ರಾಹುಲ್ ಒಬ್ಬಂಟಿ ಅಲ್ಲ, ಅವರೊಂದಿಗೆ ಕೋಟ್ಯಾಂತರ ಕಾರ್ಯಕರ್ತರಿದ್ದಾರೆಂಬುದನ್ನು ಕೊಲೆಗಡುಕ ಮನಸ್ಸುಗಳಿಗೆ ತಿಳಿದಿರಲಿ: BJPಗೆ ಸಿಎಂ ಸಿದ್ದರಾಮಯ್ಯ

ಸಂಘ ಪರಿವಾರದ ದುರುಳರಿಂದ ಪ್ರಾಣ ಕಳೆದುಕೊಂಡವರು ಒಬ್ಬರಾ? ಇಬ್ಬರಾ? ಮಹಾತ್ಮ ಗಾಂಧಿಯವರಿಂದ ಆರಂಭಗೊಂಡ ಈ ಹತ್ಯಾ ಸರಣಿ ಗೋವಿಂದ ಪನ್ಸಾರೆ, ನರೇಂದ್ರ ದಾಬೋಲ್ಕರ್, ಎಂ.ಎಂ.ಕಲಬುರ್ಗಿ, ಗೌರಿ ಲಂಕೇಶ್ ಹೀಗೆ ಪಟ್ಟಿ ಬೆಳೆಯುತ್ತಾ ಹೋಗುತ್ತದೆ.
Randeep Singh Surjewala, Mallikarjun Kharge, Rahul Gandhi, Siddaramaiah and DK Shivakumar
ಮತ ಅಧಿಕಾರ ರ‍್ಯಾಲಿ ಸಂದರ್ಭದಲ್ಲಿ ರಣದೀಪ್ ಸಿಂಗ್ ಸುರ್ಜೇವಾಲಾ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್.
Updated on

ಬೆಂಗಳೂರು: ರಾಹುಲ್ ಗಾಂಧಿಯವರ ಕುಟುಂಬಕ್ಕೆ ಪ್ರಾಣ ಬೆದರಿಕೆ ಇದು ಮೊದಲಲ್ಲ. ಇಂತಹ ಕೊಲೆಗಡುಕರಿಂದಲೇ ಅವರು ತಮ್ಮ ಅಜ್ಜಿ ಮತ್ತು‌ ಅಪ್ಪನನ್ನು ಕಳೆದುಕೊಂಡವರು. ಆದರೆ, ಅವರು ಈಗ ಒಬ್ಬಂಟಿ ಅಲ್ಲ, ಅವರ ಬೆಂಬಲಕ್ಕೆ ಕೋಟ್ಯಂತರ ಸಂಖ್ಯೆಯ ಕಾರ್ಯಕರ್ತರಿದ್ದಾರೆ ಎನ್ನುವುದು ಬಿಜೆಪಿಯ ಕೊಲೆಗಡುಕ ಮನಸ್ಸುಗಳಿಗೆ ತಿಳಿದಿರಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಗೆ ಬಿಜೆಪಿ ವಕ್ತಾರನೊಬ್ಬನು “ಎದೆಗೆ ಗುಂಡು ಹೊಡೆಯುತ್ತೇವೆ” ಎಂದು ನೀಡಿದ ಕೊಲೆ ಬೆದರಿಕೆಯು ದೇಶದ ರಾಜಕೀಯ ವಲಯದ ತೀವ್ರ ಆಕ್ರೋಶ ಮೂಡಿಸಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬಿಜೆಪಿ ಮತ್ತು ಸಂಘಪರಿವಾರದ ವಿರುದ್ಧ ನಿರಂತರ ಧ್ವನಿಯೆತ್ತುತ್ತಿರುವ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿಯವರ ಎದೆಗೆ ಗುಂಡು ಹೊಡೆಯುತ್ತೇವೆ, ಹುಷಾರ್..!! ಎಂದು ಬಿಜೆಪಿ ವಕ್ತಾರರೊಬ್ಬರು ಬಹಿರಂಗವಾಗಿ ಜೀವ ಬೆದರಿಕೆ ಒಡ್ಡಿರುವ ಬಗ್ಗೆ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು ನೋಡಿದರೆ ಹೇಳಿಕೆಯ ಬಗ್ಗೆ ಅವರಿಗೂ ಸಮ್ಮತಿ ಇದೆಯೇ ಎಂಬ ಪ್ರಶ್ನೆ ಸಹಜವಾಗಿ ಎಲ್ಲರಲ್ಲೂ ಮೂಡಿದೆ.

