ಗೆದ್ದಾಗ ಬೀಗುವುದು, ಸೋತಾಗ ವ್ಯವಸ್ಥೆಯನ್ನ ದೂಷಿಸುವುದು ಮತದಾರರು-ಪ್ರಜಾಪ್ರಭುತ್ವಕ್ಕೆ ಮಾಡುವ ಅಪಮಾನ ಅಲ್ಲವೇ?

2004 ರಲ್ಲಿ ಯುಪಿಎ-1 ಸರ್ಕಾರ ಬಂದಿದ್ದು ಇದೇ ಮತಯಂತ್ರಗಳಿಂದ. 2009 ರಲ್ಲಿ ಯುಪಿಎ-2 ಸರ್ಕಾರ ಬಂದಿದ್ದು ಇದೇ ಮತಯಂತ್ರಗಳಿಂದ. 2013 ರಲ್ಲಿ ತಾವು ಮೊದಲ ಬಾರಿ ಮುಖ್ಯಮಂತ್ರಿಗಳಾಗಿದ್ದು ಇದೇ ಮತಯಂತ್ರಗಳಿಂದ.
File photo
ಸಂಗ್ರಹ ಚಿತ್ರ
Updated on

ಬೆಂಗಳೂರು: ಮುಂಬರುವ ಸ್ಥಳೀಯ ಚುನಾವಣೆಗಳಲ್ಲಿ (ಸ್ಥಳೀಯ ಸಂಸ್ಥೆಗಳು) EVM ಯಂತ್ರ ಬದಲಾಗಿ ಮತ ಪತ್ರ (ಬ್ಯಾಲಟ್ ಪೇಪರ್ ) ಬಳಕೆಗೆ ನಿರ್ಧರಿಸಿರುವ ಕಾಂಗ್ರೆಸ್ ಸರ್ಕಾರ, ಒಬ್ಬ ವ್ಯಕ್ತಿ, ಒಂದು ಕುಟುಂಬದ ರಕ್ಷಣೆಗಾಗಿ, ಸಮರ್ಥನೆಗಾಗಿ ಇಡೀ ದೇಶದ ಪ್ರಜಾಪ್ರಭುವ ವ್ಯವಸ್ಥೆಯನ್ನೇ ಬುಡಮೇಲು ಮಾಡುವ ಪಾಪದ ಕೆಲಸಕ್ಕೆ ಕೈಹಾಕಿದೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು, ಸ್ವಾಮಿ ಸಿಎಂ ಸಿದ್ದರಾಮಯ್ಯ ಅವರೇ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರೇ, 2004 ರಲ್ಲಿ ಯುಪಿಎ-1 ಸರ್ಕಾರ ಬಂದಿದ್ದು ಇದೇ ಮತಯಂತ್ರಗಳಿಂದ. 2009 ರಲ್ಲಿ ಯುಪಿಎ-2 ಸರ್ಕಾರ ಬಂದಿದ್ದು ಇದೇ ಮತಯಂತ್ರಗಳಿಂದ. 2013 ರಲ್ಲಿ ತಾವು ಮೊದಲ ಬಾರಿ ಮುಖ್ಯಮಂತ್ರಿಗಳಾಗಿದ್ದು ಇದೇ ಮತಯಂತ್ರಗಳಿಂದ. 2023ರಲ್ಲಿ ತಾವು ಎರಡನೇ ಬಾರಿ ಮುಖ್ಯಮಂತ್ರಿಗಳಾಗಿರುವುದು ಇದೇ ಮತಯಂತ್ರಗಳಿಂದ.

ಈಗ ಅದೇ ಮತಯಂತ್ರಗಳ ಬಗ್ಗೆ ಅನುಮಾನ ವ್ಯಕ್ತಪಡಿಸಿ ಮತ್ತೊಮೆ ಓಬೀರಾಯನ ಕಾಲದ ಮತಪೆಟ್ಟಿಗೆಗೆ ಮರಳುವ ನಿರ್ಧಾರ ಮಾಡಿದ್ದೀರಲ್ಲ ಸ್ವಾಮಿ. ಯಾರನ್ನು ಮೆಚ್ಚಿಸಲು ಈ ನಿರ್ಧಾರ ಮಾಡಿದ್ದೀರಿ? ಎಂದು ಸರ್ಕಾರವನ್ನು ತರಾಟೆ ತೆಗೆದುಕೊಂಡಿದ್ದಾರೆ.

