ಪ್ರಿಯಾಂಕ್ ಖರ್ಗೆ ವಜಾಗೊಳಿಸುವಂತೆ ಆಗ್ರಹಿಸಿ ಬಿಜೆಪಿಯಿಂದ 'ಕಲಬುರಗಿ ಚಲೋ'

ಮೇ 21 ರಂದು ಕರ್ನಾಟಕ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತಂಗಿದ್ದ ಕಲಬುರಗಿ ಜಿಲ್ಲೆಯ ಚಿತ್ತಾಪುರದ ಅತಿಥಿ ಗೃಹಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿದ್ದರು.
ಬಿಜೆಪಿ ನಾಯಕರಿಂದ 'ಕಲಬುರಗಿ ಚಲೋ'
ಬಿಜೆಪಿ ನಾಯಕರಿಂದ 'ಕಲಬುರಗಿ ಚಲೋ'
Updated on

ಕಲಬುರಗಿ: ಇತ್ತೀಚೆಗೆ ಚಿತ್ತಾಪುರದಲ್ಲಿ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಅವರಿಗೆ ದಿಗ್ಭಂಧನ ಹಾಕಿದ ಘಟನೆಗೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿ ಭಾರತೀಯ ಜನತಾ ಪಕ್ಷ(ಬಿಜೆಪಿ) ಶನಿವಾರ 'ಕಲಬುರಗಿ ಚಲೋ' ನಡೆಸಿತು.

ಮೇ 21 ರಂದು ಕರ್ನಾಟಕ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತಂಗಿದ್ದ ಕಲಬುರಗಿ ಜಿಲ್ಲೆಯ ಚಿತ್ತಾಪುರದ ಅತಿಥಿ ಗೃಹಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿದ್ದರು.

ಸಚಿವ ಪ್ರಿಯಾಂಕ್​ ಖರ್ಗೆ ಮತ್ತು ಕಾಂಗ್ರೆಸ್​ ಕಾರ್ಯಕರ್ತರ ಈ ವರ್ತನೆಯನ್ನು ರಾಜ್ಯ ಬಿಜೆಪಿ ನಾಯಕರು ಖಂಡಿಸಿದ್ದು, ಪ್ರಿಯಾಂಕ್​ ಖರ್ಗೆ ಅವರನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇಂದು 11.30 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯ ವೃತ್ತದ ಬಳಿ “ಕಲಬುರ್ಗಿ ಚಲೋ” ಬೃಹತ್ ಹೋರಾಟವನ್ನು ಹಮ್ಮಿಕೊಳ್ಳಲಾಗಿತ್ತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ, ಸಂಸದರಾದ ಗೋವಿಂದ ಕಾರಜೋಳ, ಡಾ. ಸಿ.ಎನ್. ಅಶ್ವತ್ಥನಾರಾಯಣ್ ಭಾಗಿಯಾಗಿದ್ದರು.

ಬಿಜೆಪಿ ನಾಯಕರಿಂದ 'ಕಲಬುರಗಿ ಚಲೋ'
ಛಲವಾದಿ ನಾರಾಯಣಸ್ವಾಮಿಗೆ ದಿಗ್ಬಂಧನ: ರಾಜ್ಯಪಾಲರ ಭೇಟಿಯಾದ ಬಿಜೆಪಿ ನಿಯೋಗ, ಸಚಿವ ಸ್ಥಾನದಿಂದ ಪ್ರಿಯಾಂಕ್ ಖರ್ಗೆ ವಜಾಕ್ಕೆ ಆಗ್ರಹ