ಬೆದರಿಕೆ ಒಡ್ಡಿ ಸೈದ್ಧಾಂತಿಕ ವಿರೋಧಿಗಳ ಧ್ವನಿ ಅಡಗಿಸುವುದು, ಅದಕ್ಕೂ ಬಗ್ಗದಿದ್ದಾಗ ಅವರನ್ನೇ ಇಲ್ಲವಾಗಿಸುವುದು ಬಿಜೆಪಿ ಮತ್ತು ಸಂಘಪರಿವಾರಕ್ಕೆ ಹೊಸದೇನಲ್ಲ. ಮೊದಲೆಲ್ಲ ತೆರೆಮರೆಯಲ್ಲಿ‌ ನಿಂತು ತಮ್ಮ ವಿರೋಧಿಗಳ‌ ಹತ್ಯೆಗಳಿಗೆ ಬೆಂಬಲ ನೀಡುತ್ತಾ ಬಂದವರು, ಈಗ ನೇರಾ ನೇರವಾಗಿ ಅಖಾಡಕ್ಕೆ ಇಳಿದಿದ್ದಾರೆ. ಎದುರಾಳಿಗಳನ್ನು ಸಂವಾದ, ಚರ್ಚೆಗಳ ಮೂಲಕ ಸೈದ್ಧಾಂತಿಕವಾಗಿ ಎದುರಿಸಲಾಗದವರು ದೈಹಿಕವಾಗಿ ಮುಗಿಸಲು ಹೊರಟಿರುವುದು ಅವರ ಬೌದ್ಧಿಕ ದಿವಾಳಿತನವನ್ನು ತೋರಿಸುತ್ತದೆ ಎಂದು ಹೇಳಿದ್ದಾರೆ.

Randeep Singh Surjewala, Mallikarjun Kharge, Rahul Gandhi, Siddaramaiah and DK Shivakumar
ಭಾರತದಲ್ಲಿ ಬಿಜೆಪಿ ಪ್ರಜಾಪ್ರಭುತ್ವವನ್ನು ಸಂಪೂರ್ಣವಾಗಿ ದುರ್ಬಲಗೊಳಿಸುತ್ತಿದೆ: ರಾಹುಲ್ ಗಾಂಧಿ

ಸಂಘ ಪರಿವಾರದ ದುರುಳರಿಂದ ಪ್ರಾಣ ಕಳೆದುಕೊಂಡವರು ಒಬ್ಬರಾ? ಇಬ್ಬರಾ? ಮಹಾತ್ಮ ಗಾಂಧಿಯವರಿಂದ ಆರಂಭಗೊಂಡ ಈ ಹತ್ಯಾ ಸರಣಿ ಗೋವಿಂದ ಪನ್ಸಾರೆ, ನರೇಂದ್ರ ದಾಬೋಲ್ಕರ್, ಎಂ.ಎಂ.ಕಲಬುರ್ಗಿ, ಗೌರಿ ಲಂಕೇಶ್ ಹೀಗೆ ಪಟ್ಟಿ ಬೆಳೆಯುತ್ತಾ ಹೋಗುತ್ತದೆ. ಇವರೆಲ್ಲರ ಕೊಲೆಗಾರರಿಗೂ ತಮಗೂ ಸಂಬಂಧವಿಲ್ಲವೆಂದು ಹೇಳಿ ಸಂಘಪರಿವಾರದ ನಾಯಕರು ಸುಲಭದಲ್ಲಿ ತಲೆತೊಳೆದುಕೊಂಡರೂ, ಅವರ ಕೈಗಳಿಗಂಟಿದ ರಕ್ತದ ಕಲೆಗಳನ್ನು ತೊಳೆಯಲಾಗಲಿಲ್ಲ.

ಈ ಹಿಂದೆ ನನಗೆ ಮಾತ್ರವಲ್ಲ ನಾಡಿನ ಅನೇಕ ಸಾಹಿತಿಗಳು, ಚಿಂತಕರು ಮತ್ತು ಹೋರಾಟಗಾರರಿಗೂ ಕೊಲೆ ಬೆದರಿಕೆ ಒಡ್ಡಿ ಪತ್ರಗಳನ್ನು ಬರೆಯಲಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇಂತಹ ಬೆದರಿಕೆಗಳಿಗೆ ಹೆದರಿ ನಂಬಿದ ಸಿದ್ಧಾಂತಕ್ಕೆ ಬೆನ್ನು ಹಾಕುವ ಜಾಯಮಾನ ನನ್ನದಲ್ಲ. ಒಂದಲ್ಲಾ ಒಂದು ದಿನ ನ್ಯಾಯದ ಎದುರು ಈ ಎಲ್ಲಾ ದುಷ್ಟರು ಮಂಡಿಯೂರುತ್ತಾರೆಂಬ ಭರವಸೆ ನನಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com