ಯಾರನ್ನು ಮೆಚ್ಚಿಸಲು ಈ ನಿರ್ಧಾರ ಮಾಡಿದ್ದೀರಿ? ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರನ್ನು ಮೆಚ್ಚಿಸಿ ಕುರ್ಚಿ ಉಳಿಸಿಕೊಳ್ಳಲು ಯಾವ ಮಟ್ಟಕ್ಕಾದರೂ ಇಳಿಯುತ್ತೇನೆ ಎನ್ನುವ ಸಂದೇಶ ನೀಡುವ ಮೂಲಕ ನಿಮ್ಮ ಘನತೆ, ವ್ಯಕ್ತಿತ್ವವನ್ನ ತಾವೇ ಯಾಕೆ ಕಡಿಮೆ ಮಾಡಿಕೊಳ್ಳುತ್ತೀರಿ? ಕನ್ನಡಿಗರ ಮುಂದೆ ಯಾಕೆ ಸಣ್ಣವರಾಗುತ್ತೀರಿ? ಗೆದ್ದಾಗ ಬೀಗುವುದು, ಸೋತಾಗ ವ್ಯವಸ್ಥೆಯನ್ನ ದೂಷಿಸುವುದು ಪ್ರಜಾಪ್ರಭುತ್ವಕ್ಕೆ, ಮತದಾರರಿಗೆ, ಜನಾದೇಶಕ್ಕೆ, ಇವೆಲ್ಲವನ್ನೂ ಕೊಟ್ಟ ಸಂವಿಧಾನಕ್ಕೆ ಮಾಡುವ ಅಪಮಾನ ಅಲ್ಲವೇ?

File photo
ಬ್ಯಾಲಟ್ ಪೇಪರ್ ಬಳಕೆ: ಇಡೀ ಜಗತ್ತು ತಂತ್ರಜ್ಞಾನವನ್ನು ಆಧರಿಸಿ ವೇಗವಾಗಿ ನಡೆಯುತ್ತಿದ್ದರೆ, ಕಾಂಗ್ರೆಸ್ ಹೆಬ್ಬೆಟ್ಟಿನ ದಿನಗಳ ನೆನಪಿಸಲು ಹೊರಟಿದೆ..!

ತಾವು ಸಂವಿಧಾನವಾದಿ, ಪ್ರಜಾಪ್ರಭುತ್ವವಾದಿ ಎಂದು ಇತಿಹಾಸದಲ್ಲಿ ಗುರುತಿಸಿಕೊಳ್ಳಲು ಬಯಸುತ್ತೀರೋ ಅಥವಾ ಹೈಕಮಾಂಡ್ ಗುಲಾಮಗಿರಿಗಾಗಿ, ಅಧಿಕಾರಕ್ಕಾಗಿ ಆತ್ಮಸಾಕ್ಷಿಯನ್ನೇ ಮಾರಿಕೊಂಡ ಆತ್ಮವಂಚಕ ಎಂಬ ಹಣೆಪಟ್ಟಿ ಗಳಿಸಲು ಬಯಸುತ್ತೀರೋ? ಎಂದು ಪ್ರಶ್ನಿಸಿದ್ದಾರೆ.

ಬೇರೆ ವಿಷಯಗಳಲ್ಲಿ ರಾಜಕೀಯ ಕೆಸರೆರಚಾಟ ಏನೇ ಇರಲಿ, ನಮ್ಮ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯ ಆಧಾರ ಸ್ತಂಭವಾಗಿರುವ ಚುನಾವಣಾ ಪ್ರಕ್ರಿಯೆ ಬಗ್ಗೆಯೇ ಸಂದೇಹ ಮೂಡಿಸುವ ಪಾಪದ ಕೆಲಸ ಮಾಡಬೇಡಿ. ಇದು ನಿಮಗೆ ಖಂಡಿತ ಶೋಭೆ ತರುವುದಿಲ್ಲ ಎಂದು ಕಿಡಿಕಾರಿದ್ದಾರೆ.

ಬ್ಯಾಲೆಟ್‌ ಪೇಪರ್‌ = ಬೋಗಸ್‌‍ ವೋಟಿಂಗ್‌, ಬ್ಯಾಲೆಟ್‌ ಪೇಪರ್‌-ಬೂತ್‌ ಕ್ಯಾಪ್ಚರಿಂಗ್‌ , ಹ್ಯಾಟ್ರಿಕ್‌ ಝೀರೋ ರಾಹುಲ್‌ ಗಾಂಧಿ ಅವರ ನೇತೃತ್ವದಲ್ಲಿ ಸಂಪೂರ್ಣ ನೆಲಕಚ್ಚಿರುವ ಕಾಂಗ್ರೆಸ್‌‍ ಪಕ್ಷ, ರಾಹುಲ್‌ ಗಾಂಧಿ ಅವರನ್ನು ರಕ್ಷಿಸಲು, ಚುನಾವಣಾ ಆಯೋಗದ ಬಗ್ಗೆ, ಚುನಾವಣಾ ಪ್ರಕ್ರಿಯೆ ಬಗ್ಗೆ, ಮತಯಂತ್ರಗಳ ಬಗ್ಗೆ ಇಲ್ಲಸಲ್ಲದ ಅನುಮಾನ ಬಿತ್ತಿದ್ದು, ಊಹಾಪೋಹ ಸೃಷ್ಟಿ ಮಾಡುವ ಪ್ರಯತ್ನ ಮಾಡುತ್ತಲೇ ಬಂದಿದೆ. ಭಾರತದ ಪ್ರಜ್ಞಾವಂತ ಮತದಾರರು ಈ ಹತಾಶ ಪ್ರಯತ್ನವನ್ನು ತಿರಸ್ಕಾರ ಮಾಡುತ್ತಲೇ ಬಂದಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com