ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿ ರಾಜಕೀಯ, ಆದ್ರೂ ಯಾವುದೇ ಲಾಭ ಆಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಹಿಂದುಗಳೆಂದರೆ ರಾಜಕೀಯ, ಅಪಪ್ರಚಾರ ಮಾಡುವುದಲ್ಲ, ಸುಳ್ಳು ಹೇಳುವುದಲ್ಲ. ಯಾರೇ ಆದರೂ ಮನಷ್ಯತ್ವವಿರಬೇಕು ಎಂದರು.
CM Siddaramaiah
ಸಿಎಂ ಸಿದ್ದರಾಮಯ್ಯ
Updated on

ಮೈಸೂರು: ಬಿಜೆಪಿಯ "ಧರ್ಮಸ್ಥಳ ಚಲೋ" ರ್ಯಾಲಿ "ರಾಜಕೀಯ ಲಾಭಕ್ಕಾಗಿ" ಎಂದು ಟೀಕಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಇದರಿಂದ ವಿರೋಧ ಪಕ್ಷಕ್ಕೆ ಯಾವುದೇ ರಾಜಕೀಯ ಲಾಭವಾಗುವುದಿಲ್ಲ ಎಂದು ಸೋಮವಾರ ಹೇಳಿದ್ದು ಹೇಳಿದ್ದಾರೆ.

ಧರ್ಮಸ್ಥಳ ಮತ್ತು ಚಾಮುಂಡಿ ಬೆಟ್ಟದ ವಿಷಯದಲ್ಲಿ ಬಿಜೆಪಿಯ ನಡವಳಿಕೆ "ಬೂಟಾಟಿಕೆ" ಎಂದು ಕರೆದ ಮುಖ್ಯಮಂತ್ರಿ, ಅವರು ಮಾಡುತ್ತಿರುವ "ಬೂಟಾಟಿಕೆ"ಯಿಂದ ಹಿಂದೂಗಳು ತಮ್ಮೊಂದಿಗೆ ಬರುತ್ತಾರೆ ಎಂದು ಭಾವಿಸಿದ್ದಾರೆ. ಆದರೆ ಅದು ತಪ್ಪು ಎಂದು ತಿರುಗೇಟು ನೀಡಿದರು.

ಧರ್ಮಸ್ಥಳದ ವಿರುದ್ಧ ಪಿತೂರಿ ಮತ್ತು ಅಪಪ್ರಚಾರ ಖಂಡಿಸಿ ಬಿಜೆಪಿ ಧರ್ಮಸ್ಥಳಕ್ಕೆ ಯಾತ್ರೆ ಕೈಗೊಂಡಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ರಾಜಕೀಯವಾಗಿ ಯಾತ್ರೆ ಕೈಗೊಂಡಿದೆ. ಅವರಿಗೆ ರಾಜಕೀಯ ಲಾಭ ಸಿಗುತ್ತದೆ ಎಂದು ಭಾವಿಸಿದ್ದಾರೆ. ಆದರೆ ಅದು ಸಿಗುವುದಿಲ್ಲ. ಏಕೆಂದರೆ ಧರ್ಮಸ್ಥಳದ ಬಗ್ಗೆ ನಮಗೆ ಅಪಾರವಾದ ಗೌರವವಿದೆ. ಎಸ್ಐಟಿ ರಚಿಸಿದಾಗ ವಿರೋಧ ಮಾಡದೆ ಇದ್ದವರು, ನಂತರದಲ್ಲಿ ಏನೂ ಸಿಗುವುದಿಲ್ಲ ಎಂದು ತಿಳಿದು ವಿರೋಧಿಸುತ್ತಿದ್ದಾರೆ. ಇದು ಢೋಂಗಿತನ ಎಂದು ವಾಗ್ದಾಳಿ ನಡೆಸಿದರು.

