2028ಕ್ಕೆ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರುವುದು ನಿಶ್ಚಿತ; CM ಅಭ್ಯರ್ಥಿಗಳ ಪಟ್ಟಿಯಲ್ಲಿ ನನ್ನ ಹೆಸರೂ ಇದೆ: ಆರ್. ಅಶೋಕ್

2028ಕ್ಕೆ ರಾಜ್ಯದಲ್ಲಿ ಜೆಡಿಎಸ್‌ಎಸ್-ಬಿಜೆಪಿ ಮೈತ್ರಿಕೂಟದ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ಇದರಲ್ಲಿ ಯಾವ ಅನುಮಾನವೂ ಇಲ್ಲ ಎಂದ ಅವರು, ಸಂಸತ್ತಿನಲ್ಲೂ ಜೆಡಿಎಸ್‌ಗೆ ಮೂರ್ನಾಲ್ಕು ಸ್ಥಾನಗಳನ್ನು ನೀಡಲಾಗಿದೆ.
R Ashok
ಆರ್ ಅಶೋಕ್
Updated on

ಮಂಡ್ಯ: 2028ರ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರುವುದು ನಿಶ್ಚಿತ. ನಮಗೆ ಅಧಿಕಾರಕ್ಕೆ ಬರುವುದು ಮುಖ್ಯವೇ ಹೊರತು ಸಿಎಂ ಯಾರಾಗಬೇಕು ಎಂಬುದು ಮುಖ್ಯವಲ್ಲ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ.

ಮಂಡ್ಯದಲ್ಲಿ ಮಾತನಾಡಿದ ಅವರು, ನಮ್ಮಲ್ಲಿ ಮುಖ್ಯಮಂತ್ರಿ ಆಕಾಂಕ್ಷಿಗಳು ತುಂಬಾ ಜನರಿದ್ದಾರೆ. ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

2028ಕ್ಕೆ ರಾಜ್ಯದಲ್ಲಿ ಜೆಡಿಎಸ್‌ಎಸ್-ಬಿಜೆಪಿ ಮೈತ್ರಿಕೂಟದ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ಇದರಲ್ಲಿ ಯಾವ ಅನುಮಾನವೂ ಇಲ್ಲ ಎಂದ ಅವರು, ಸಂಸತ್ತಿನಲ್ಲೂ ಜೆಡಿಎಸ್‌ಗೆ ಮೂರ್ನಾಲ್ಕು ಸ್ಥಾನಗಳನ್ನು ನೀಡಲಾಗಿದೆ. ಅದೇ ರೀತಿ ರಾಜ್ಯದಲ್ಲೂ ಮೈತ್ರಿ ಮುಂದುವರಿಯಲಿದೆ ಎಂದು ಹೇಳಿದರು.

ಸಿಎಂ ಯಾರಾಗಬೇಕು ಎಂಬುದನ್ನು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ, ಪಕ್ಷದ ಅಧ್ಯಕ್ಷ ನಿತಿನ್‌ ನಬೀನ್ ಅವರು ನಿರ್ಧರಿಸುತ್ತಾರೆ. ನನ್ನನ್ನೂ ಸೇರಿದಂತೆ ಈಗಾಗಲೇ 10 ಮಂದಿಯ ಹೆಸರುಗಳು ಕೇಳಿಬಂದಿದೆ. ನಮಗೆ ಅಧಿಕಾರಕ್ಕೆ ಬರುವುದೇ ಮುಖ್ಯ. ಜೊತೆಗೆ ಸಿದ್ದರಾಮಯ್ಯ ನೇತೃತ್ವದ ಭ್ರಷ್ಟ ಸರ್ಕಾರ ತೊಲಗುವುದು ಮುಖ್ಯ ಎಂದು ಹೇಳಿದರು.

R Ashok
ಜನರಿಗೆ ರಾಜ್ಯದ ಆರ್ಥಿಕ ಪರಿಸ್ಥಿತಿಯ ನೈಜ ಚಿತ್ರಣ ತಿಳಿಸಿ: ಮುಖ್ಯಮಂತ್ರಿಗೆ ಬಿ.ವೈ ವಿಜಯೇಂದ್ರ ಆಗ್ರಹ!

ಕಾಂಗ್ರೆಸ್‌ನಲ್ಲಿ ಸಿಎಂ ಬದಲಾವಣೆ ವಿಚಾರ ಅವಧಿ ಮುಗಿದ ಮೆಡಿಸಿನ್ ರೀತಿ ಆಗಿದೆ. ನಿನ್ನೆಯೂ ಮಲ್ಲಿಕಾರ್ಜುನ ಖರ್ಗೆ ಅವರ ಮನೆಗೆ ಹೋಗಿ ಸಿಎಂ ಮಾಡುವಂತೆ ಡಿ.ಕೆ ಶಿವಕುಮಾರ್ ಜಗಳವಾಡಿ ಬಂದಿದ್ದಾರೆ. ಕಳೆದ ಎರಡು ವರ್ಷಗಳಿಂದ ಕಾಂಗ್ರೆಸ್ ಸರ್ಕಾರ ಸತ್ತುಹೋಗಿದೆ. ಒಂದು ವರ್ಷದಿಂದ ಸಿಎಂ. ಬದಲಾವಣೆ ಜಗಳ, ಕಿತ್ತಾಟದಲ್ಲೇ ಕಳೆದುಹೋಗಿದೆ ಎಂದು ಟೀಕಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com