2 ತಿಂಗಳಿಂದ ಗೃಹಲಕ್ಷ್ಮೀ ಹಣವಿಲ್ಲ, ಬಸ್ಸು ತಳ್ಳೋ ಗಾಡಿಗಳಾಗಿವೆ...ನಿಮ್ಮ ಆತ್ಮಸಾಕ್ಷಿಗೆ ಮಾನ ಮರ್ಯಾದೆ ಇದೆಯಾ..!

ದಾವಣಗೆರೆ: ದಕ್ಷಿಣ ಕ್ಷೇತ್ರದ ಉಪ ಚುನಾವಣೆಗೆ ಆಡಳಿತಾರೂಢ ಕಾಂಗ್ರೆಸ್ ಹಾಗೂ ಬಿಜೆಪಿ ಬಿರುಸಿನ ಪ್ರಚಾರ ನಡೆಸುತ್ತಿದ್ದು, ಈ ನಡುವಲ್ಲೇ ಸರ್ಕಾರದ ವಿರುದ್ಧ ಬಿಜೆಪಿ ಚಾರ್ಜ್‌ಶೀಟ್ ಬಿಡುಗಡೆ ಮಾಡಿದೆ.
CM Siddaramaiah in Davanagere
ದಾವಣಗೆರೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ (ಸಂಗ್ರಹ ಚಿತ್ರ)
Updated on

ಬೆಂಗಳೂರು: 2 ತಿಂಗಳಿಂದ ಗೃಹಲಕ್ಷ್ಮೀ ಹಣ ಇಲ್ಲ. ಹಣಕಾಸು ಮಂತ್ರಿ, ಇಲಾಖೆಯ ಮಂತ್ರಿ ಈ ಬಗ್ಗೆ ಮಾತನಾಡಿಲ್ಲ. ಬಸ್ಸುಗಳು ತಳ್ಳೋ ಗಾಡಿಗಳಾಗಿದ್ದಾವೆ, ನಿಮ್ಮ ಆತ್ಮಸಾಕ್ಷಿಗೆ ಮಾನ ಮರ್ಯಾದೆ ಇದೆಯಾ ಎಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಶುಕ್ರವಾರ ವಾಗ್ದಾಳಿ ನಡೆಸಿದೆ.

ದಾವಣಗೆರೆ: ದಕ್ಷಿಣ ಕ್ಷೇತ್ರದ ಉಪ ಚುನಾವಣೆಗೆ ಆಡಳಿತಾರೂಢ ಕಾಂಗ್ರೆಸ್ ಹಾಗೂ ಬಿಜೆಪಿ ಬಿರುಸಿನ ಪ್ರಚಾರ ನಡೆಸುತ್ತಿದ್ದು, ಈ ನಡುವಲ್ಲೇ ಸರ್ಕಾರದ ವಿರುದ್ಧ ಬಿಜೆಪಿ ಚಾರ್ಜ್‌ಶೀಟ್ ಬಿಡುಗಡೆ ಮಾಡಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿ.ಟಿ. ರವಿ ಅವರು, ಕಳೆದ ಮೂರು ವರ್ಷಗಳಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಭ್ರಷ್ಟಾಚಾರ ಹಾಗೂ ಬೆಲೆ ಏರಿಕೆ ಜನಜೀವನವನ್ನು ಕಷ್ಟಕರವಾಗಿಸಿದೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಮಾಣ ಹೆಚ್ಚಿದ್ದು, ಸರ್ಕಾರದ ನೌಕರರೂ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಘಟನೆಗಳು ನಡೆದಿವೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಗಳ ಕೊರತೆ ಇದೆ. ಅತಿಥಿ ಉಪನ್ಯಾಸಕರು ಹಾಗೂ ಗುತ್ತಿಗೆ ನೌಕರರಿಗೆ ಸಂಬಳ ಸಿಗುತ್ತಿಲ್ಲ.

