

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಪಟ್ಟಕ್ಕಾಗಿ ನಡೆಯುತ್ತಿರುವ ಫೈಟ್ ಕ್ಲೈಮ್ಯಾಕ್ಸ್ ಹಂತ ತಲುಪಿದ್ದು, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಶನಿವಾರ ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸ ಕಾವೇರಿ ಭೇಟಿ ನೀಡಲಿದ್ದಾರೆ.
ಹೈಕಮಾಂಡ್ ಸೂಚನೆ ಹಿನ್ನೆಲೆಯಲ್ಲಿ ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ಡಿಕೆ ಶಿವಕುಮಾರ್ ಅವರಿಗೆ ಕರೆ ಮಾಡಿ, ನಾಳೆ ಬಗ್ಗೆ 9.30ಕ್ಕೆ ಕಾವೇರಿ ನಿವಾಸಕ್ಕೆ ಬನ್ನಿ ಎಂದು ಹೇಳಿದ್ದಾರೆ.
ಸಿಎಂ ಆಹ್ವಾನ ಒಪ್ಪಿದ ಡಿಸಿಎಂ ಡಿಕೆ ಶಿವಕುಮಾರ್ ಅವರು ಬೆಳಗ್ಗೆ ಸಿದ್ದರಾಮಯ್ಯ ಅವರ ನಿವಾಸಕ್ಕೆ ತೆರಳುತ್ತಿದ್ದು, ಉಭಯ ನಾಯಕರ ಬ್ರೇಕ್ ಫಾಸ್ಟ್ ಮೀಟಿಂಗ್ ತೀವ್ರ ಕುತೂಹಲ ಕೆರಳಿಸಿದೆ.
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಅವರು, ಹೈಕಮಾಂಡ್ ನವರು ನನಗೆ ಮತ್ತು ಡಿಕೆ ಶಿವಕುಮಾರ್ ಗೆ ಕರೆ ಮಾಡಿದ್ದರು. ಇಬ್ಬರು ಕುಳಿತು ಮಾತಾಡಿ ಎಂದಿದ್ದಾರೆ. ಹೈಕಮಾಂಡ್ ಏನು ಹೇಳುತ್ತೆ ಅದನ್ನು ಕೇಳುತ್ತೇನೆ. ಹೈಕಮಾಂಡ್ ನಾಯಕರು ದೆಹಲಿಗೆ ಕರೆದರೆ ಹೋಗುತ್ತೇನೆ ಎಂದು ಹೇಳಿದ್ದಾರೆ. ಆದರೆ ತಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಹೇಳುವ ಮೂಲಕ ತಾವೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದಾಗಿ ತಿಳಿಸಿದ್ದಾರೆ.
ಇಂದು ಸಂಜೆ 7:45ಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿಗೆ ತೆರಳಲು ಫ್ಲೈಟ್ ಬುಕ್ ಮಾಡಿದ್ದರು. ಆದರೆ ಕೊನೆ ಕ್ಷಣದಲ್ಲಿ ದೆಹಲಿ ಪ್ರವಾಸ ಮುಂದೂಡಿದ್ದಾರೆ ಎನ್ನಲಾಗಿದೆ. ಇದೇ ವೇಳೆ ಹೈಕಮಾಂಡ್ ನಾಯಕರ ಸೂಚನೆ ಮೇರೆಗೆ ನಾಳೆ ಸಿಎಂ ಸಿದ್ದರಾಮಯ್ಯ-ಡಿಸಿಎಂ ಡಿ.ಕೆ.ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಲಿದ್ದಾರೆ.
Advertisement