ಹಿರಿಯ ಶಾಸಕರು ಬಹಿರಂಗವಾಗಿ ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ: ಡಾ ಜಿ ಪರಮೇಶ್ವರ್

ಬೆಂಗಳೂರಿನಲ್ಲಿ ನಿನ್ನೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಚಿವಾಕಾಂಕ್ಷಿ ಶಾಸಕರ ದೆಹಲಿ ಭೇಟಿ ವಿಚಾರವಾಗಿ ಪ್ರತಿಕ್ರಿಯಿಸಿದರು.
Dr G Parameshwar
ಡಾ ಜಿ ಪರಮೇಶ್ವರ್
Updated on

ಬೆಂಗಳೂರು: ಸಚಿವ ಹುದ್ದೆಗೆ ಬೇಡಿಕೆ ಇಡುವುದು ಎಂದರೆ ಗ್ಯಾಬ್ಲಿಂಗ್ ಅಲ್ಲ, ಹಿರಿಯ ಶಾಸಕರು ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ, ಎರಡು ಮೂರು ಬಾರಿ ಶಾಸಕರಾದವರು ಖಂಡಿತವಾಗಿಯೂ ಬಹಿರಂಗವಾಗಿಯೇ ತಮಗೆ ಸಚಿವ ಸ್ಥಾನ ಸಿಗಬೇಕೆಂದು ಕೇಳಬಹುದು ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ನಿನ್ನೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಚಿವಾಕಾಂಕ್ಷಿ ಶಾಸಕರ ದೆಹಲಿ ಭೇಟಿ ವಿಚಾರವಾಗಿ ಪ್ರತಿಕ್ರಿಯಿಸಿದರು. ಶಾಸಕರಾಗಿ ಎರಡು ಮೂರು ಬಾರಿ ಗೆದ್ದಿದ್ದಾರೆ. ಅವರು ಸಚಿವರಾಗಲು ಸಮರ್ಥರು. ಹೀಗಾಗಿ ಸಚಿವ ಸ್ಥಾನ ಕೇಳೋದ್ರಲ್ಲಿ ಯಾವ ತಪ್ಪೂ ಇಲ್ಲ. ಆದರೆ ಅದರ ಬಗ್ಗೆ ಸಿಎಂ ಮತ್ತು ಹೈಕಮಾಂಡ್ ತೀರ್ಮಾನ ಮಾಡುತ್ತದೆ.

ಬಹಿರಂಗವಾಗಿ ಕೇಳಬಹುದು, ಅದೇನು ಗ್ಯಾಂಬ್ಲಿಂಗ್ ಅಲ್ಲ. ಅವರಿಗೆ ಅರ್ಹತೆ ಇದೆ ಕೇಳ್ತಾರೆ. ನಾಯಕತ್ವ ವಿಚಾರ ಇರಲಿ, ಪುನಾರಚನೆ ಇರಲಿ ಹೈಕಮಾಂಡ್ ಮಾತ್ರವೇ ತೀರ್ಮಾನ ಮಾಡಬೇಕು. ಹೈಕಮಾಂಡ್ ಎಲ್ಲ ಗಮನಿಸಿದೆ, ಅವರಿಗೆ ಎಲ್ಲ ಗೊತ್ತಿದೆ. ಯಾವ ಸಂದರ್ಭದಲ್ಲಿ ಏನು ಮಾಡಬೇಕು ಅಂತ ಹೈಕಮಾಂಡ್‌ಗೆ ಗೊತ್ತಿದೆ, ಅವರು ಮಾಡ್ತಾರೆ ಎಂದಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ತಾವು ಆಕಾಂಕ್ಷಿನಾ ಎಂದು ಕೇಳಿದಾಗ, ಈಗ ಪುನಾರಚನೆ ಚರ್ಚೆ ಆಗ್ತಿದೆ ಅಷ್ಟೇ. ಅಧ್ಯಕ್ಷ ಸ್ಥಾನ ವಿಚಾರ ಹೈಕಮಾಂಡ್‌ಗೆ ಬಿಟ್ಟಿದ್ದು. ಅದರ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದರು.

