

ನವದೆಹಲಿ: ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ರಾಜಿನಾಮೆ ನೀಡಿದ್ದೀರಾ ಎಂಬ ಸುದ್ದಿ ಹರಿದಾಡುತ್ತಿದೆ. ಈ ಬಗ್ಗೆ ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ನಾನು ಪಕ್ಷದ ಶಿಸ್ತಿನ ಸಿಪಾಯಿ. ಯಾವತ್ತೂ ಕಾಂಗ್ರೆಸ್ ಪಕ್ಷಕ್ಕೆ ಬ್ಲಾಕ್ ಮೇಲ್ ಮಾಡುವವನಲ್ಲ. ನಾನು ಹಗಲು ರಾತ್ರಿ ದುಡಿದು ಪಕ್ಷ ಕಟ್ಟಿದ್ದೇನೆ. ಮುಂದೆಯೂ ಕಟ್ಟುತ್ತೇನೆ ಎಂದು ಹೇಳಿದ್ದಾರೆ.
ಡಿಸೆಂಬರ್ ಒಳಗೆ ಕಾಂಗ್ರೆಸ್ ಕಚೇರಿಗೆ ಭೂಮಿಪೂಜೆ ಮಾಡಲೇಬೇಕು. ಅದಕ್ಕೆ ನಾನು ದಿನಾಂಕ ನಿಗದಿ ಮಾಡಬೇಕಿದೆ. ಹೀಗಾಗಿ ನಮ್ಮ ಅಧ್ಯಕ್ಷರನ್ನು ಭೇಟಿ ಮಾಡಲು ಹೋಗುತ್ತಿದ್ದೇನೆ. ಡಿಸೆಂಬರ್ ತಿಂಗಳೊಳಗೆ ನೂರು ಕಾಂಗ್ರೆಸ್ ಕಚೇರಿಗಳಿಗೆ ಶಂಕುಸ್ಥಾಪನೆ ಮಾಡಲೇಬೇಕಾಗಿದೆ. ಕಾಂಗ್ರೆಸ್ ಸಂಸ್ಥಾಪನಾ ದಿನ ಆಚರಣೆ ಮಾಡಬೇಕು. ಇದೆಲ್ಲವನ್ನು ಯಾರು ಮಾಡಬೇಕು? ನಾನೇ ಮಾಡಬೇಕು. ನಾನೇಕೆ ರಾಜಿನಾಮೆ ನೀಡಲಿ. ಈಗ ಅಂತಹ ಸಂದರ್ಭವಿಲ್ಲ. ನಾನು ಪಕ್ಷದ ಶಿಸ್ತಿನ ಸಿಪಾಯಿಯಂತೆ ಕೆಲಸ ಮಾಡಿಕೊಂಡು ಹೋಗುತ್ತೇನೆ. ಮುಂದೆಯೂ ಪಕ್ಷ ಅಧಿಕಾರಕ್ಕೆ ತರಲು ಶ್ರಮಿಸುತ್ತೇನೆ ಎಂದು ಸ್ಪಷ್ಟಪಡಿಸಿದರು.
Advertisement