

ಬೆಂಗಳೂರು: ಅಧಿಕಾರಿ ಹಂಚಿಕೆ ವಿಚಾರ ದಿನೇ ದಿನೇ ಕಗ್ಗಂಟಾಗುತ್ತಾ ಹೋಗುತ್ತಿದೆ. ಉಭಯದ ಬಣದ ಬೆಂಬಲಿಗರು ದಿನಕ್ಕೊಂದಂತೆ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈ ಮಧ್ಯೆ ಇದೇ ವಿಚಾರವಾಗಿ ನಟಿ, ಮಾಜಿ ಸಂಸದೆ ರಮ್ಯಾ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಅಧಿಕಾರ ಹಂಚಿಕೆ ವಿಚಾರ ಇದನ್ನ ನಾನು ನಿರ್ಧಾರ ಮಾಡೋದಲ್ಲ. ಹೈಕಮಾಂಡ್ ತೀರ್ಮಾನ ಮಾಡಲಿದೆ. ಯಾರಾದರೂ ನನಗೆ ಓಕೆ. ರಾಜ್ಯಕ್ಕೆ ಒಳ್ಳೇಯದಾಗಬೇಕು ಎಂದು ಎಂದು ರಮ್ಯಾ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ವೇಣುಗೋಪಾಲ್ ರಂತ ದೊಡ್ಡ ದೊಡ್ಡ ನಾಯಕರು ಈ ಬಗ್ಗೆ ನಿರ್ಧಾರ ಮಾಡುತ್ತಾರೆ. ಪಕ್ಷದಲ್ಲಿ ಗೊಂದಲ ಹೆಚ್ಚಾಗಿದೆ ಯಾಕೆ ಎಂದು ಕೇಳಿದ್ದಕ್ಕೆ ಅದೇ ರಾಜಕೀಯ ಎಂದು ನಕ್ಕು, ಎಲ್ಲಾ ನಾಯಕರಿಗೂ ಅರ್ಹತೆ ಇದೆ. ಯಾರಾದಾರೂ ನನಗೆ ಅಭ್ಯಂತರವಿಲ್ಲ. ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದು ಹೇಳಿದ್ದಾರೆ.
ನಾಯಕತ್ವ ಬದಲಾವಣೆ ವಿಚಾರ ತಾರಕಕ್ಕೇರಿದ್ದು, ಈ ನಡುವೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ಕರೆಯುವುದಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
Advertisement