ನಾನು ಯಾವಾಗಲೂ ಸಿಎಂ ರೇಸ್ ನಲ್ಲಿದ್ದೇನೆ; ರಾಹುಲ್ ಗಾಂಧಿ ವಿದೇಶ ಪ್ರವಾಸ ಮುಗಿಸಿ ಬಂದ ಮೇಲೆ ಸೂಕ್ತ ನಿರ್ಧಾರ: ಡಾ. ಪರಮೇಶ್ವರ್

ನಾನು ಯಾವಾಗಲೂ ಸಿಎಂ ರೇಸ್‌ನಲ್ಲಿರುವುದಾಗಿ ಹೇಳಿಕೆ ನೀಡಿ ಅಚ್ಚರಿ ಮೂಡಿಸಿದ್ದಾರೆ. 2013ರಲ್ಲಿ ನಾನು ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷನಾಗಿದ್ದಾಗ ಸರ್ಕಾರವನ್ನು ಅಧಿಕಾರಕ್ಕೆ ತರಲು ಎಲ್ಲರೂ ಒಟ್ಟಾಗಿ ಕೆಲಸ ಮಾಡಿದ್ದೇವೆ.
Dr G Parameshwar
ಡಾ ಪರಮೇಶ್ವರ್
Updated on: 

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಅಧಿಕಾರ ಹಸ್ತಾಂತರ ಬಿಕ್ಕಟ್ಟು ಸದ್ಯಕ್ಕೆ ಬಗೆಹರಿಯುವ ಲಕ್ಷಣ ಕಾಣುತ್ತಿಲ್ಲ. ಸಿದ್ದರಾಮಯ್ಯ ಸಚಿವ ಸಂಪುಟ ಸದಸ್ಯರು ಕೂಡ ಮಾಧ್ಯಮಗಳಿಗೆ ಆಗಾಗ ಪ್ರತಿಕ್ರಿಯೆ ನೀಡುತ್ತಲೇ ಇದ್ದಾರೆ.

ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಕರ್ನಾಟಕ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ನಡೆಯುತ್ತಿರುವ ಚರ್ಚೆಗಳ ಕುರಿತು ಇಂದು ಮಾಧ್ಯಮ ಪ್ರತಿನಿಧಿಗಳು ಕೇಳಿದಾಗ ಪ್ರತಿಕ್ರಿಯೆ ನೀಡಿದ್ದಾರೆ.

ನಾನು ಕೂಡ ಸಿಎಂ ರೇಸ್ ನಲ್ಲಿದ್ದೇನೆ

ನಾನು ಯಾವಾಗಲೂ ಸಿಎಂ ರೇಸ್‌ನಲ್ಲಿರುವುದಾಗಿ ಹೇಳಿಕೆ ನೀಡಿ ಅಚ್ಚರಿ ಮೂಡಿಸಿದ್ದಾರೆ. 2013ರಲ್ಲಿ ನಾನು ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷನಾಗಿದ್ದಾಗ ಸರ್ಕಾರವನ್ನು ಅಧಿಕಾರಕ್ಕೆ ತರಲು ಎಲ್ಲರೂ ಒಟ್ಟಾಗಿ ಕೆಲಸ ಮಾಡಿದ್ದೇವೆ.

Dr G Parameshwar
ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಹುದ್ದೆ ಬಗ್ಗೆ ಡಿ.ಕೆ ಶಿವಕುಮಾರ್ ಎಐಸಿಸಿ ಆದೇಶ ಪಾಲಿಸಲಿ: ಸಿದ್ದರಾಮಯ್ಯ ಆಪ್ತ ಕೆ.ಎನ್ ರಾಜಣ್ಣ

ಆ ಸಂದರ್ಭದಲ್ಲಿ ನಾನು ಚುನಾವಣೆಯಲ್ಲಿ ಪರಾಭವಗೊಂಡಿದ್ದರಿಂದ ಸಿಎಂ ಆಗುವ ಅವಕಾಶ ತಪ್ಪಿತ್ತು. ಸಿಎಂ ಕುರ್ಚಿ ವಿಚಾರದ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದರು.

ಕಾಂಗ್ರೆಸ್ ನ ಆಂತರಿಕ ಬಿಕ್ಕಟ್ಟನ್ನು ಹೈಕಮಾಂಡ್ ಏಕೆ ಬಗೆಹರಿಸುತ್ತಿಲ್ಲ ಎಂಬ ಪ್ರಶ್ನೆ ಉದ್ಭವಿಸುತ್ತಲೇ ಇದೆ. ಈ ಬಗ್ಗೆ ಕೇಳಿದಾಗ ಪರಮೇಶ್ವರ್, ಮಲ್ಲಿಕಾರ್ಜುನ ಖರ್ಗೆಯವರು ಕರ್ನಾಟಕದ ರಾಜಕಾರಣವನ್ನು 50 ವರ್ಷಗಳ ಸುದೀರ್ಘ ಅನುಭವದೊಂದಿಗೆ ಚೆನ್ನಾಗಿ ಬಲ್ಲವರಾಗಿರುವುದರಿಂದ, ರಾಹುಲ್ ಗಾಂಧಿ ವಿದೇಶ ಪ್ರವಾಸದಿಂದ ಹಿಂದಿರುಗಿದ ನಂತರ ಸೂಕ್ತ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com