiah
ಸಿದ್ದರಾಮಯ್ಯ
Updated on

ಮೈಸೂರು: ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿದೆ. ಅಲ್ಲಿನ ಜನರ ಜನಾಭಿಪ್ರಾಯವನ್ನು ಪಡೆದೇ ಈ ನಿರ್ಣಯವನ್ನು ಕೈಗೊಳ್ಳಲಾಗಿದೆ. ಕುಮಾರಸ್ವಾಮಿಯವರು ರಾಮನಗರ ಜಿಲ್ಲೆ ಸೃಜಿಸುವಾಗ ಅಲ್ಲಿನ ಇತಿಹಾಸದ ಬಗ್ಗೆ ಯೋಚಿಸಿರಲಿಲ್ಲವೇ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಮೈಸೂರು ಜಿಲ್ಲೆಯ ಕೆ.ಆರ್.ನಗರದಲ್ಲಿ ಮಾತನಾಡಿದ ಅವರು, ಇ.ಡಿ ಯವರು, ಐ.ಟಿ.ಯವರು ತನಿಖೆ ಮಾಡುವುದನ್ನೇ ಆಗಲಿ ಅಥವಾ ಕಪ್ಪು ಹಣ ವ್ಯವಹಾರವನ್ನು ಪತ್ತೆ ಹಚ್ಚುವುದನ್ನೇ ಆಗಲಿ ನಾವು ಆಕ್ಷೇಪಿಸುವುದಿಲ್ಲ. ಆದರೆ ಇ.ಡಿ ಮತ್ತು ಐ.ಟಿ ದಾಳಿಗಳು ರಾಜಕೀಯ ದುರುದ್ದೇಶದಿಂದ ನಡೆಯಕೂಡದು. ಪ್ರಸ್ತುತ ಗೃಹ ಸಚಿವ ಜಿ.ಪರಮೇಶ್ವರ ಅವರ ಶಿಕ್ಷಣ ಸಂಸ್ಥೇಯ ಮೇಲೆ ಇ.ಡಿ.ದಾಳಿ ರಾಜಕೀಯ ಪ್ರೇರಿತ. ಸುಪ್ರೀಂ ಕೋರ್ಟ್ ನವರು ಯಾವ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ರೀತಿ ಅವಲೋಕಿಸಿದ್ದಾರೆ ಎಂದು ತೀರ್ಪು ಪರಿಶೀಲಿಸಿದ ನಂತರವಷ್ಟೇ ತಿಳಿಯಲಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಅಪರಾಧ ಪ್ರಕರಣಗಳ ವಿರುದ್ಧ ಕಠಿಣ ಕ್ರಮವಾಗುತ್ತಿದೆ. ಆದ್ದರಿಂದ ಕಳೆದ ಒಂದು ವರ್ಷದಿಂದ ರಾಜ್ಯದಲ್ಲಿ ಅಪರಾಧಗಳ ಸಂಖ್ಯೆ ಕಡಿಮೆಯಾಗಿದ್ದು, ಬಿಜೆಪಿ ಅವಧಿಗೆ ಹೋಲಿಸಿದರೆ ನಮ್ಮ ಸರ್ಕಾರದ ಅವಧಿಯಲ್ಲಿ ಅಪರಾಧಗಳ ಸಂಖ್ಯೆ ಕಡಿಮೆಯಿದೆ. ಅಪರಾಧಗಳನ್ನು ಗಮನಾರ್ಹವಾಗಿ ಕಡಿಮೆ ಮಾಡಲು ಸರ್ಕಾರ ಖಂಡಿತ ಪ್ರಯತ್ನಿಸುತ್ತದೆ.

ಸಿಂಗಾಪುರ, ಹಾಂಕಾಂಗ್ ದೇಶದಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿದ್ದು, ವಿದೇಶದಿಂದ ಆಗಮಿಸುವವರ ಕೋವಿಡ್ ಪರೀಕ್ಷೆ ನಡೆಸಲು ಕೇಂದ್ರ ಸರ್ಕಾರ ಯಾವುದೇ ಕ್ರಮ ವಹಿಸದೇ, ಇಲ್ಲಿಯೂ ಕೋವಿಡ್ ಪ್ರಕರಣಗಳು ಹೆಚ್ಚುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ. ಈ ಕೂಡಲೇ ಕೇಂದ್ರ ಸರ್ಕಾರ ಎಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲು ತ್ವರಿತ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು ಎಂದಿದ್ದಾರೆ. ಯಂಗ್ ಇಂಡಿಯಾ ಸಂಸ್ಥೆಗೆ ದೇಣಿಗೆ ನೀಡಿರುವ ಕಾರಣಕ್ಕಾಗಿ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಸಂಸದ ಡಿ.ಕೆ.ಸುರೇಶ್ ರವರ ಮೇಲೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಇದು ರಾಜಕೀಯಪ್ರೇರಿತ ನಡೆ. ಯಾವುದೇ ಸಂಸ್ಥೆಗೆ ದೇಣಿಗೆ ನೀಡುವುದು ತಪ್ಪಲ್ಲ ಎಂದು ತಿಳಿಸಿದ್ದಾರೆ.

Siddaramaiah
ಕಾಂಗ್ರೆಸ್ ನಾಯಕರೇ ಟಾರ್ಗೆಟ್ ಯಾಕೆ? BJP ನಾಯಕರೆಲ್ಲಾ ಪ್ರಾಮಾಣಿಕರೇ?: ED ಗೆ ಸಿದ್ದರಾಮಯ್ಯ ಪ್ರಶ್ನೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com