ಇದಲ್ಲದೆ, ರಸ್ತೆ ಸ್ಥಿತಿ ಹದಗೆಟ್ಟಿದ್ದು, ವಿಶೇಷವಾಗಿ ಬೆಂಗಳೂರು ನಲ್ಲಿ ಅಪಘಾತಗಳು ಹೆಚ್ಚಾಗಿ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. “ಈ ಸರ್ಕಾರ ಅಭಿವೃದ್ಧಿಯಿಂದಲ್ಲ, ತಪ್ಪು ಕಾರಣಗಳಿಂದಲೇ ಸುದ್ದಿಯಲ್ಲಿದೆ,” ಎಂದು ಕಟುವಾಗಿ ಟೀಕಿಸಿದರು.

ಈ ಬಾರಿ ಜನತೆ ಸರಕಾರಕ್ಕೆ ಬಿಸಿ ಮುಟ್ಟಿಸಲು ಮತ ಹಾಕುತ್ತಾರೆ. ನಾನು ಮಾಡಿದ್ದೇ ಸರಿ, ಹಣ ಇದ್ದರೆ ಸಾಕು, ಏನು ಮಾಡಿದರೂ ದಕ್ಕಿಸಿಕೊಳ್ಳಬಹುದು ಎಂಬ ಮನಸ್ಥಿತಿಯವರಿಗೆ ಉತ್ತಮ ಪಾಠ ಕಲಿಸುತ್ತಾರೆ. ಮಾಧ್ಯಮಗಳಲ್ಲಿ ಬಂದ ಸುದ್ದಿ ಆಧರಿಸಿ ಚಾರ್ಜಶೀಟ್ ಮಾಡಿದ್ದೇವೆ, ನಿಮ್ಮ ಆತ್ಮಸಾಕ್ಷಿಗೆ ಮಾನ ಮರ್ಯಾದೆ ಇದೆಯಾ ಅಂತಾ ಕೇಳಿಕೊಳ್ಳಿ ಎಂದು ವಾಗ್ದಾಳಿ ನಡೆಸಿದರು.

CM Siddaramaiah in Davanagere
ಗ್ಯಾರಂಟಿ ಯೋಜನೆಗಳಿಲ್ಲದಿದ್ದರೆ ಜನರು ಭಾರೀ ಸಂಕಷ್ಟ ಅನುಭವಿಸಬೇಕಾಗುತ್ತಿತ್ತು: DCM ಡಿಕೆ.ಶಿವಕುಮಾರ್

ಎರಡು ತಿಂಗಳಿನಿಂದ ಗೃಹಲಕ್ಷ್ಮೀ ಹಣ ಇಲ್ಲ. ಹಣಕಾಸು ಮಂತ್ರಿ, ಇಲಾಖೆಯ ಮಂತ್ರಿ ಈ ಬಗ್ಗೆ ಮಾತನಾಡಿಲ್ಲ. ಬಸ್ಸು ತಳ್ಳೋ ಗಾಡಿಗಳಾಗಿದ್ದಾವೆ, ಹಳ್ಳಿಗಳಿಗೆ ಬಸ್ ಹೋಗುತ್ತಿಲ್ಲ. ಗ್ಯಾರಂಟಿ ಕೊಟ್ಟಿದ್ದರೆ ಒಂದೂವರೆ ಡಜನ್ ಶಾಸಕರು ಬೆವರು ಸುರಿಸಬೇಕಾಗುತ್ತಿತ್ತಾ? ಸಿಎಂ ಆದಿಯಾಗಿ ಬೆವರು ಸುರಿಸುವ ಪ್ರಯಾಸ ಬರುತ್ತಿರಲಿಲ್ಲ ಎಂದು ವ್ಯಂಗ್ಯವಾಡಿತರು.