ದಾವಣಗೆರೆ ದಕ್ಷಿಣ ಕ್ಷೇತ್ರ

ದಾವಣಗೆರೆಯಲ್ಲಿ ಜಬ್ಬಾರ್ ಅವರು ಟಿಕೆಟ್ ಕೇಳಿದರು, ಆದರೆ ಅವರಿಗೆ ಸಿಗಲಿಲ್ಲ. ಈಗಾಗಲೇ ಜಬ್ಬಾರ್ ಅವರು ಅಲ್ಪಸಂಖ್ಯಾತರ ಘಟಕಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ಅದು ಅಂಗೀಕಾರ ಕೂಡ ಆಗಿದೆ. ಕೆಲವು ಮುಸ್ಲಿಂ ನಾಯಕರು ಅಸಮಾಧಾನ ತೋರಿಸಿದ್ದಾರೆ. ಆದರೆ ಡಿಕೆ ಶಿವಕುಮಾರ್ ಹೊಸ ಘಟಕ ಮಾಡ್ತಾರೆ. ಜಮೀರ್‌ಗೆ ನಾನು ಮಾತಾಡಿ ದಾವಣಗೆರೆ ಪ್ರಚಾರ ಮಾಡಿ ಎಂದಿದ್ದೆ. ನನಗೆ ಕೇರಳ ಉಸ್ತುವಾರಿ ಹಾಕಿದ್ದಾರೆ. ಕೆಸಿ ವೇಣುಗೋಪಾಲ ಒಪ್ಪಿಕೊಂಡರೆ ಬಂದು ಹೋಗ್ತಿನಿ ಅಂದಿದ್ದರು. ಬಳಿಕ ಸಿಎಂ ಹೇಳಿದಾಗ ಬಾಗಲಕೋಟೆಗೆ ಬಂದು ಪ್ರಚಾರ ಮಾಡಿದ್ದಾರೆ ಎಂದಿದ್ದಾರೆ.

ಪುನಾರಚನೆ ಆದರೆ ಹಿರಿಯರು ಸಚಿವ ಸ್ಥಾನ ಬಿಟ್ಟು ಕೊಡುವ ಬಗ್ಗೆ ಮಾತನಾಡಿ, ಏನಾದರೂ ಬದಲಾವಣೆ ಇದ್ದರೆ ಹೈಕಮಾಂಡ್ ತೀರ್ಮಾನ ಮಾಡಿದರೆ ಅದಕ್ಕೆ ನಾವು ಒಪ್ಪಲೇಬೇಕು. ಒಪ್ಪೋದಿಲ್ಲ ಅನ್ನೋ ಪ್ರಶ್ನೆಯೇ ಬರಲ್ಲ. ನಾನಾಗಲೀ, ರಾಮಲಿಂಗಾರೆಡ್ಡಿ ಆಗಲೀ, ಜಾರ್ಜ್ ಆಗಲೀ ನಾವೆಲ್ಲ ಸೀನಿಯರ್ಸ್ ಇದ್ದೀವಿ. ನಮ್ಮನ್ನು ನೀವು ಬದಲಾಯಿಸಿಕೊಳ್ಳಬೇಕು ಅಂತ ಅವ್ರು ತೀರ್ಮಾನ ಮಾಡಿದ್ರೆ ಆಗ ನಾವು ಪ್ರಶ್ನೆ ಮಾಡಲು ಬರೋದೇ ಇಲ್ಲ ಎಂದರು.

Dr G Parameshwar
ಸಚಿವ ಸ್ಥಾನಕ್ಕಾಗಿ ದೆಹಲಿಯಲ್ಲಿ 'ಕೈ' ಶಾಸಕರ ಲಾಬಿ: ಖರ್ಗೆ ಭೇಟಿ, ಸಚಿವ ಸಂಪುಟ ಪುನಾರಚನೆಗೆ ಒತ್ತಾಯ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com