ಜಬ್ಬಾರ್, ನಾಸೀರ್ ನಂತರ ಹಿಟ್ ವಿಕೆಟ್ ಆಗ್ತಾರಾ ಜಮೀರ್? 'ಆಪತ್ ಬಾಂಧವ'ರ ತಲೆತಂಡ; ಸಿದ್ದು ಬಣಕ್ಕೆ ದೊಡ್ಡ ಆಘಾತ!

ಏಪ್ರಿಲ್ 9 ರಂದು ನಡೆದ ದಾವಣಗೆರೆ ದಕ್ಷಿಣ ಉಪಚುನಾವಣೆಯ ಸಂದರ್ಭದಲ್ಲಿ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ನಸೀರ್ ಭಾಗಿಯಾಗಿದ್ದಾರೆ ಎಂಬ ವರದಿಗಳ ಹಿನ್ನೆಲೆಯಲ್ಲಿ, ಪಕ್ಷದ ಹೈಕಮಾಂಡ್ ಅವರ ರಾಜೀನಾಮೆಯನ್ನು ಪಡೆಯುವಂತೆ ಸಿದ್ದರಾಮಯ್ಯಗೆ ಸೂಚಿಸಿದೆ ಎಂದು ಹೇಳಲಾಗುತ್ತಿದೆ.
ಜಮೀರ್, ನಾಸೀರ್ ಮತ್ತು ಜಬ್ಬಾರ್
ಜಮೀರ್, ನಾಸೀರ್ ಮತ್ತು ಜಬ್ಬಾರ್
Updated on

ಬೆಂಗಳೂರು: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಭಿನ್ನಮತ ಶಮನ ಆಗಿಲ್ಲ. ಸಮರ್ಥ್ ಅವರನ್ನು ಸೋಲಿಸಲು ವಿರೋಧ ಪಕ್ಷದ ಮುಖಂಡರ ಜೊತೆಗೆ ಕಾಂಗ್ರೆಸ್ ಪಕ್ಷದ ಮುಖಂಡರು ಪ್ರಯತ್ನ ನಡೆಸಿದ್ದಾರೆ ಎಂದು ಆರೋಪ ಕೇಳಿ ಬಂದಿತ್ತು.

ಇದರ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್‌ ನಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ ನೀಡಿದ್ದಾರೆ. ಈ ನಡುವೆ ಸಿಎಂ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ನಸೀರ್ ಅಹ್ಮದ್ ಅವರಿಗೆ ರಾಜೀನಾಮೆ ನೀಡಲು ಸೂಚನೆ ಬಂದ ಹಿನ್ನೆಲೆಯಲ್ಲಿ ಸಿಎಂ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಸಿದ್ದರಾಮಯ್ಯ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ರಾಜಿನಾಮೆ ನೀಡಿದ್ದಾರೆ.

ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ಎಂಎಲ್‌ಸಿ ನಸೀರ್ ಅಹ್ಮದ್ ರಾಜೀನಾಮೆ ನೀಡಿರುವುದು ಅವರ ಪಾಳಯಕ್ಕೆ ಹಿನ್ನಡೆಯಾಗಲಿದೆ. ಏಪ್ರಿಲ್ 9 ರಂದು ನಡೆದ ದಾವಣಗೆರೆ ದಕ್ಷಿಣ ಉಪಚುನಾವಣೆಯ ಸಂದರ್ಭದಲ್ಲಿ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ನಸೀರ್ ಭಾಗಿಯಾಗಿದ್ದಾರೆ ಎಂಬ ವರದಿಗಳ ಹಿನ್ನೆಲೆಯಲ್ಲಿ, ಪಕ್ಷದ ಹೈಕಮಾಂಡ್ ಅವರ ರಾಜೀನಾಮೆಯನ್ನು ಪಡೆಯುವಂತೆ ಸಿದ್ದರಾಮಯ್ಯಗೆ ಸೂಚಿಸಿದೆ ಎಂದು ಹೇಳಲಾಗುತ್ತಿದೆ.

ಭಾನುವಾರ, ಸಿದ್ದರಾಮಯ್ಯ ಚಿಕ್ಕಮಗಳೂರಿನಲ್ಲಿ ಮಾತನಾಡುತ್ತಾ, ನಸೀರ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆ ಎಂದು ದೃಢಪಡಿಸಿದರು. ನಸೀರ್ ಸೋಮವಾರ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಸೇರಿದಂತೆ ತಮ್ಮ ಹಿತೈಷಿಗಳೊಂದಿಗೆ ತಮ್ಮ ರಾಜೀನಾಮೆ ಕುರಿತು ಚರ್ಚೆ ನಡೆಸಿದರು. ಪಕ್ಷದ ಅಭ್ಯರ್ಥಿ ಸಮರ್ಥ್ ಶಾಮನೂರು ಅವರನ್ನು ಸೋಲಿಸಲು ಸಂಚು ರೂಪಿಸಿದ್ದಾರೆ ಎಂಬ ಆರೋಪದ ಮೇಲೆ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ ಜಬ್ಬಾರ್ ಈಗಾಗಲೇ ರಾಜೀನಾಮೆ ನೀಡಿದ್ದಾರೆ.

ಜಮೀರ್, ನಾಸೀರ್ ಮತ್ತು ಜಬ್ಬಾರ್
ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಾಸೀರ್ ಅಹ್ಮದ್ ವಜಾ..!