ಮುಖ್ಯಮಂತ್ರಿಗಳು ಬಿಜೆಪಿಯವರು ಮಾನಗೆಟ್ಟವರು ಎಂದು ತಮ್ಮ ಭಾಷಣದಲ್ಲಿ ಹೇಳಿದ್ದಾರೆ. ಆದರೆ, ಮುಖ್ಯಮಂತ್ರಿಗಳೇ ಯಾರು ಮಾನಗೆಟ್ಟವರು? ಮುಡಾ ಹಗರಣ ಯಾರ ಮೇಲೆ ಬಂತು? ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ನಿಮ್ಮ ಸರಕಾರದ ಸಚಿವರೇ ರಾಜೀನಾಮೆ ಕೊಡಬೇಕಾಯಿತಲ್ಲವೇ? ಇದು ಮಾನಗೆಟ್ಟ ಕೆಲಸವಲ್ಲವೇ? ಎಂದು ಪ್ರಶ್ನಿಸಿದರು.

ವಾಲ್ಮೀಕಿ ಸಮುದಾಯದ ಅಭಿವೃದ್ಧಿಗೆ ಬಳಕೆ ಆಗಬೇಕಾದ ಹಣವನ್ನು ನಿಮ್ಮ ಒಬ್ಬ ಸಚಿವರು ಹೆಂಡತಿಗೆ ಒಡವೆ ಕೊಡಿಸಲು, ಚುನಾವಣೆಗೆ ಬಾರ್ ನಿಂದ ಎಣ್ಣೆ ಸರಬರಾಜು ಮಾಡಲು ಹಣ ಬಳಸಿದ್ದು ಮರ್ಯಾದೆ ಇದ್ದವರು ಮಾಡುವ ಕೆಲಸವೇ ಎಂದು ಪ್ರಶ್ನಿಸಿದರು.

ನೀವು ಬಿಜೆಪಿ ಮೇಲೆ ಶೇ 40 ಆರೋಪ ಹೊರಿಸಿ ಅಧಿಕಾರಕ್ಕೆ ಬಂದಿದ್ದೀರಿ. ಗುತ್ತಿಗೆದಾರರು ಶೇ 60 ಕಮಿಷನ್‍ನ ಸರಕಾರ ಎಂದು ನಿಮ್ಮ ಸರಕಾರದ ಮೇಲೆ ಆರೋಪ ಮಾಡಿದ್ದಾರಲ್ಲವೇ? ಮರ್ಯಾದೆ ಇದ್ದವರು ಆ ಆರೋಪ ಕೇಳಿಯೂ ಅಧಿಕಾರಕ್ಕೆ ಅಂಟಿಕೊಳ್ಳುತ್ತಾರಾ ಎಂದು ಪ್ರಶ್ನಿಸಿದರು.

ನಿಮ್ಮ ಅಬಕಾರಿ ಸಚಿವರ ಮೇಲೆ ಬಾರ್ ಮಾಲೀಕರು ತಿಂಗಳ ಮಾಮೂಲಿ ಕೇಳುವ ಕುರಿತು ಆರೋಪ ಮಾಡಿದ್ದಾರಲ್ಲವೇ? ಎಂದು ಉಲ್ಲೇಖಿಸಿದರು.

ಮುಖ್ಯಮಂತ್ರಿಗಳೇ, ಇಡೀ ಸಂಪುಟದಲ್ಲಿ ಮಾನಗೆಟ್ಟವರು ಇದ್ದಾರೆಯೇ ಹೊರತು ಮರ್ಯಾದೆ ಇದ್ದವರು ಯಾರಿದ್ದಾರೆ ಹೇಳಿ? ಮಾನಗೆಟ್ಟ ಕೆಲಸ ಮಾಡುವವರನ್ನು ಸಚಿವರನ್ನಾಗಿ ಮಾಡಿಕೊಂಡು, ಶೇ 60ರ ಆರೋಪ ಹೊತ್ತುಕೊಂಡು ನೀವು ಬಿಜೆಪಿ ವಿರುದ್ಧ ಮಾನಗೆಟ್ಟ ಬಿಜೆಪಿ ಎಂದು ಆರೋಪ ಮಾಡುತ್ತೀರಲ್ಲವೇ ಎಂದು ಪ್ರಶ್ನಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com