ಧರ್ಮಸ್ಥಳ ಚಲೋ ಯಾತ್ರೆ: BJP ವಿರುದ್ಧ ಅವಹೇಳನಕಾರಿ ಪೋಸ್ಟ್, ದೂರು ದಾಖಲು

ವಿಡಿಯೋ ತುಣುಕನ್ನು ಬಳಸಿಕೊಂಡು ಸಾಮಾಜಿಕ ಜಾಲಾತಾಣದಲ್ಲಿ ನಮ್ಮ ಕಾರ್ಯಕ್ರಮವನ್ನು ಅವಮಾನಿಸುವ ದುರುದ್ದೇಶದಿಂದ ಮಾತ್ರವಲ್ಲದೇ, ನಮ್ಮ ರಾಜ್ಯದಲ್ಲಿರುವ ಒಂದು ಸಮುದಾಯದ ಕಲೆಯನ್ನು ಅವಮಾನಿಸಲಾಗಿದೆ.
BJP
ಬಿಜೆಪಿ ದೂರು
Updated on

ಬೆಂಗಳೂರು: ಪಕ್ಷದ ವತಿಯಿಂದ ಸೆ.1ರಂದು ನಡೆದ ʼಧರ್ಮಸ್ಥಳ ಚಲೋʼಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಗಳನ್ನು ಹಾಕಲಾಗುತ್ತಿದ್ದು, ಇದರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಬಿಜೆಪಿ ಆಗ್ರಹಿಸಿದೆ.

ಈ ಸಂಬಂಧ ಬಿಜೆಪಿ ರಾಜ್ಯ ಸಂಚಾಲಕ ವಸಂತ್ ಕುಮಾರ್ ಅವರು ಉಪ್ಪಾರಪೇಟೆ ಪೊಲೀಸರಿಗೆ ದೂರು ನೀಡಿದ್ದು, ಆಕ್ಷೇಪಾರ್ಹ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಬಿಜೆಪಿ ವತಿಯಿಂದ ಧರ್ಮಸ್ಥಳ ವಿರುದ್ಧದ ಷಡ್ಯಂತ್ರ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಬೇಕೆಂದು ಆಗ್ರಹಿಸಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಸೆ.1ರಂದು ಧರ್ಮಸ್ಥಳ ಚಲೋ ಹಾಗೂ ಧರ್ಮಸ್ಥಳದಲ್ಲಿ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ನಮ್ಮ ಪಕ್ಷದ ನಾಯಕರುಗಳು, ವಿಧಾನಸಭೆ ಹಾಗೂ ವಿಧಾನ ಪರಿಷತ್‌ನ ಸದಸ್ಯರುಗಳು ಹಾಗೂ ಅಸಂಖ್ಯಾತ ಕಾರ್ಯಕರ್ತರು, ಹಿಂದುಧರ್ಮದ ಅನುಯಾಯಿಗಳು ಬಂದಿದ್ದರು.

ಕಾರ್ಯಕ್ರಮದಲ್ಲಿ ನಮ್ಮ ಪಕ್ಷದ ನಾಯಕರು ನಡಿಗೆಯಲ್ಲಿ ಸಮಾವೇಶದ ಸ್ಥಳಕ್ಕೆ ಹೋಗುವ ಸಂದರ್ಭದಲ್ಲಿ ಮಾಡಿರುವ ಒಂದು ವಿಡಿಯೋ ತುಣುಕನ್ನು ಬಳಸಿಕೊಂಡು ಸಾಮಾಜಿಕ ಜಾಲಾತಾಣದಲ್ಲಿ ನಮ್ಮ ಕಾರ್ಯಕ್ರಮವನ್ನು ಅವಮಾನಿಸುವ ದುರುದ್ದೇಶದಿಂದ ಮಾತ್ರವಲ್ಲದೇ, ನಮ್ಮ ರಾಜ್ಯದಲ್ಲಿರುವ ಒಂದು ಸಮುದಾಯದ ಕಲೆಯನ್ನು ಅವಮಾನಿಸಿ "ಹೆಣ್ಣಿಗೆ ನ್ಯಾಯ ಕೊಡಿಸುವ ಕೆಲಸ ಮಾಡದೆ ಧರ್ಮದ ಹೆಸರಲ್ಲಿ ದೊಂಬರಾಟ" ಎಂಬ ಬರಹವನ್ನು ಇನ್ಸ್ಟಾಗ್ರಾಮ್ ಖಾತೆಯಾದ sushmanth3gowda ಈ ಖಾತೆಯಲ್ಲಿ ಸಾಮಾಜಿಕ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

BJP
ಮತ ಖರೀದಿ ಆರೋಪ: ಸಿಎಂ ಸಿದ್ದರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಈ ರೀತಿ ನಮ್ಮ ಕಾರ್ಯಕ್ರಮವನ್ನು ಅವಮಾನಿಸುವ ದುರುದ್ದೇಶದಿಂದ ಮಾತ್ರವಲ್ಲದೇ, ನಮ್ಮ ರಾಜ್ಯದಲ್ಲಿರುವ ಒಂದು ಸಮುದಾಯದ ಕಲೆಯನ್ನು ಅವಮಾನಿಸಿ ವಿಡಿಯೋವನ್ನು ಸೃಷ್ಟಿಸಿರುವ ಹಾಗೂ ಹಂಚಿಕೊಂಡಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಂಡು, ಈ ವಿಡಿಯೋವನ್ನು ಎಲ್ಲಾ ಸಾಮಾಜಿಕ ಜಾಲಾತಾಣಗಳಿಂದ ತೆಗೆಸಲು ಸೂಕ್ತ ಕ್ರಮಕೈಗೊಳ್ಳಬೇಕೆಂದು ದೂರಿನಲ್ಲಿ ಆಗ್ರಹಿಸಿದ್ದಾರೆ.

ದೂರು ಸಲ್ಲಿಕೆ ವೇಳೆ ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ್ ಅವರೂ ಹಾಜರಿದ್ದರು.

ದೂರು ಸಲ್ಲಿಸಿದ ಬಳಿಕ ಪ್ರತಿಕ್ರಿಯೆ ನೀಡಿದ ಅಶ್ವತ್ಥ್ ನಾರಾಯಣ್ ಅವರು, ಧರ್ಮಸ್ಥಳ ಚಲೋ ಮೆರವಣಿಗೆಯಲ್ಲಿ ತೆರಳುತ್ತಿದ್ದ ನಮ್ಮ ನಾಯಕರು ಮತ್ತು ಚುನಾಯಿತ ಪ್ರತಿನಿಧಿಗಳ ವಿಡಿಯೋ ಸೆರೆಹಿಡಿದು ಹಾನಿಕಾರಕ ಕಂಟೆಂಟ್ ಹಾಕಿದ್ದಾರೆ. ಇದನ್ನು ತಡೆಯಲು ಸರಕಾರ, ಗೃಹ ಇಲಾಖೆ ಕ್ರಮ ವಹಿಸಿಲ್ಲ ಎಂದು ಕಿಡಿಕಾರಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com