ಜಾತಿ ಸಮೀಕ್ಷೆ ನಡೆಸುವ ನೆಪದಲ್ಲಿ ರಾಜ್ಯ ಸರ್ಕಾರ ಜನರಲ್ಲಿ ಗೊಂದಲ ಮೂಡಿಸುತ್ತಿದೆ: ವಿಜಯೇಂದ್ರ

ತಮ್ಮ ಮನೆಯ ಸಮೀಕ್ಷೆ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಪ್ರತಿಕ್ರಿಯೆಯನ್ನು ನೋಡಿದಾಗಲೇ ಸರ್ಕಾರದೊಳಗಿನ ಅವ್ಯವಸ್ಥೆಯನ್ನು ಹೇಗಿದೆ ಎಂಬುದನ್ನು ತಿಳಿಸುತ್ತಿದೆ. 60 ಪ್ರಶ್ನೆಗಳನ್ನು ಜನಸಾಮಾನ್ಯರ ಮುಂದೆ ಇಟ್ಟಿದ್ದಾರೆ.
BY Vijayendra, Cm Siddaramaiah casual Images
ಬಿ.ವೈ. ವಿಜಯೇಂದ್ರ, ಸಿಎಂ ಸಿದ್ದರಾಮಯ್ಯ
Updated on

ಮೈಸೂರು: ಜಾತಿ ಸಮೀಕ್ಷೆ ನಡೆಸುವ ನೆಪದಲ್ಲಿ ಜನರಲ್ಲಿ ಗೊಂದಲ ಮೂಡಿಸಲಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ರಾಜ್ಯ ಸರ್ಕಾರದ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರಿಗೆ ಮಾತನಾಡಿದ ಅವರು, ತಮ್ಮ ಮನೆಯ ಸಮೀಕ್ಷೆ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಪ್ರತಿಕ್ರಿಯೆಯನ್ನು ನೋಡಿದಾಗಲೇ ಸರ್ಕಾರದೊಳಗಿನ ಅವ್ಯವಸ್ಥೆಯನ್ನು ಹೇಗಿದೆ ಎಂಬುದನ್ನು ತಿಳಿಸುತ್ತಿದೆ. 60 ಪ್ರಶ್ನೆಗಳನ್ನು ಜನಸಾಮಾನ್ಯರ ಮುಂದೆ ಇಟ್ಟಿದ್ದಾರೆ. ಈ ಮೂಲಕ ಎಲ್ಲ ಸಮಾಜಗಳಲ್ಲೂ ಗೊಂದಲ ಸೃಷ್ಟಿಯಾಗಿದೆ. ಎಂದು ಕಿಡಿಕಾರಿದರು.

ಪೂರ್ವತಯಾರಿ ಇಲ್ಲದೇ ಆತುರಾತುರವಾಗಿ ರಾಜ್ಯ ಸರ್ಕಾರ ಈ ನಿರ್ಣಯ ಮಾಡಿದ್ದು, ಮೇಲ್ನೋಟಕ್ಕೆ ಗೊತ್ತಾಗುತ್ತದೆ. ವಿಕಲಚೇತನರನ್ನೂ ಸಮೀಕ್ಷೆಗೆ ನಿಯೋಜಿಸಿದ್ದಾರ. ಇದರ ಬಗ್ಗೆ ಸಾಕಷ್ಟು ಟೀಕೆ ವ್ಯಕ್ತವಾಗಿದೆ. ಮುಖ್ಯಮಂತ್ರಿಗಳಿಗೆ ಇಷ್ಟೊಂದು ಆತುರ ಯಾಕೆ ಎಂದು ಪ್ರಶ್ನಿಸಿದರು.

ಸರ್ಕಾರ ಆರ್ಥಿಕ- ಸಾಮಾಜಿಕ- ಶೈಕ್ಷಣಿಕ ನ್ಯಾಯ ನೀಡಲಿ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಬೇಕೆಂಬ ವಿಚಾರದಲ್ಲಿ ಬಿಜೆಪಿಯಲ್ಲಿ ಗೊಂದಲ ಇಲ್ಲ. ಪ್ರಧಾನಿ ಮೋದಿ ಅವರು ಒಂದು ಐತಿಹಾಸಿಕ ನಿರ್ಧಾರವನ್ನು ಘೋಷಿಸಿದ್ದಾರೆ. ಸ್ವಾತಂತ್ರ್ಯ ಬಂದ ನಂತರದಲ್ಲಿ ಯಾವುದೇ ಪ್ರಧಾನಮಂತ್ರಿಗಳು ನಿರ್ಧಾರ ಮಾಡದೇ ಇರುವಂಥ ನಿರ್ಧಾರ ಇದಾಗಿದೆ. ಇಡೀ ದೇಶದಲ್ಲಿ ಜಾತಿ ಜನಗಣತಿ ಪ್ರಾರಂಭಿಸುವುದಾಗಿ ಪ್ರಕಟಿಸಿದ್ದಾರೆ. ಇದರ ನಡುವೆ ಕರ್ನಾಟಕದಲ್ಲಿ ಈ ರೀತಿ ಗೊಂದಲವನ್ನು ಸೃಷ್ಟಿ ಮಾಡುವ ಅವಶ್ಯಕತೆ ಇರಲಿಲ್ಲ ಎಂದು ಹೇಳಿದ್ದಾರೆ.

BY Vijayendra, Cm Siddaramaiah casual Images
ಬಿಹಾರ ಚುನಾವಣೆ ಬಳಿಕ ರಾಜ್ಯ ರಾಜಕೀಯದಲ್ಲಿ ಅಲ್ಲೋಲ-ಕಲ್ಲೋಲ: ಬಿ.ವೈ ವಿಜಯೇಂದ್ರ ಭವಿಷ್ಯ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com