ಪರಿಷತ್ತಿನ ಮುಖ್ಯ ಸಚೇತಕ ಸಲೀಮ್ ಅಹ್ಮದ್ ಮತ್ತು ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್ ಅವರ ಪ್ರಕಾರ, ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ತಮ್ಮ ನಾಮಪತ್ರ ಹಿಂತೆಗೆದುಕೊಳ್ಳುವಂತೆ ಮನವೊಲಿಸಲು ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನಸೀರ್ ಮತ್ತು ಜಮೀರ್ ಗೆ ನೀಡಿದ್ದರು. ಆದರೆ ಈ ಇಬ್ಬರು ನಾಯಕರು ಯಾವುದೇ ಪ್ರಯತ್ನ ಮಾಡಿರಲಿಲ್ಲ.

ಜೊತೆಗೆ ಸಾದಿಕ್‌ಗೆ ನಾಮಪತ್ರ ಹಿಂಪಡೆಯದಂತೆ ಸೂಚಿಸಿದ್ದರು, ಹೀಗಾಗಿ ಸಾದಿಕ್ ಕಣದಲ್ಲಿಯೇ ಇದ್ದರು. ನಂತರ ಸಲೀಂ ಅಹ್ಮದ್ ಮತ್ತು ರಿಜ್ವಾನ್ ಅರ್ಷದ್ ಸಾದಿಕ್ ಮನವೊಲಿಸಿ ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಮಾಡಲು ಯಶಸ್ವಿಯಾದರು, ಅಂತಿಮವಾಗಿ ಅವರು ಸಿಎಂ ಮತ್ತು ಡಿಸಿಎಂ ಅವರನ್ನು ಭೇಟಿಯಾದ ನಂತರ ಸಾದಿಕ್ ನಾಮಪತ್ರ ವಾಪಸ್ ಪಡೆದರು.

ಸಾದಿಕ್ ಅವರು ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಕಾರ್ಯದರ್ಶಿ ಅಭಿಷೇಕ್ ದತ್ ಅವರಿಗೆ ಜಮೀರ್ ಅವರು ಸ್ಪರ್ಧೆಯಲ್ಲಿ ಉಳಿಯುವಂತೆ ಸಲಹೆ ನೀಡಿದ್ದರು ಎಂದು ಬಹಿರಂಗಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪುನರ್ರಚನೆ ಸಮಯದಲ್ಲಿ ಹೈಕಮಾಂಡ್ ಅವರನ್ನು ಸಂಪುಟದಿಂದ ಕೈಬಿಡುವಂತೆ ಜಮೀರ್ ಅವರ ವಿರೋಧಿಗಳು ಈ ಅಂಶವನ್ನು ಎತ್ತಿ ತೋರಿಸುತ್ತಿದ್ದಾರೆ. ಅಲ್ಪಸಂಖ್ಯಾತ ಕೋಟಾದಿಂದ ಜಮೀರ್ ಉಪಮುಖ್ಯಮಂತ್ರಿ ಹುದ್ದೆಗೆ ಸ್ಪರ್ಧೆಯಲ್ಲಿದ್ದಾರೆ ಎಂದು ವಿರೋಧಿಗಳು ಅಸೂಯೆ ಪಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಜಮೀರ್, ನಸೀರ್ ಮತ್ತು ಜಬ್ಬಾರ್ ಸಿದ್ದರಾಮಯ್ಯ ಪಾಳಯದಿಂದ ಬಂದವರಾಗಿದ್ದು ಈ ಬೆಳವಣಿಗೆಯಿಂದ ಮುಖ್ಯಮಂತ್ರಿಗೆ ಹಿನ್ನಡೆ ಎಂದು ಪರಿಗಣಿಸಬಹುದು.

ಜಮೀರ್, ನಾಸೀರ್ ಮತ್ತು ಜಬ್ಬಾರ್
ದಾವಣಗೆರೆ ದಕ್ಷಿಣ ದಂಗಲ್: ಸಿದ್ದರಾಮಯ್ಯ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ತಲೆದಂಡ; ರಾಜೀನಾಮೆ ನೀಡುವಂತೆ ಸಿಎಂ ಸೂಚನೆ!

ಹಿಂದೆ, ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರು ಬಿಜೆಪಿ ವಿರುದ್ಧ ನಡೆಸಿದ 'ಮತ ಚೋರಿ' ಅಭಿಯಾನವನ್ನು ಟೀಕಿಸಿದ ಆರೋಪದ ಮೇಲೆ ಮಾಜಿ ಸಹಕಾರ ಸಚಿವ ಕೆ.ಎನ್. ರಾಜಣ್ಣ ರಾಜೀನಾಮೆ ನೀಡಬೇಕಾಯಿತು. ಪಕ್ಷದ ಶಿಸ್ತಿನ ಉಲ್ಲಂಘನೆಯ ವಿಷಯ ಬಂದಾಗ, ಸಿದ್ದರಾಮಯ್ಯ ಕೂಡ ತಮ್ಮ ಬೆಂಬಲಿಗರನ್ನು ಸಮರ್ಥಿಸಿಕೊಳ್ಳಲು ಸಾಧ್ಯವಾಗದೆ ಅಸಹಾಯಕರಾಗುತ್ತಾರೆ ಎಂದು ಕಾಂಗ್ರೆಸ್ ನಾಯಕರೊಬ್ಬರು ಹೇಳಿದರು.

ಸಚಿವ ಸಂಪುಟ ಪುನರ್ರಚನೆಗೆ ಹೈಕಮಾಂಡ್‌ನ ಒಪ್ಪಿಗೆ ಪಡೆಯುವುದು ಸಿದ್ದರಾಮಯ್ಯ ಅವರ ಪ್ರಮುಖ ಉದ್ದೇಶವಾಗಿರುವುದರಿಂದ ಇದನ್ನು ಗಂಭೀರವಾಗಿ ಪರಿಗಣಿಸಿಲ್ಲ" ಎಂದು ಕಾಂಗ್ರೆಸ್ ನಾಯಕರೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com