ತಿರಂಗಾ ಯಾತ್ರೆಯ ಸಂದರ್ಭದಲ್ಲಿ ಚಿತ್ತಾಪುರಕ್ಕೆ ತೆರಳಿದ್ದ ಛಲವಾದಿ ನಾರಾಯಣ ಸ್ವಾಮಿ ಅವರು, ಪ್ರಿಯಾಂಕ್ ಅವರ ಬಗ್ಗೆ ನಾಯಿ ಎಂಬ ಪದ ಬಳಕೆ ಮಾಡಿದ್ದರು. ಇದರಿಂದ ಕೆರಳಿದ್ದ ಪ್ರಿಯಾಂಕ್ ಖರ್ಗೆ ಬೆಂಬಲಿಗರು ನಾರಾಯಣ ಸ್ವಾಮಿ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಅಲ್ಲದೆ ನಾರಾಯಣ ಸ್ವಾಮಿ ಕಾರಿಗೆ ನೀಲಿ ಬಣ್ಣ ಎರಚಿದ್ದರು. ಅಷ್ಟೇ ಅಲ್ಲದೆ 4 ಗಂಟೆಗಳ ಕಾಲ ದಿಗ್ಭಂಧನ ಹಾಕಿದ್ದರು ಎಂದು ಆರೋಪಿಸಲಾಗಿದೆ.

"ಮುಖ್ಯಮಂತ್ರಿ ಸಿದ್ದರಾಮಯ್ಯ ಒಮ್ಮೆ ವಿರೋಧ ಪಕ್ಷದ ನಾಯಕರಾಗಿದ್ದರು. ನಮ್ಮ ಸರ್ಕಾರದ ಅವಧಿಯಲ್ಲಿ, ಕೊಡಗಿನಲ್ಲಿ ಸಣ್ಣ ಪ್ರತಿಭಟನೆ ನಡೆದಾಗ ಅವರನ್ನು ಬಂಧಿಸಲಾಯಿತು. ಆದರೆ ನಾವು ಅವರಿಗೆ ಸಂಪೂರ್ಣ ಭದ್ರತೆ ನೀಡಿದ್ದೇವೆ ಮತ್ತು ಅವರನ್ನು ಗೌರವದಿಂದ ನಡೆಸಿಕೊಂಡೆವು. ಆದರೆ ಈಗ, ಮಲ್ಲಿಕಾರ್ಜುನ ಖರ್ಗೆಯಂತಹ ಕಾಂಗ್ರೆಸ್ ನಾಯಕರು ಅಗೌರವದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅವರು, ಆರ್‌ಎಸ್‌ಎಸ್ ಮತ್ತು ಬಿಜೆಪಿ ಬೆಂಬಲಿಗರನ್ನು 'ನಾಯಿಗಳು' ಎಂದು ಕರೆದರು ಮತ್ತು ಅವರಲ್ಲಿ ಯಾರೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿಲ್ಲ ಎಂದು ಹೇಳಿದ್ದಾರೆ" ಎಂದು ನಾರಾಯಣಸ್ವಾಮಿ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.

ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ​ ವಾಗ್ದಾಳಿ

ಈ ಹಿಂದೆ ಕಲಬುರಗಿಗೆ ಬಿಜೆಪಿಯ ಎಲ್ಲ ನಾಯಕರು ಅಕ್ಕಿ ಕಳ್ಳ, ಮಕ್ಕಳ ಹಾಲಿನ ಪೌಡರ್ ಕಳ್ಳನ ಪರ ಬಂದಿದ್ದರು. ಆತನ ಮೇಲೆ ದೌರ್ಜನ್ಯ ಮಾಡಿದ್ದಾರೆ ಅಂತಾ ಬಿಜೆಪಿಗರು ಬಂದಿದ್ದರು. ಅವರೇ ಕಾರನ್ನು ಎಲ್ಲೋ ಬಿಟ್ಟು ಅಪಘಾತ ಆಗಿದೆ ಅಂತ ಬಂದಿದ್ದರು. ಬಿಜೆಪಿಯವರು ಅಕ್ಕಿ‌ ಕಳ್ಳನಿಗೆ ಟಿಕೆಟ್ ಬೇರೆ ಕೊಡುತ್ತಾರೆ ಎಂದು ಬಿಜೆಪಿ ನಾಯಕ ಮಣಿಕಂಠ ರಾಠೋಡ್​ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ಮಾಡಿದರು.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com