

ನವದೆಹಲಿ: ರಾಜ್ಯ ಕಾಂಗ್ರೆಸ್ ನಲ್ಲಿನ ಸಿಎಂ ಗದ್ದುಗೆ ಗುದ್ದಾಟ ಇದೀಗ ಹೈಕಮಾಂಡ್ ಅಂಗಳ ತಲುಪಿದ್ದು, ಎಲ್ಲರ ಚಿತ್ತ ಅತ್ತ ನೆಟ್ಟಿದೆ.
ಬೆಂಗಳೂರಿನಲ್ಲಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇದೀಗ ದೆಹಲಿಗೆ ಹೊರಟಿದ್ದಾರೆ. ರಾಜ್ಯ ಕಾಂಗ್ರೆಸ್ ಬಿಕ್ಕಟ್ಟಿನ ಬಗ್ಗೆ ಅವರು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಜೊತೆಗೆ ಇಂದು ಚರ್ಚೆ ನಡೆಸುವ ನಿರೀಕ್ಷೆ ಇದೆ.
ಈಗಾಗಲೇ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಸುದೀರ್ಘ ಮಾತುಕತೆ ನಡೆಸಿದ್ದಾರೆ. ಸದ್ಯ ಬೆಂಗಳೂರಿನಿಂದ ಹೊರಟ ಅವರ ಕಾರಿನಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಹ ಏರ್ಪೋರ್ಟ್ಗೆ ತೆರಳಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಈ ಮಧ್ಯೆ ಡೆಡ್ ಲೈನ್ ಹತ್ತಿರವಾಗುತ್ತಿರುವಂತೆಯೇ ಡಿಕೆ ಶಿವಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯ ಬಣದ ಶಾಸಕರ ಒತ್ತಡ ಹೆಚ್ಚಾಗುತ್ತಿದೆ. ಹೈಕಮಾಂಡ್ ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಹುದ್ದೆಗೆ 2.5 ವರ್ಷಗಳ ಕಾಲ ಕಾಯುವಂತೆ ಮನವೊಲಿಸಲು ಸಾಧ್ಯವಾಗಿರುವುದಾರೆ ಮಾತು ಕೊಟ್ಟಿದ್ದ ಸಿದ್ದರಾಮಯ್ಯ ಅವರನ್ನು ಮನವೊಲಿಸಲು ಏಕೆ ಹೆಣಗಾಡುತ್ತಿದೆ? ಎಂದು ಡಿಕೆ ಶಿವಕುಮಾರ್ ಬಣದ ಕೆಲ ಶಾಸಕರು ಕೇಳುತ್ತಿದ್ದಾರೆ.
ಒಟ್ಟಾರೇ, 2.5 ವರ್ಷಗಳ ಒಪ್ಪಂದ ಕುರಿತು ಹೈಕಮಾಂಡ್ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದೆಯೇ ಅಥವಾ ಕ್ಷೀಪ್ರ ರಾಜಕೀಯ ಬೆಳವಣಿಗೆಯಾಗಲಿದೆಯೇ ಎಂಬುದನ್ನು ಕಾದು ನೋಡಬೇಕಾಗಿದೆ.
Advertisement