ಕುಮಾರಸ್ವಾಮಿ ವಿಧಾನಸೌಧದಲ್ಲಿ ಕುಳಿತಿರಲಿಲ್ಲವೇ? ಅವರೂ ಸಹ ಭಯೋತ್ಪಾದಕರ ಒಂದು ಭಾಗವೇ?: DK ಶಿವಕುಮಾರ್

ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರು ಬೆಂಗಳೂರಿಗೆ ಆಗಮಿಸಿ ಫ್ರೀಡಂ ಪಾರ್ಕ್ ನಿಂದ ಈ ಹೋರಾಟ ಆರಂಭಿಸಲಾಯಿತು. ನಂತರ ಮಹಾರಾಷ್ಟ್ರ, ಹರಿಯಾಣ ಚುನಾವಣಾ ಅಕ್ರಮ ಬಯಲಾಗಿ ಈ ಹೋರಾಟ ಬಿಹಾರದವರೆಗೂ ಹಬ್ಬಿತು.
DK Shivakumar and Hd kumaraswamy
ಎಚ್.ಡಿ ಕುಮಾರಸ್ವಾಮಿ ಮತ್ತು ಡಿ.ಕೆ ಶಿವಕುಮಾರ್
Updated on

ನವದೆಹಲಿ: ಕುಮಾರಸ್ವಾಮಿ ಅವರೂ ಭಯೋತ್ಪಾದಕರ ಭಾಗವಾಗಿದ್ದಾರೆಯೇ? ಅವರೂ ಸಹ ವಿಧಾನಸೌಧದಲ್ಲಿ ಕುಳಿತಿರಲಿಲ್ಲವೇ? ಅವರಿಗೂ ಹಾಗೂ ಅವರ ಪಕ್ಷದವರಿಗೂ, ಅವರ ಆಡಳಿತಕ್ಕೂ ಇದು ಅನ್ವಯಿಸುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ಗಾರೆ,

ದೆಹಲಿಯಲ್ಲಿ ಎಐಸಿಸಿ ನೂತನ ಕಟ್ಟಡ ಇಂದಿರಾ ಭವನದ ಆವರಣದಲ್ಲಿ ಮಾತನಾಡಿದ ಅವರು ವಿಧಾನಸೌಧದಲ್ಲಿ ಭಯೋತ್ಪಾದಕರಿದ್ದಾರೆ ಎನ್ನುವ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದರು. ಚುನಾವಣಾ ಆಯೋಗವು ಬಿಹಾರದ ಮತದಾರರಿಗೆ ಸರಿಯಾದ ನ್ಯಾಯ ಒದಗಿಸಿಲ್ಲ. ಬಿಜೆಪಿ ಸಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗ‌ ಮಾಡಿಕೊಂಡಿದೆ. ಯಾವುದು ಕಾಡದಿದ್ದರೂ ಆತ್ಮಸಾಕ್ಷಿ ಎನ್ನುವುದು ಇದ್ದೇ ಇರುತ್ತದೆ. ಅದು ಅಂತಿಮವಾಗಿ ಕೆಲಸ ಮಾಡಲಿದೆ ಎಂದು ಹೇಳಿದರು.

ನಾನು ರಾಜಕೀಯ ವಿಚಾರಗಳನ್ನು ಮಾತನಾಡುವುದಿಲ್ಲ. ನಾನು ಪ್ರಜಾಪ್ರಭುತ್ವ, ಮತದಾನದ ಹಕ್ಕು, ಸಂವಿಧಾನವನ್ನು ಉಳಿಸುವ ವಿಚಾರವಾಗಿ ಮಾತನಾಡುತ್ತೇನೆ" ಎಂದು ಉತ್ತರಿಸಿದರು. ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರು ಬೆಂಗಳೂರಿಗೆ ಆಗಮಿಸಿ ಫ್ರೀಡಂ ಪಾರ್ಕ್ ನಿಂದ ಈ ಹೋರಾಟ ಆರಂಭಿಸಲಾಯಿತು. ನಂತರ ಮಹಾರಾಷ್ಟ್ರ, ಹರಿಯಾಣ ಚುನಾವಣಾ ಅಕ್ರಮ ಬಯಲಾಗಿ ಈ ಹೋರಾಟ ಬಿಹಾರದವರೆಗೂ ಹಬ್ಬಿತು. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ ಅವರ ನಿರ್ದೇಶನದ ಮೇರೆಗೆ ಈ ಅಭಿಯಾನ ಪೂರ್ಣಗೊಳಿಸಿದ್ದೇವೆ" ಎಂದರು.

DK Shivakumar and Hd kumaraswamy
ಬೆಳ್ಳಿ ಮಹೋತ್ಸವದ ಸಂಭ್ರಮದಲ್ಲಿದ್ದ JDS ನಾಯಕರಿಗೆ HDK ಶಾಕ್: ಜಿ.ಟಿ ದೇವೇಗೌಡ ಕೋರ್ ಕಮಿಟಿಯಿಂದ ಹೊರಕ್ಕೆ; ರೇವಣ್ಣ ಕಥೆಯೇನು?

ಮತಕಳ್ಳತನ ಖಂಡಿತವಾಗಿ ಆಗಿದೆ. ಬಿಹಾರದಲ್ಲಿ ಎಸ್ಐಆರ್ ನಡೆದಾಗ ನ್ಯಾಯಾಲಯ ಮಧ್ಯಪ್ರವೇಶ ಮಾಡಿ ಏಕೆ ಸೂಚನೆ ನೀಡಿತು? ರಾಹುಲ್ ಗಾಂಧಿ ಅವರು ಇದರ ಬಗ್ಗೆ ಮೊದಲ ಪತ್ರಿಕಾಗೋಷ್ಠಿ ನಡೆಸಿದ ನಂತರ ಮಾಧ್ಯಮಗಳು ಬೆಂಗಳೂರಿಗೆ ಬಂದು ಉಲ್ಲೇಖಿತ ಮನೆಗಳ ಸಂಖ್ಯೆ ಸೇರಿದಂತೆ ಯಾವ, ಯಾವ ಕಡೆ ಅಕ್ರಮ ನಡೆದಿದೆ ಎಂದು ಫ್ಯಾಕ್ಟ್ ಚೆಕ್ ಮಾಡಿದವು. ಯಾವ ಸರ್ಕಾರವೂ ಅದರ ವೈಫಲ್ಯ ಒಪ್ಪಿಕೊಳ್ಳುವುದಿಲ್ಲ. ವಿರೋಧ ಪಕ್ಷದ ಕೆಲಸವೇ ವೈಫಲ್ಯಗಳನ್ನು ಕಂಡುಹಿಡಿದು ತಿಳಿಸುವುದು" ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com