"ಗಾಳ ಹಾಕಿ ಮೀನು ಹಿಡಿಯುವ ಕಲೆಗಾರಿಕೆ ನನಗಿದೆ": ಸಿಎಂ ಎದುರೇ DK Shivakumar ಮಾರ್ಮಿಕ ಮಾತು!

ನಾನು ಮುಖ್ಯಮಂತ್ರಿಗಳಿಗೆ ಮಶೀರ್ ಫಿಶ್ ತೋರಿಸಿದೆ. ನಾನು ಸಣ್ಣವನಿದ್ದಾಗ ಸಂಗಮಕ್ಕೆ ಹೋಗಿ ಮೀನು ಹಿಡಿಯುತ್ತಿದ್ದೆ. ಗಾಳ ಹಾಕಿ ಮೀನು ಹಿಡಿಯುವ ಕಲೆಗಾರಿಕೆ ನನಗಿದೆ. ಅದಕ್ಕೆ ಬಹಳ ತಾಳ್ಮೆ ಬೇಕು-DKS
Siddaramaiah- DK Shivakumar in Matsya mela
ಮತ್ಸ್ಯ ಮೇಳದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್online desk
Updated on

ಬೆಂಗಳೂರು: “ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಕೆರೆಗಳಿಗೆ ನೀರು ತುಂಬಿಸುತ್ತಿದ್ದು, ಈ ಕೆರೆಗಳಲ್ಲಿ ಮೀನುಗಾರಿಕೆ ಮಾಡಲು ಅವಕಾಶ ಕಲ್ಪಿಸಿಕೊಡಲಿದೆ. ಮೀನುಗಾರರಿಗೆ ಅಗತ್ಯ ಪ್ರೋತ್ಸಾಹ ನೀಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಹೆಬ್ಬಾಳದ ಪಶುವೈದ್ಯಕೀಯ ಮಹಾವಿದ್ಯಾಲಯದ ಆವರಣದಲ್ಲಿ ಶನಿವಾರ ನಡೆದ ವಿಶ್ವ ಮೀನುಗಾರಿಕೆ ದಿನಾಚರಣೆ ಹಾಗೂ ಮತ್ಸ್ಯ ಮೇಳದಲ್ಲಿ ಶಿವಕುಮಾರ್ ಅವರು ಮಾತನಾಡಿದರು.

“ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ 10 ಸಾವಿರಕ್ಕೂ ಹೆಚ್ಚು ಕೆರೆಗಳನ್ನು ತುಂಬಿಸುವ ಕೆಲಸ ಮಾಡಿದ್ದೇವೆ. ಈ ಕೆರೆಗಳಿಗೆ ನೀರು ತುಂಬಿಸುವ ಪ್ರಕ್ರಿಯೆಯಲ್ಲಿ ವಿದ್ಯುತ್ ಇಲಾಖೆಗೆ 3 ಸಾವಿರ ಕೋಟಿಯಷ್ಟು ಮೊತ್ತ ಪಾವತಿಸಬೇಕಾಗಿದೆ. ಈ ಕೆರೆಗಳ ಪೈಕಿ ಸಣ್ಣ ಕೆರೆಗಳನ್ನು ಸೊಸೈಟಿಗಳಿಗೆ ಜವಾಬ್ದಾರಿ ನೀಡುತ್ತೇವೆ. ಉಳಿದ ಕೆರೆಗಳನ್ನು ಹರಾಜು ಪ್ರಕ್ರಿಯೆ ಮೂಲಕ ಮೀನುಗಾರಿಕೆ ಮಾಡಲು ಅವಕಾಶ ನೀಡಲಾಗುವುದು. ಇದನ್ನು ಬಳಸಿಕೊಂಡು ನೀವು ಮೀನುಗಾರಿಕೆ ವೃತ್ತಿ ಮಾಡಬೇಕು” ಎಂದು ತಿಳಿಸಿದರು.

ಗಾಳ ಹಾಕಿ ಮೀನು ಹಿಡಿಯುವ ಕಲೆಗಾರಿಕೆ ನನಗಿದೆ:

