

ಚಿತ್ರದುರ್ಗ: 2028ರವರೆಗೂ ಸಿದ್ದರಾಮಯ್ಯ ಸಿಎಂ ಆಗಿರುತ್ತಾರೆ. ನವೆಂಬರ್ ಕ್ರಾಂತಿ ಬಿಜೆಪಿಯ ಊಹೆಯಷ್ಟೆ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದರು.
ಚಿತ್ರದುರ್ಗದಲ್ಲಿ ಮಾತನಾಡಿದ ಸಚಿವ ಜಮೀರ್ ಅಹ್ಮದ್ ಖಾನ್, ನವೆಂಬರ್ ಕ್ರಾಂತಿ ಏನು ಇಲ್ಲ ಎಲ್ಲವೂ ಬಿಜೆಪಿ ಊಹೆ. ಬಿಜೆಪಿ ಐದು ಗುಂಪುಗಳಿವೆ ನೋಡಿಕೊಳ್ಳಲಿ. ಕರ್ನಾಟಕದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ ಸಂಪುಟ ಪುನಾರಚನೆ ಚಿಂತನೆ ಇದೆ. ಅದನ್ನ ವರಿಷ್ಠರು ತೀರ್ಮಾನಿಸುತ್ತಾರೆ ಎಂದರು.
ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನಡುವಿನ ಸ್ಪರ್ಧೆಯ ಬಗ್ಗೆ ಮಾತನಾಡುತ್ತಾ, ಜಮೀರ್ ಇಬ್ಬರೂ ಉತ್ತಮ ಸಂಬಂಧದಲ್ಲಿದ್ದಾರೆ, ಅವರ ನಡುವೆ ಯಾವುದೇ ಭಿನ್ನಾಬಿಪ್ರಾಯಗಳಿಲ್ಲ ಎಂದು ಹೇಳಿದರು. "ಸಿದ್ದರಾಮಯ್ಯ ಮತ್ತು ಶಿವಕುಮಾರ್ ಸಹೋದರರಂತೆ" ಎಂದು ಅವರು ಹೇಳಿದರು.
ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಲು ಅವಕಾಶ ಸಿಗದಿದ್ದರೆ ಬಿಜೆಪಿ ಸೇರುತ್ತಾರೆ ಎಂಬ ವದಂತಿ ಬಗ್ಗೆ ಪ್ರತಿಕ್ರಿಯಿಸಿದ ಜಮೀರ್, "ನಾನು ಬೇರೆ ಪಕ್ಷದಿಂದ ಬಂದಿದ್ದೇನೆ, ಆದರೆ ಶಿವಕುಮಾರ್ ಅವರ ದೇಹದಲ್ಲಿ ಹರಿಯುತ್ತಿರುವುದು ಕಾಂಗ್ರೆಸ್ ರಕ್ತ. ಅವರು ಬಿಜೆಪಿ ಸೇರುವುದಿಲ್ಲ" ಎಂದು ಹೇಳಿದರು.
Advertisement