ಮುಖ್ಯಮಂತ್ರಿಗಳಿಗೆ MUDA ಟ್ರ್ಯಾಪ್; ಪರಮೇಶ್ವರ್ ಗೆ ಚಿನ್ನದ ಟ್ರ್ಯಾಪ್; ಇದೆಂಥಾ ವಿಶ್ವಾಸಾರ್ಹತೆ? Hit Listನಲ್ಲಿ ಇನ್ಯಾರಿದ್ದಾರೆ?

ನಿಮ್ಮನ್ನು ನಂಬಿ ಬಂದ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರನ್ನು ಮಂತ್ರಿ ಮಾಡಲಿಲ್ಲ. ಪಾಪ.. ಹಾಸನ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಗೆದ್ದ ಏಕೈಕ ಶಾಸಕ ಶಿವಲಿಂಗೇಗೌಡರನ್ನು ಸಹ ಮಂತ್ರಿ ಮಾಡಲಿಲ್ಲ.
Dk Shivakumar And Nikhil Kumaraswamy
ಡಿ.ಕೆ ಶಿವಕುಮಾರ್ ಮತ್ತು ನಿಖಿಲ್ ಕುಮಾರಸ್ವಾಮಿ
Updated on

ಬೆಂಗಳೂರು: ಭವಿಷ್ಯ, ಅವಕಾಶ ಮತ್ತು ನಂಬಿಕೆ ಬಗ್ಗೆ ಮಾತನಾಡುವ ಮಾನ್ಯ ಡಿ.ಕೆ ಶಿವಕುಮಾರ್ ಅವರೇ, 2023ರ ವಿಧಾನಸಭೆ ಚುನಾವಣೆಯ ಇತಿಹಾಸದ ಪುಟಗಳನ್ನೊಮ್ಮೆ ತಿರುಗಿಸಿ ನೋಡಿ. ನಂಬಿಕೆ ಮತ್ತು ವಿಶ್ವಾಸರ್ಹತೆ ಬಗ್ಗೆ ನೀವು ಮಾತನಾಡಿರುವುದು ಭೂತದ ಬಾಯಲ್ಲಿ ಭಗವದ್ಗೀತೆ ಹೇಳಿದ ಹಾಗಿದೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ನಿಮ್ಮನ್ನು ನಂಬಿ ಬಂದ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರನ್ನು ಮಂತ್ರಿ ಮಾಡಲಿಲ್ಲ. ಪಾಪ.. ಹಾಸನ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಗೆದ್ದ ಏಕೈಕ ಶಾಸಕ ಶಿವಲಿಂಗೇಗೌಡರನ್ನು ಸಹ ಮಂತ್ರಿ ಮಾಡಲಿಲ್ಲ, ಗುಬ್ಬಿ ಶಾಸಕರನ್ನು ಮಂತ್ರಿ ಮಾಡುವುದು ಇರಲಿ, ಅವರ ಶ್ರೀಮತಿ ಅವರನ್ನು ಡೇರಿ ಅಧ್ಯಕ್ಷರಾಗಿ ಮಾಡಲಿಲ್ಲ. ಇನ್ನು ರಾಮನಗರ ಜಿಲ್ಲೆಯ ಇಬ್ಬರು ಕಾಂಗ್ರೆಸ್ ಶಾಸಕರಂತೂ ಮಂತ್ರಿ ಆಗಲು ರೆಡಿ ಮಾಡಿಸಿದ್ದ ಸೂಟುಕೋಟುಗಳು ಮೂಲೆಗೆ ಬಿದ್ದು ಧೂಳು ತಿನ್ನುತ್ತಿವೆ ಎಂದು ಲೇವಡಿ ಮಾಡಿದ್ದಾರೆ.

ಇನ್ನು ನಿಮ್ಮ ಬಗ್ಗೆ ಮಾತನಾಡಿದ ಮುಖ್ಯಮಂತ್ರಿಗಳಿಗೆ ಮುಡಾ ಟ್ರ್ಯಾಪ್! ಸಚಿವರು, ದಲಿತ ಸಮಾಜದ ಹಿರಿಯರಾದ ಪರಮೇಶ್ವರ್ ಅವರಿಗೆ ಚಿನ್ನದ ಟ್ರ್ಯಾಪ್, ಹಿರಿಯ ಸಚಿವರಾದ ರಾಜಣ್ಣ ಅವರಿಗೆ ಹನಿಟ್ರ್ಯಾಪ್!! ಇದೆಂಥಾ ವಿಶ್ವಾಸಾರ್ಹತೆ? ಇನ್ನು ನಿಮ್ಮ ಹಿಟ್ ಲಿಸ್ಟ್ ನಲ್ಲಿ ಇರುವ ಉಳಿಕೆ ಕಾಂಗ್ರೆಸ್ ನಾಯಕರನ್ನು ದೇವರೇ ರಕ್ಷಣೆ ಮಾಡಬೇಕು ಎಂದು ಟೀಕಿಸಿದ್ದಾರೆ.

ರಾಜಕೀಯವಾಗಿ ಗುದ್ದಾಡೋಣ. ಹೋರಾಟ ಮಾಡೋಣ. ಆರೋಗ್ಯಕರವಾಗಿ ಆಲೋಚನೆ ಮಾಡಿ. ಮುತ್ಸದ್ಧಿಯಾಗಿ ಬೆಳೆಯುವ ಕನಿಷ್ಠ ಪ್ರಯತ್ನವನ್ನಾದರೂ ಮಾಡಿ. ಈ ರಾಷ್ಟ್ರ ಕಂಡ ಅಪರೂಪದ ನಾಯಕರಾದ ಶ್ರೀ ದೇವೇಗೌಡ ಅವರ ಬಗ್ಗೆ ಮಾತನಾಡುವ ಮುನ್ನ ನಿಮ್ಮ ನಾಲಿಗೆಯ ಸ್ವಾಸ್ಥ್ಯವನ್ನು ಪರೀಕ್ಷೆ ಮಾಡಿಕೊಳ್ಳಿ. ಮಾತಿನಲ್ಲಿ ಎಚ್ಚರ ಇರದಿದ್ದರೆ ಅದು ನಿಮಗೇ ಮುಳುವು ಎಂದು ಎಚ್ಚರಿಕೆ ನೀಡಿದ್ದಾರೆ.

Dk Shivakumar And Nikhil Kumaraswamy
ಜಾತಿ ಗಣತಿ ವರದಿ: ಚರ್ಚೆಗೆ ಸರ್ವಪಕ್ಷ ಸಭೆ ಕರೆಯಿರಿ; ನಿಖಿಲ್ ಕುಮಾರಸ್ವಾಮಿ ಒತ್ತಾಯ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com