“ಮೀನು ಎಂದರೆ ಲಕ್ಷ್ಮಿ. ರೈತರು ಭೂಮಿಯಲ್ಲಿ ಕೃಷಿ ಮಾಡಿದರೆ, ಮೀನುಗಾರರು ನೀರಿನಲ್ಲಿ ಕೃಷಿ ಮಾಡುತ್ತೀರಿ. ನಿಮ್ಮ ಪ್ರಾಣವನ್ನು ಪಣಕ್ಕಿಟ್ಟು ಸಮುದ್ರದಲ್ಲಿ ಮೀನುಗಾರಿಕೆ ಮಾಡುತ್ತೀರಿ. ನಿಮಗೆ ಸೂರ್ಯ, ಚಂದ್ರ ಎರಡೇ ಕಾಣುವುದು. ಉಳಿದಂತೆ ನಿಮ್ಮ ಆತ್ಮಬಲದಿಂದ ಇದನ್ನು ಮಾಡಿಕೊಂಡು ಬರುತ್ತಿದ್ದೀರಿ. ಮೀನು ಹಿಡಿಯುವುದು ಬೇರೆ, ಮಾರಾಟ ಮಾಡುವುದು ಬೇರೆ. ನಾನು ಮುಖ್ಯಮಂತ್ರಿಗಳಿಗೆ ಮಶೀರ್ ಫಿಶ್ ತೋರಿಸಿದೆ. ನಾನು ಸಣ್ಣವನಿದ್ದಾಗ ಸಂಗಮಕ್ಕೆ ಹೋಗಿ ಮೀನು ಹಿಡಿಯುತ್ತಿದ್ದೆ. ಗಾಳ ಹಾಕಿ ಮೀನು ಹಿಡಿಯುವ ಕಲೆಗಾರಿಕೆ ನನಗಿದೆ. ಅದಕ್ಕೆ ಬಹಳ ತಾಳ್ಮೆ ಬೇಕು ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.

ಈ ಮೀನು ವ್ಯವಹಾರ ಜಾತಿ ಮೇಲೆ ಇಲ್ಲ, ನೀತಿ, ಛಲ ಹಾಗೂ ಆಸಕ್ತಿ ಮೇಲಿದೆ. ಮೀನುಗಾರನಿಗೆ ನಿತ್ಯ ಮೀನು ಸಿಗುವುದಿಲ್ಲ. ಕೆಲವೊಮ್ಮೆ ವಾರವಾದರೂ ಒಂದು ಮೀನು ಸಿಗುವುದಿಲ್ಲ. ಅಂತಹ ತಾಳ್ಮೆ ವೃತ್ತಿ ನಡೆಸುತ್ತಿರುವ ನೀವು ಶ್ರಮಜೀವಿಗಳು” ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

Siddaramaiah- DK Shivakumar in Matsya mela
ಸಿಎಂ ದೊಡ್ಡವರು, ಅವರು ಹೇಳಿದ್ದನ್ನು ನಾವು ಚಿಕ್ಕವರು ಕೇಳಬೇಕು: ಡಿಸಿಎಂ ಡಿ.ಕೆ ಶಿವಕುಮಾರ್ ಮಾರ್ಮಿಕ ನುಡಿ; ರಾತ್ರಿ ಆಪ್ತ ಶಾಸಕರೊಂದಿಗೆ ಸಭೆ!

ಕರಾವಳಿ ಭಾಗಕ್ಕೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ

“ನಿಮಗೆ ವಿಶ್ವ ಮೀನುಗಾರಿಕೆ ದಿನದ ಶುಭಾಶಯಗಳು. ನಿಮಗೆ ಒಳ್ಳೆಯದಾಗಲಿ. ಮುಂದಿನ ದಿನಗಳಲ್ಲಿ ಕರಾವಳಿ ಭಾಗಕ್ಕೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ರೂಪಿಸಲಾಗುವುದು. ಮೀನುಗಾರಿಕೆಗೆ ಉತ್ತೇಜ ನೀಡಲು ಕಾರ್ಯಕ್ರಮ ರೂಪಿಸಲಾಗುವುದು. ನಾವು ನಿಮ್ಮ ಜೊತೆಗೆ ಇದ್ದೇವೆ” ಎಂದು ತಿಳಿಸಿದರು.

“ನೀವು ಗಂಗಾ ಪುತ್ರರು. ಇಂತಹ ಯೋಗ ಎಲ್ಲರಿಗೂ ಬರುವುದಿಲ್ಲ. ಗಂಗಾ ಪುತ್ರ ಭೀಷ್ಮನ ಪ್ರತಿಜ್ಞೆ ಎಂದರೆ ಅದಕ್ಕೆ ಆದ ಘನತೆ ಇದೆ. ನೀವು ನೀರಿನಲ್ಲಿ ಕೆಲಸ ಮಾಡಿ ಸಮಾಜಕ್ಕೆ ಸೇವೆ ಮಾಡುತ್ತಿದ್ದೀರಿ. ನಿಮ್ಮೆಲ್ಲರಿಗೂ ಒಳ್ಳೆಯದಾಗಲಿ” ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com