BJP ಶಿಸ್ತು ಸಮಿತಿ ವರದಿ: ಪಕ್ಷದಿಂದ ST ಸೋಮಶೇಖರ್, ಶಿವರಾಂ ಹೆಬ್ಬಾರ್ 6 ವರ್ಷ ಉಚ್ಚಾಟನೆ

ಈ ಹಿಂದೆ ಪಕ್ಷ ವಿರೋದಿ ಚಟುವಟಿಕೆ ಹಿನ್ನಲೆಯಲ್ಲಿ ಶಾಸಕರಾದ ಎಸ್‌.ಟಿ. ಸೋಮಶೇಖರ್ ಮತ್ತು ಶಿವರಾಮ ಹೆಬ್ಬಾರ್ ಅವರನ್ನು ಪಕ್ಷದಿಂದ ಉಚ್ಚಾಟಿಸುವಂತೆ ಕೇಂದ್ರ ಸಮಿತಿಗೆ ಬಿಜೆಪಿ ಶಿಸ್ತು ಸಮಿತಿ ವರದಿ ನೀಡಿತ್ತು.
ST Somashekar, Shivaram Hebbar expelled from BJP
ಬಿಜೆಪಿಯಿಂದ ST ಸೋಮಶೇಖರ್, ಶಿವರಾಂ ಹೆಬ್ಬಾರ್ ಉಚ್ಚಾಟನೆ
Updated on

ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ಪಕ್ಷವಿರೋಧಿ ಚಟುವಟಿಕೆ ಆರೋಪದ ಮೇರೆಗೆ ಭಾರತೀಯ ಜನತಾ ಪಕ್ಷ (BJP)ಯಲ್ಲಿ ಮತ್ತೆರಡು ತಲೆದಂಡವಾಗಿದ್ದು, ಶಾಸಕ ST ಸೋಮಶೇಖರ್ ಮತ್ತು ಶಿವರಾಂ ಹೆಬ್ಬಾರ್ ರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.

ಈ ಹಿಂದೆ ಬಿಜೆಪಿ ಪಕ್ಷದ ವಿರುದ್ಧವೇ ಬಹಿರಂಗವಾಗಿ ಮಾತನಾಡುತ್ತಿದ್ದ ಮತ್ತು ಕಾಂಗ್ರೆಸ್ ಪಾಳಯದಲ್ಲಿ ಪದೇ ಪದೇ ಗುರುತಿಸಿಕೊಳ್ಳುತ್ತಿದ್ದ ರೆಬೆಲ್ ಶಾಸಕರಾದ ST ಸೋಮಶೇಖರ್ ಮತ್ತು ಶಿವರಾಂ ಹೆಬ್ಬಾರ್ ಅವರನ್ನು ನಿರೀಕ್ಷೆಯಂತೆಯೇ ಬಿಜೆಪಿ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಮುಂದಿನ 6 ವರ್ಷಗಳ ಕಾಲ ಇಬ್ಬರೂ ಶಾಸಕರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ ಎಂದು ತಿಳಿದುಬಂದಿದೆ.

ಶಿಸ್ತು ಸಮಿತಿ ವರದಿ ಬೆನ್ನಲ್ಲೇ ಕಠಿಣ ಕ್ರಮ

ಈ ಹಿಂದೆ ಪಕ್ಷ ವಿರೋದಿ ಚಟುವಟಿಕೆ ಹಿನ್ನಲೆಯಲ್ಲಿ ಶಾಸಕರಾದ ಎಸ್‌.ಟಿ. ಸೋಮಶೇಖರ್ ಮತ್ತು ಶಿವರಾಮ ಹೆಬ್ಬಾರ್ ಅವರನ್ನು ಪಕ್ಷದಿಂದ ಉಚ್ಚಾಟಿಸುವಂತೆ ಕೇಂದ್ರ ಸಮಿತಿಗೆ ಬಿಜೆಪಿ ಶಿಸ್ತು ಸಮಿತಿ ವರದಿ ನೀಡಿತ್ತು.

