ವಿಶ್ರಾಂತಿ ಪಡೆಯಲು ಖರ್ಗೆಗೆ ಮನವಿ: ಅಗತ್ಯ ಬಂದಾಗ ಸೂಕ್ತ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯ ಪಕ್ಷಕ್ಕಿದೆ; ಕೆ.ಸಿ ವೇಣುಗೋಪಾಲ್

ಯಾವಾಗ ಪಕ್ಷಕ್ಕೆ ತೀರ್ಮಾನ ತೆಗೆದುಕೊಳ್ಳುವ ಅಗತ್ಯ ಬರುತ್ತೋ ಆವಾಗ ಪಕ್ಷ ತೀರ್ಮಾನ ತೆಗೆದುಕೊಳ್ಳಲಿದೆ. ಕಾಂಗ್ರೆಸ್​ಗೆ ತಮ್ಮ ಪಕ್ಷದಲ್ಲಿ ಏನಾಗಬೇಕು ಎಂಬ ಬಗ್ಗೆ ನಿರ್ಧರಿಸುವ ಸಾಮರ್ಥ್ಯ ಇದೆ.
KC venugopal
ಕೆ.ಸಿ ವೇಣುಗೋಪಾಲ್
Updated on

ಬೆಂಗಳೂರು: ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಆರೋಗ್ಯ ಸುಧಾರಿಸುತ್ತಿದೆ. ಶ್ರಮಜೀವಿಯಾದ ಅವರು ವಿಶ್ರಾಂತಿ ಪಡೆಯಲು ಮನವಿ ಮಾಡಿದ್ದೇವೆ" ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ತಿಳಿಸಿದರು.

ಮಲ್ಲಿಕಾರ್ಜುನ ಖರ್ಗೆ ಅವರ ಆರೋಗ್ಯ ವಿಚಾರಿಸಿದ ಬಳಿಕ ವೇಣುಗೋಪಾಲ್ ಅವರು ಮಾಧ್ಯಮಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಆರೋಗ್ಯ ಸಮಸ್ಯೆಯಿಂದ ಚಿಕಿತ್ಸೆ ಪಡೆದಿರುವ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಆರೋಗ್ಯ ವಿಚಾರಿಸಲು ಭೇಟಿಯಾಗಿದ್ದೇವು.

ಈಗ ಅವರ ಆರೋಗ್ಯ ಸುಧಾರಿಸುತ್ತಿದೆ. ನಮ್ಮ ಅಧ್ಯಕ್ಷರು ಶ್ರಮಜೀವಿ. ದಿನದ 24 ತಾಸು ಕೂಡ ಪಕ್ಷಕ್ಕಾಗಿ ದುಡಿಯುತ್ತಾರೆ. ಎಲ್ಲೇ ಅವರ ಉಪಸ್ಥಿತಿ ಬಯಸಿದರೂ ಅವರು ಪಕ್ಷದ ಕಾರ್ಯಕ್ರಮಗಳಿಗೆ ತೆರಳುತ್ತಿದ್ದರು. ಅದು ಈಶಾನ್ಯ ರಾಜ್ಯಗಳಾಗಲಿ, ಯಾವುದೇ ಮೂಲೆ ಇದ್ದರೂ ಅವರು ತೆರಳುತ್ತಿದ್ದರು ಎಂದರು.

ಅವರು ಮತ್ತೆ ಪಕ್ಷದ ಕೆಲಸದಲ್ಲಿ ತೊಡಗಿಸಿಕೊಳ್ಳಲು ಉತ್ಸುಕರಾಗಿದ್ದು, ಆರೋಗ್ಯ ಗಮನಿಸಿಕೊಂಡು ಸಂಪೂರ್ಣ ವಿಶ್ರಾಂತಿ ತೆಗೆದುಕೊಳ್ಳುವಂತೆ ನಾವು ಮನವಿ ಮಾಡಿದ್ದೇವೆ. ಸೋನಿಯಾ ಗಾಂಧಿ ಹಾಗೂ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಪ್ರತಿನಿತ್ಯ ಖರ್ಗೆ ಅವರ ಸಂಪರ್ಕದಲ್ಲಿ ಇದ್ದಾರೆ. ಅವರ ಆರೋಗ್ಯ ವಿಚಾರಿಸುತ್ತಿದ್ದಾರೆ ಎಂದು ತಿಳಿಸಿದರು.

KC venugopal
ಸಿದ್ದರಾಮಯ್ಯ ಒಪ್ಪದೇ ಅಧಿಕಾರ ಹಸ್ತಾಂತರ ಅಸಾಧ್ಯ: 'ನಾನೇ ನಂಬರ್-1'; ಸಮಾವೇಶದ ಮೂಲಕ ಸಿಎಂ ಸಂದೇಶ!

ಸಿಎಂ ಬದಲಾವಣೆ ಸಂಬಂಧ ಹೇಳಿಕೆಗಳ ಬಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಪ್ರತಿಕ್ರಿಯಿಸಿ, ಯಾವಾಗ ಪಕ್ಷಕ್ಕೆ ತೀರ್ಮಾನ ತೆಗೆದುಕೊಳ್ಳುವ ಅಗತ್ಯ ಬರುತ್ತೋ ಆವಾಗ ಪಕ್ಷ ತೀರ್ಮಾನ ತೆಗೆದುಕೊಳ್ಳಲಿದೆ. ಕಾಂಗ್ರೆಸ್​ಗೆ ತಮ್ಮ ಪಕ್ಷದಲ್ಲಿ ಏನಾಗಬೇಕು ಎಂಬ ಬಗ್ಗೆ ನಿರ್ಧರಿಸುವ ಸಾಮರ್ಥ್ಯ ಇದೆ. ಅದನ್ನು ನಮ್ಮ ಪಕ್ಷಕ್ಕೆ ಬಿಟ್ಟು ಬಿಡಿ. ಪಕ್ಷ ತೀರ್ಮಾನ ತೆಗೆದುಕೊಳ್ಳುವ ಸಾಮರ್ಥ್ಯ ಹೊಂದಿದೆ ಎಂದು ಸ್ಪಷ್ಟಪಡಿಸಿದರು.

ನಾನು ಪ್ರತಿ ಬಾರಿ ಕರ್ನಾಟಕಕ್ಕೆ ಬಂದಾಗಲೂ ಇದೇ ಪ್ರಶ್ನೆ, ಇದೇ ಅಜೆಂಡಾ ಇರುತ್ತದೆ. ನಮ್ಮ ಪಕ್ಷದಲ್ಲಿ ಏನಾಗಬೇಕು ಎಂಬ ತೀರ್ಮಾನ ಮಾಡುವ ಸಾಮರ್ಥ್ಯ ಕಾಂಗ್ರೆಸ್ ಪಕ್ಷಕ್ಕೆ ಇದೆ. ಈ ತೀರ್ಮಾನ ಮಾಡುವ ಅಧಿಕಾರವನ್ನು ನಮಗೆ ಬಿಡಿ. ಅಗತ್ಯ ಬಿದ್ದಾಗ ಪಕ್ಷ ತೀರ್ಮಾನ ಮಾಡಲಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com