FIR ದಾಖಲಿಸುವ ಮೂಲಕ ವಿಪಕ್ಷಗಳನ್ನು ಹತ್ತಿಕ್ಕಲು ಸರ್ಕಾರ ಯತ್ನ: BJP

ರಾಜ್ಯ ಸರ್ಕಾರದ ಇತ್ತೀಚಿನ ಹಲವಾರು ನಿರ್ಧಾರಗಳನ್ನು "ತರ್ಕಹೀನ" ವಾಗಿವೆ. ಸರ್ಕಾರಿ ಆಸ್ಪತ್ರೆಗಳಲ್ಲಿನ ಜನೌಷಧಿ ಕೇಂದ್ರಗಳನ್ನು ಮುಚ್ಚುವ ಇತ್ತೀಚಿನ ಆದೇಶವನ್ನು ಸರ್ಕಾರ ಹಿಂಪಡೆಯದಿದ್ದರೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸಲಿದೆ ಎಂದು ಎಚ್ಚರಿಸಿದರು.
BY Vijayendra
ಬಿ.ವೈ. ವಿಜಯೇಂದ್ರ
Updated on

ಬೆಂಗಳೂರು: ವಿವಿಧ ಪ್ರಕರಣಗಳಲ್ಲಿ ಬಿಜೆಪಿ ಶಾಸಕರ ವಿರುದ್ಧ ಎಫ್‌ಐಆರ್ ದಾಖಲಿಸುವ ಮೂಲಕ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ವಿರೋಧ ಪಕ್ಷಗಳನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಮಂಗಳವಾರ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರವು ಬಿಜೆಪಿ ಸದಸ್ಯರ ವಿರುದ್ಧ ಪ್ರಕರಣಗಳನ್ನು ದಾಖಲಿಸುವ ಮೂಲಕ ವಿರೋಧ ಪಕ್ಷಗಳಿಗೆ ಬೆದರಿಕೆ ಹಾಕುತ್ತಿದೆ ಎಂದು ಹೇಳಿದರು.

ಇತ್ತೀಚೆಗೆ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕಲಬುರಗಿಯಲ್ಲಿ ನಡೆದ ನಮ್ಮ ಪ್ರತಿಭಟನೆಯ ಸಂದರ್ಭದಲ್ಲಿ, ಬಿಜೆಪಿಯ ನಾಯಕರೊಬ್ಬರು ಜಿಲ್ಲಾಡಳಿತದ ವಿರುದ್ಧ ಮಾತನಾಡಿದ್ದರು. ನಂತರ ಕ್ಷಮೆಯಾಚಿಸಿದ್ದರೂ. ಆದರೂ ಅವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಬಿಜೆಪಿ ಶಾಸಕರಾದ ಡಾ. ಭರತ್ ಶೆಟ್ಟಿ ಮತ್ತು ಹರೀಶ್ ಪೂಂಜಾ ವಿರುದ್ಧವೂ ಎಫ್‌ಐಆರ್ ದಾಖಲಿಸಲಾಗಿದೆ. ವಿಧಾನಸಭೆಯಿಂದ 18 ಬಿಜೆಪಿ ಶಾಸಕರನ್ನು ಅಮಾನತುಗೊಳಿಸಿರುವುದು ಪ್ರಜಾಪ್ರಭುತ್ವವನ್ನು ಕೊಲ್ಲುವ ಪ್ರಯತ್ನ. ರಾಜ್ಯ ಸರ್ಕಾರದ ಒತ್ತಡದಿಂದಾಗಿ ಸ್ಪೀಕರ್ ಅವರನ್ನು ಅಮಾನತುಗೊಳಿಸಲಾಗಿದೆ. ಇದು ವಿರೋಧ ಪಕ್ಷಗಳ ಅಧಿಕಾರವನ್ನು ಕಡಿತಗೊಳಿಸುವ ಪ್ರಯತ್ನವಾಗಿದೆ ಎಂದು ಕಿಡಿಕಾರಿದರು.

ರಾಜ್ಯ ಸರ್ಕಾರದ ಇತ್ತೀಚಿನ ಹಲವಾರು ನಿರ್ಧಾರಗಳನ್ನು "ತರ್ಕಹೀನ" ವಾಗಿವೆ. ಸರ್ಕಾರಿ ಆಸ್ಪತ್ರೆಗಳಲ್ಲಿನ ಜನೌಷಧಿ ಕೇಂದ್ರಗಳನ್ನು ಮುಚ್ಚುವ ಇತ್ತೀಚಿನ ಆದೇಶವನ್ನು ಸರ್ಕಾರ ಹಿಂಪಡೆಯದಿದ್ದರೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸಲಿದೆ ಎಂದು ಎಚ್ಚರಿಸಿದರು.