ಈ ಕುರಿತು ಮಾತನಾಡಿದ್ದ ಬಿಜೆಪಿ ರಾಜ್ಯ ಘಟಕದ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ ಅವರು, 'ಶಾಸಕರಾದ ಎಸ್‌.ಟಿ. ಸೋಮಶೇಖರ್ ಮತ್ತು ಶಿವರಾಮ ಹೆಬ್ಬಾರ್ ಅವರನ್ನು ಪಕ್ಷದಿಂದ ಉಚ್ಚಾಟಿಸುವಂತೆ ಕೇಂದ್ರ ಸಮಿತಿಗೆ ವರದಿ ನೀಡಿದ್ದೇನೆ. ರಾಷ್ಟ್ರ ಮತ್ತು ರಾಜ್ಯ ನಾಯಕರು ಈ ತಿಂಗಳ ಅಂತ್ಯದೊಳಗೆ ಎಲ್ಲ ಗೊಂದಲಕ್ಕೂ ಅಂತ್ಯ ಹಾಡಲಿದ್ದಾರೆ ಎಂದು ಹೇಳಿದ್ದರು.

ST Somashekar, Shivaram Hebbar expelled from BJP
ರಾಮನ ಹೆಸರಲ್ಲಿ ರಾಜಕೀಯ ಮಾಡಿದ್ದಾರಷ್ಟೆ; ಕುಮಾರಸ್ವಾಮಿ ಕನ್ನಡಿಗರ ₹5 ಲಕ್ಷ ಕೋಟಿ ಹಣ ತಂದರೆ ಚಿನ್ನದ ತಗಡನ್ನೇ ಹಾಕಿಸೋಣ: ಡಿ.ಕೆ ಸುರೇಶ್

'ಭಿನ್ನಮತೀಯ ಚಟುವಟಿಕೆ ನಡೆಸುತ್ತಿದ್ದ ಮುಖಂಡರ ಕುರಿತು ವರದಿ ನೀಡುವಂತೆ ಪಕ್ಷದ ಕೇಂದ್ರ ಸಮಿತಿ ಸೂಚಿಸಿತ್ತು. ಮಂಡಳ ಅಧ್ಯಕ್ಷರ ಮತ್ತು ಜಿಲ್ಲಾ ಘಟಕದ ಅಧ್ಯಕರ ವರದಿಯಾಧರಿಸಿ, ಇಬ್ಬರು ಶಾಸಕರನ್ನು ಪಕ್ಷದಿಂದ ಹೊರಗೆ ಹಾಕುವಂತೆ ಒಂದು ವರ್ಷದ ಹಿಂದೆಯೇ ವರದಿ ನೀಡಿದ್ದೇನೆ. ಆದರೆ, ಯಾವುದೇ ಸಂಸದರ, ಶಾಸಕರ ವಿರುದ್ಧ ಕ್ರಮಕೈಗೊಳ್ಳಲು ನನಗೆ ಅಧಿಕಾರವಿಲ್ಲ.

ವರದಿ ನೀಡುವುದಷ್ಟೇ ನನ್ನ ಕಾರ್ಯವ್ಯಾಪ್ತಿ. ಶಿಸ್ತು ಸಮಿತಿ ಅಧ್ಯಕ್ಷನಾದ ನಂತರ ಸಾಕಷ್ಟು ಪ್ರಕರಣಗಳು ಬಂದಿದ್ದವು. ಬಹುತೇಕ ಪ್ರಕರಣಗಳನ್ನು ಪಕ್ಷದ ವರಿಷ್ಠರ ಎದುರು ಕೂತು ಚರ್ಚಿಸಿ ಪರಿಹಾರಕಂಡುಕೊಳ್ಳಲಾಗಿದೆ. ಕೆಲವಷ್ಟು ಪ್ರಕರಣದ ಕುರಿತು ವರದಿ ನೀಡಿದ್ದೇನೆ. ಪಕ್ಷದ ತತ್ವ ಸಿದ್ಧಾಂತ ಮತ್ತು ನಿಯಮಗಳ ಅಡಿಯಲ್ಲಿ ಶಿಸ್ತುಕ್ರಮದ ವರದಿ ಸಿದ್ಧಪಡಿಸಲಾಗುತ್ತದೆ ಎಂದು ಲಿಂಗರಾಜ ಪಾಟೀಲ ಹೇಳಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com