CM Siddaramaiah
'ಧರ್ಮಸ್ಥಳ ಸತ್ಯ ಯಾತ್ರೆ'ಗೆ ಚಾಲನೆ: NIA ತನಿಖೆಗೆ ಜೆಡಿಎಸ್ ಆಗ್ರಹ

ಇನ್ನು ಚಾಮುಂಡಿ ಬೆಟ್ಟ ಮತ್ತು ದೇವಾಲಯದ ವಿಷಯದಲ್ಲಿ 'ಚಾಮುಂಡಿ ಚಲೋ' ಮಾಡಬೇಕಾಗುತ್ತದೆ ಎಂದು ಬಿಜೆಪಿ ಎಚ್ಚರಿಸಿರುವ ಕುರಿತ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, "ಇಂತಹ ಕೆಲಸಗಳನ್ನು ಮಾಡುವುದರಿಂದ ಹಿಂದುತ್ವ ಬಲಗೊಳ್ಳುತ್ತದೆ ಮತ್ತು ಹಿಂದೂಗಳು ತಮ್ಮೊಂದಿಗೆ ಬರುತ್ತಾರೆ ಎಂದು ಬಿಜೆಪಿ ಭಾವಿಸಿದೆ" ಎಂದರು.

"ನಾನೂ ಒಬ್ಬ ಹಿಂದೂ..... ನಮ್ಮ ಹಳ್ಳಿಯಲ್ಲಿ ನಾವು ರಾಮ ಮಂದಿರವನ್ನು ನಿರ್ಮಿಸಿಲ್ಲವೇ? ಹಿಂದುಗಳೆಂದರೆ ರಾಜಕೀಯ, ಅಪಪ್ರಚಾರ ಮಾಡುವುದಲ್ಲ, ಸುಳ್ಳು ಹೇಳುವುದಲ್ಲ. ಯಾರೇ ಆದರೂ ಮನಷ್ಯತ್ವವಿರಬೇಕು ಎಂದರು. ಬಿಜೆಪಿಯವರು ದಸರಾ ಹಬ್ಬದಲ್ಲೂ ರಾಜಕಾರಣ ಮಾಡುತ್ತಿದ್ದಾರೆ. ಸುಳ್ಳು ಹೇಳುವುದು ಬಿಟ್ಟು ಬೇರೇನಾದರೂ ಅವರಿಗೆ ಬರುತ್ತದೆಯೇ ಎಂದರು." ಎಂದು ಅವರು ಹೇಳಿದರು.

ಬೂಕರ್ ಪ್ರಶಸ್ತಿ ಎಷ್ಟು ಜನರಿಗೆ ಬಂದಿದೆ?

"ಬಾನು ಮುಷ್ತಾಕ್ ಒಬ್ಬ ಕನ್ನಡ ಬರಹಗಾರ್ತಿ. ಅವರು ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತರು ಎಂಬ ಕಾರಣಕ್ಕೆ ಅವರನ್ನು ದಸರಾ ಉದ್ಘಾಟನೆಗೆ ಆಹ್ವಾನಿಸಲಾಗಿದೆ. ಈ ಪ್ರಶಸ್ತಿ ಎಷ್ಟು ಜನರಿಗೆ ಬಂದಿದೆ? ಅವರ ಸಾಧನೆಗೆ ಗೌರವವಾಗಿ, ದಸರಾ ಉದ್ಘಾಟನೆಗೆ ಅವರನ್ನು ಆಹ್ವಾನಿಸಲಾಗಿದೆ" ಎಂದು ಸಿಎಂ ಹೇಳಿದರು.

ದಸರಾ ಹಬ್ಬ ನಾಡ ಹಬ್ಬ

ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿ ಅಲ್ಲ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಹೇಳಿಕೆ ತೀವ್ರ ವಿವಾದಕ್ಕೆ ಕಾರಣವಾಗಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, "ಇದು ಹಿಂದೂಗಳ ಆಸ್ತಿಯೇ ಇರಬಹುದು. ಆದರೆ ದಸರಾ ಒಂದು ನಾಡ ಹಬ್ಬ (ರಾಜ್ಯ ಹಬ್ಬ), ಇದನ್ನು ಎಲ್ಲಾ ಹಿಂದೂಗಳು, ಮುಸ್ಲಿಮರು, ಕ್ರಿಶ್ಚಿಯನ್ನರು, ಬೌದ್ಧರು, ಸಿಖ್ಖರು, ಜೈನರು ಒಟ್ಟಾಗಿ ಆಚರಿಸುತ್ತಾರೆ. ನಾವು ಸಹ ಅದೇ ರೀತಿ ಆಚರಿಸುತ್ತಿದ್ದೇವೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com