BY Vijayendra
ಕಲಬುರಗಿ ಜಿಲ್ಲಾಧಿಕಾರಿಗೆ ನಿಂದನೆ: ಬಿಜೆಪಿ MLC ರವಿಕುಮಾರ್ ವಿರುದ್ಧ FIR

ಇದೇ ವೇಳೆ ಮಂಡ್ಯದಲ್ಲಿ 3 ವರ್ಷದ ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ನಾಯಿ ಕಡಿತಕ್ಕೆ ಚಿಕಿತ್ಸೆಗಾಗಿ ಹೋಗುವಾಗ ಪೊಲೀಸರು ದ್ವಿಚಕ್ರ ವಾಹನ ತಡೆದು, ಕೀ ಕಿತ್ತುಕೊಳ್ಳಲು ಪ್ರಯತ್ನಿಸಿದ್ದಾರೆ. ಮಗು ಜಾರಿಬಿದ್ದು ಸತ್ತಿದೆ. ಈ ಘಟನೆಗೆ ಯಾರು ಹೊಣೆಗಾರರು? ಖಜಾನೆ ಬರಿದಾಗಿರುವುದರಿಂದ ರಾಜ್ಯ ಸರ್ಕಾರ ಹಣ ಸಂಗ್ರಹಕ್ಕೆ ಪರದಾಡುತ್ತಿದೆ. ಹೀಗಾಗಿ ಸಂಚಾರಿ ಪೊಲೀಸರಿಗೂ ದಂಡ ಸಂಗ್ರಹಕ್ಕೆ ಗುರಿ ನಿಗದಿ ಮಾಡಿದೆ ಎಂದು ಆರೋಪಿಸಿದರು.

ನೀತಿ ಆಯೋಗದ ಸಭೆಗೆ ಹಾಜರಾಗದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೂ ವಿಜಯೇಂದ್ರ ಅವರು ತರಾಟೆಗೆ ತೆಗೆದುಕೊಂಡರು.

ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರು ನಾಮಕರಣ ಮಾಡಲು ನಿರ್ಧರಿಸಿದ್ದಾರೆ. ಸಚಿವರಿಗೆ ಅನಿಸಿದಕ್ಕೆ ಸಂಪುಟದಲ್ಲಿ ಸಮ್ಮತಿ ಸಿಗುತ್ತದೆ. ನಾಳೆ ವಿಜಯಪುರ ಜಿಲ್ಲೆ, ಶಿವಮೊಗ್ಗ ಜಿಲ್ಲೆಯ ಉಸ್ತುವಾರಿ ಸಚಿವರು ಇನ್ನೇನೋ ಸಲಹೆ ಕೊಡುತ್ತಾರೋ ಗೊತ್ತಿಲ್ಲ. ಒಟ್ಟಿನಲ್ಲಿ ಈ ಸರ್ಕಾರ ಸಚಿವರು, ಶಾಸಕರನ್ನು ಖುಷಿ ಪಡಿಸಲು ಜಿಲ್ಲೆಗಳ ಹೆಸರು ಬದಲಿಸಲು ಹೊರಟಿದೆ ಎಂದು ಟೀಕಿಸಿದರು.

ಮೈಸೂರು ಸ್ಯಾಂಡಲ್‌ ಸೋಪ್‌ಗೆ ರಾಯಭಾರಿಯಾಗಿ ತಮನ್ನಾ ಅವರ ನೇಮಕದ ಕುರಿತು ಮಾತನಾಡಿ, ರಾಜ್ಯ ಸರ್ಕಾರ ಯಾರೋ ಪರಿಣಿತರು ಹೇಳಿದರೆಂದು ತಮನ್ನಾ ಅವರನ್ನು ನೇಮಕ ಮಾಡಿದೆ. ಈ ತೀರ್ಮಾನದಲ್ಲಿ ರಾಜ್ಯದ ಹಿತಾಸಕ್ತಿ ಇದೆಯೋ? ರಾಜಕಾರಣಿಗಳ ಹಿತಾಸಕ್ತಿ ಇದೆಯೋ? ಇದನ್ನು ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com