

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿನ ಸಿಎಂ ಗದ್ದುಗೆ ಗುದ್ದಾಟ ಗುರುವಾರ ಮತ್ತೊಂದು ತಿರುವು ಪಡೆದುಕೊಂಡಿದೆ. ಇದೀಗ ಸಿದ್ದರಾಮಯ್ಯ ಬಣ ಕೂಡಾ ಯಾವುದೇ ಕಾರಣಕ್ಕೂ ಅವರನ್ನು ಬದಲಾವಣೆ ಮಾಡಬಾರದು ಎಂದು ಹೈಕಮಾಂಡ್ ಮೇಲೆ ಒತ್ತಡ ಹೇರುವ ತಂತ್ರ ಅನುಸರಿಸಲು ಸಿದ್ಧವಾಗಿದೆ ಎಂದು ಮೂಲಗಳು ತಿಳಿಸಿವೆ. ಕಾಂಗ್ರೆಸ್ ನಲ್ಲಿನ ಗೊಂದಲಕ್ಕೆ ತೆರೆ ಎಳೆಯುವಂತೆ ಹೈಕಮಾಂಡ್ ಗೆ ಹೇಳಿದ್ದ ಸಿದ್ದರಾಮಯ್ಯ, 'ಕಾದು ನೋಡುವ' ಮನಸ್ಥಿತಿಯಲ್ಲಿದ್ದಾರೆ ಎನ್ನಲಾಗಿದೆ.
ಡಿಕೆಶಿಗೆ 'ಹೈಕಮಾಂಡ್' ಒಲವು: ಕಾಂಗ್ರೆಸ್ ನ ಟ್ರಬಲ್ ಶೂಟರ್ ಎಂದು ಹೆಸರಾದ ಡಿಕೆ ಶಿವಕುಮಾರ್ ಗೆ ಒಂದು ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ, ಹಿರಿಯ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಸಿಎಂ ಗಾದಿಯಲ್ಲಿ ಕೂರಿಸಲು ಒಲವು ತೋರಿದ್ರೆ, ಸಿದ್ದರಾಮಯ್ಯ ಬೆಂಬಲಿಗರು ಸಿಡಿದೇಳಲು ಸಜ್ಜಾಗುತ್ತಿದ್ದಾರೆ. ಒಂದು ವೇಳೆ ಬೇರೆಯವರಿಗೆ ಮುಖ್ಯಮಂತ್ರಿ ಪಟ್ಟ ಕಟ್ಟಲು ಪಕ್ಷ ಹೇಳಿದ್ರೆ, ಪರ್ಯಾಯ ಹೆಸರು ನೀಡಲಾಗುವುದು ಎಂದು ಮೂಲಗಳು ಹೇಳಿವೆ.
ಪರ್ಯಾಯ ನಾಯಕ ಯಾರು? ಇದು 2023 ವಿಧಾನಸಭಾ ಚುನಾವಣೆಯಲ್ಲಿ ಜನಾದೇಶ ಪಡೆದ ಕಾಂಗ್ರೆಸ್ ನಲ್ಲಿ ಸಿಎಂ ಸ್ಥಾನಕ್ಕಾಗಿ ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ಬಿರುಕು ಉಂಟಾಗಿದೆ. ಡಿಕೆ ಶಿವಕುಮಾರ್ ಪಟ್ಟು ಸಡಿಲಿಸದಿದ್ದರೆ ಪ್ರಭಾವಿ ದಲಿತ ನಾಯಕ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮುಖ್ಯಮಂತ್ರಿ ರೇಸ್ ನಲ್ಲಿ ತರುವ ಸಾಧ್ಯತೆಯಿದೆ. ಈ ಕಾರ್ಯತಂತ್ರವನ್ನು ಬುಧವಾರ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದ ಸಭೆಯಲ್ಲಿ ಅಂತಿಮಗೊಳಿಸಲಾಗಿದೆ.
ಇಂದು ಅಥವಾ ನಾಳೆ ಖರ್ಗೆ-ರಾಹುಲ್ ಸಭೆ: ಜಾರಕಿಹೊಳಿ ಕೂಡ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ ಆದರೆ ಎರಡೂ ಕಡೆಯವರು ಸಭೆಯ ವಿವರಗಳನ್ನು ಬಹಿರಂಗಪಡಿಸಿಲ್ಲ. ಈ ಸಮಸ್ಯೆಯನ್ನು ಪರಿಹರಿಸಲು ಖರ್ಗೆ ಮತ್ತು ಗಾಂಧಿ ಕುಟುಂಬ ಇಂದು ಅಥವಾ ನಾಳೆ ಸಭೆ ಸೇರುವ ನಿರೀಕ್ಷೆಯಿದೆ. ಸೋನಿಯಾ, ರಾಹುಲ್ ಮತ್ತು ನಾನು ಅದನ್ನು ಸರಿಪಡಿಸುತ್ತೇವೆ. ರಾಹುಲ್ ಗಾಂಧಿ ಭೇಟಿಯ ನಂತರ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರನ್ನು ದೆಹಲಿಗೆ ಕರೆಯಲಾಗುವುದು ಎಂದು ಖರ್ಗೆ ಹೇಳಿದ್ದಾರೆ.
ಈ ಎಲ್ಲ ಬೆಳವಣಿಗೆಗಳ ನಡುವೆ ಡಿಕೆ ಶಿವಕುಮಾರ್ ನೇರವಾಗಿ ಎಲ್ಲಿಯೂ ಹೇಳುತ್ತಿಲ್ಲ. ತನ್ನ ಬೆಂಬಲಿಗರಿಂದಲೂ ಹೇಳಿಕೆ ಕಡಿಮೆ ಮಾಡಿಸಿದ್ದಾರೆ.
ಆದಾಗ್ಯೂ, ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ದಾಳ ಉಳಿಸುವುದನ್ನು ಮುಂದುವರೆಸಿದ್ದಾರೆ. ಕಳೆದೊಂದು ವಾರದಿಂದಲೂ ಡಿಕೆ ಶಿವಕುಮಾರ್ ಬೆಂಬಲಿಗ ಶಾಸಕರು, ಮುಖ್ಯಮಂತ್ರಿ ಸ್ಥಾನದ ಬದಲಾವಣೆಗಾಗಿ ಒತ್ತಡ ಹೇರುತ್ತಿದ್ದಾರೆ. ಡಿಕೆ ಶಿವಕುಮಾರ್ ಕೂಡಾ ಈ ಹುದ್ದೆ ಮೇಲೆ ಮಹತ್ವಕಾಂಕ್ಷೆ ಬಿಟ್ಟಿಲ್ಲ.
ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಹೊರಹೋಗುವ ಸುಳಿವು ನೀಡುವ ಮೂಲಕ ನನಗೆ ಸಿಎಂ ಸ್ಥಾನ ಬೇಕು ಅಂತಾ ಪರೋಕ್ಷವಾಗಿ ಹೈಕಮಾಂಡ್ ಗೆ ಸಂದೇಶ ರವಾನಿಸಿದ್ದಾರೆ.
Advertisement