18 ಬಿಜೆಪಿ ಶಾಸಕರ ಅಮಾನತು ವಾಪಸ್‌: ಸ್ಪೀಕರ್ ಯುಟಿ ಖಾದರ್ ನೇತೃತ್ವದ ಸಭೆಯಲ್ಲಿ ಮಹತ್ವದ ನಿರ್ಧಾರ

ವಿಧಾನಸಭೆಯಲ್ಲಿ ಸ್ಪೀಕರ್ ಕುರ್ಚಿಗೆ ಅಗೌರವ ತೋರಿಸಿದ ಮತ್ತು ಮಸೂದೆಯ ಪ್ರತಿಗಳನ್ನು ಹರಿದು ಅವರ ಮೇಲೆ ಎಸೆದ ಆರೋಪದ ಮೇಲೆ 18 ಬಿಜೆಪಿ ಶಾಸಕರನ್ನು ವಿಧಾನಸಭೆಯಿಂದ ಆರು ತಿಂಗಳ ಕಾಲ ಅಮಾನತುಗೊಳಿಸಲಾಗಿತ್ತು.
ಸ್ಪೀಕರ್ ಯುಟಿ ಖಾದರ್ ನೇತೃತ್ವದ ಸಭೆ
ಸ್ಪೀಕರ್ ಯುಟಿ ಖಾದರ್ ನೇತೃತ್ವದ ಸಭೆ
Updated on

ಬೆಂಗಳೂರು: ಬಿಜೆಪಿಯ 18 ಶಾಸಕರ ಅಮಾನತು ಆದೇಶವನ್ನು ಹಿಂಪಡೆಯಲಾಗುವುದು ಎಂದು ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಅವರು ಭಾನುವಾರ ಹೇಳಿದ್ದಾರೆ.

18 ಬಿಜೆಪಿ ಶಾಸಕರ ಅಮಾನತಿಗೆ ಸಂಬಂಧಿಸಿದಂತೆ ಇಂದು ಸ್ಪೀಕರ್ ಯುಟಿ ಖಾದರ್ ನೇತೃತ್ವದ ನಡೆದ ಸಂಧಾನ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ವಿಧಾನಸಭೆಯಲ್ಲಿ ಸ್ಪೀಕರ್ ಕುರ್ಚಿಗೆ ಅಗೌರವ ತೋರಿಸಿದ ಮತ್ತು ಮಸೂದೆಯ ಪ್ರತಿಗಳನ್ನು ಹರಿದು ಅವರ ಮೇಲೆ ಎಸೆದ ಆರೋಪದ ಮೇಲೆ 18 ಬಿಜೆಪಿ ಶಾಸಕರನ್ನು ವಿಧಾನಸಭೆಯಿಂದ ಆರು ತಿಂಗಳ ಕಾಲ ಅಮಾನತುಗೊಳಿಸಲಾಗಿತ್ತು. ಇದೀಗ ಬಿಜೆಪಿ ಶಾಸಕ ಅಮಾನತು ಆದೇಶವನ್ನು ಹಿಂಪಡೆಯಲು ಸಭೆಯಲ್ಲಿ ತೀರ್ಮಾನವಾಗಿದೆ.

ಸ್ಪೀಕರ್ ಯುಟಿ ಖಾದರ್ ನೇತೃತ್ವದ ಸಭೆ
ವಿಧಾನಸಭೆಯಿಂದ ಶಾಸಕರ ಅಮಾನತು ಪ್ರಶ್ನಿಸಿ ನ್ಯಾಯಾಲಯದ ಮೊರೆ ಹೋಗಲು ಬಿಜೆಪಿ ನಿರ್ಧಾರ

ಶಾಸಕರ ಅಮಾನತು ಆದೇಶವನ್ನ ಹಿಂಪಡೆಯಲಾಗಿದೆ. ಘಟನೆ ಬಗ್ಗೆ ಎಲ್ಲ ಶಾಸಕರು ವಿಷಾದ ವ್ಯಕ್ತಪಡಿಸಿದ್ದಾರೆ. ವಿಪಕ್ಷ ನಾಯಕರು ಕೂಡ ನನಗೆ ಮನವಿ ಸಲ್ಲಿಸಿದ್ದರು. ಇನ್ಮುಂದೆ ಹೀಗಾಗದಂತೆ ನೋಡಿಕೊಳ್ಳುವುದಾಗಿ ಭರವಸೆ ನೀಡಿದ್ದಾರೆ. 18 ಶಾಸಕರನ್ನು ಅಮಾನತು ಮಾಡಿ ಎರಡು ತಿಂಗಳಾಗಿದೆ. ಈಗ ಸಂತೋಷದಿಂದ ಶಾಸಕರ ಅಮಾಮತು ಹಿಂಪಡೆದಿದ್ದೇನೆ. ಯಾವುದೇ ಷರತ್ತು ಇಲ್ಲ, ಎಲ್ಲರೂ ನಮ್ಮ ಮಿತ್ರರು. ಆ ಸಮಯದಲ್ಲಿ ದುರ್ನಡತೆ ತೋರಿದ್ದಕ್ಕೆ ಕ್ರಮಕೈಗೊಂಡೆ. ಕ್ರಮತೆಗೆದುಕೊಳ್ಳುವುದಕ್ಕೆ ನನಗೆ ಅಧಿಕಾರವಿದೆ ಎಂದು ಸ್ಪೀಕರ್​ ಯು.ಟಿ.ಖಾದರ್​ ಹೇಳಿದ್ದಾರೆ.

ಸ್ಪೀಕರ್ ಯು.ಟಿ.ಖಾದರ್ ನೇತೃತ್ವದಲ್ಲಿ ನಡೆದ ಸಂಧಾನ ಸಭೆ ಸಭೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಆರ್​. ಅಶೋಕ್, ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ, ಕಾನೂನು ಸಚಿವ ಎಚ್​.ಕೆ.ಪಾಟೀಲ್ ಭಾಗಿಯಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com