ಚನ್ನಪಟ್ಟಣದ ಅಭಿವೃದ್ಧಿ ಕೆಲಸಗಳ ಪಟ್ಟಿಯನ್ನು ಸೋಮಶೇಖರ್ ಮನೆಗೆ 'ಕೊರಿಯರ್' ಮಾಡ್ತೇನೆ: ನಿಖಿಲ್ ಕುಮಾರಸ್ವಾಮಿ

2023ರ ಚುನಾವಣೆಯಲ್ಲಿ ಚನ್ನಪಟ್ಟಣದ ಜನರು ಕುಮಾರಣ್ಣನನ್ನು ಆಶೀರ್ವದಿಸಿ ಆಯ್ಕೆ ಮಾಡಿದ್ದರು. ಆದರೆ ಅನಿರೀಕ್ಷಿತ ರಾಜಕೀಯ ಬೆಳವಣಿಗೆಗಳಿಂದಾಗಿ ಅವರು ಸಂಸತ್ ಚುನಾವಣೆಯಲ್ಲಿ ಮಂಡ್ಯದಿಂದ ಸ್ಪರ್ಧಿಸಬೇಕಾಯಿತು.
Nikhil Kumaraswamy
ನಿಖಿಲ್ ಕುಮಾರಸ್ವಾಮಿ
Updated on

ರಾಮನಗರ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಮತ್ತೆ ಚನ್ನಪಟ್ಟಣ ಕ್ಷೇತ್ರದಿಂದಲೇ ಸ್ಪರ್ಧಿಸಬೇಕೆಂದು ಕ್ಷೇತ್ರದ ಜೆಡಿಎಸ್ ಕಾರ್ಯಕರ್ತರು, ಮುಖಂಡರಿಂದ ಒತ್ತಾಯ ಮಾಡುತ್ತಿದ್ದು ಈ ಬಗ್ಗೆ ಕಾಲವೇ ತೀರ್ಮಾನ ಮಾಡಲಿದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.

ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, 2023ರ ಚುನಾವಣೆಯಲ್ಲಿ ಚನ್ನಪಟ್ಟಣದ ಜನರು ಕುಮಾರಣ್ಣನನ್ನು ಆಶೀರ್ವದಿಸಿ ಆಯ್ಕೆ ಮಾಡಿದ್ದರು. ಆದರೆ ಅನಿರೀಕ್ಷಿತ ರಾಜಕೀಯ ಬೆಳವಣಿಗೆಗಳಿಂದಾಗಿ ಅವರು ಸಂಸತ್ ಚುನಾವಣೆಯಲ್ಲಿ ಮಂಡ್ಯದಿಂದ ಸ್ಪರ್ಧಿಸಬೇಕಾಯಿತು.

ಈಗ ಕ್ಷೇತ್ರದ ಕಾರ್ಯಕರ್ತರು ಮತ್ತು ಮುಖಂಡರು ಕುಮಾರಣ್ಣ ಮತ್ತೆ ಚನ್ನಪಟ್ಟಣದಿಂದಲೇ ಸ್ಪರ್ಧಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ. ಇದು ಜನರ ಹಂಬಲ ಕೂಡ ಹೌದು. ಅವರು ಮತ್ತೆ ರಾಜ್ಯ ರಾಜಕಾರಣಕ್ಕೆ ಬಂದೇ ಬರುತ್ತಾರೆ, ಈ ಬಗ್ಗೆ ಕಾಲವೇ ನಿರ್ಧಾರ ಮಾಡಲಿದೆ' ಎಂದು ತಿಳಿಸಿದರು.

2028ರ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಅಡಿಯಲ್ಲಿ ಯಾವ ಕ್ಷೇತ್ರ ಯಾರಿಗೆ ಎಂಬುದು ಅಂತಿಮವಾಗಲಿದೆ ಎಂದರು. ರಾಜ್ಯದ ಜನತೆ ಮತ್ತು ಪಕ್ಷದ ಕಾರ್ಯಕರ್ತರ ಮನಸ್ಸಿನಲ್ಲಿ ಕುಮಾರಸ್ವಾಮಿ ಅವರು ಮತ್ತೆ ಮುಖ್ಯಮಂತ್ರಿ ಆಗಬೇಕು ಎಂಬ ಬಲವಾದ ಅಭಿಲಾಷೆ ಇದೆ. ಈ ಕುರಿತು ಅಂತಿಮ ತೀರ್ಮಾನ ಎನ್‌ಡಿಎ ಮೈತ್ರಿಕೂಟದ ರಾಷ್ಟ್ರ ಮತ್ತು ರಾಜ್ಯ ನಾಯಕರು ತೆಗೆದುಕೊಳ್ಳುತ್ತಾರೆ ಎಂದು ಮಾಹಿತಿ ನೀಡಿದರು.

Nikhil Kumaraswamy
BJP ಜತೆ ಕೈಜೋಡಿಸಿದರೂ JDS ಮೂಲ ಸಿದ್ಧಾಂತದಲ್ಲಿ ಯಾವುದೇ ಬದಲಾವಣೆ ಇಲ್ಲ: ನಿಖಿಲ್ ಕುಮಾರಸ್ವಾಮಿ

ಚನ್ನಪಟ್ಟಣವನ್ನು ಹೆಚ್‌ಡಿಕೆ ಅಭಿವೃದ್ಧಿ ಮಾಡಿಲ್ಲ ಎಂಬ ಎಸ್‌ಟಿ ಸೋಮಶೇಖರ್ ಅವರ ಟೀಕೆಗೆ ನಿಖಿಲ್ ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. 'ನಾನ್ಯಾಕೆ ಸೋಮಶೇಖರ್ ಗೆ ಉತ್ತರ ಕೊಡಲಿ? ಅವರಿಗೆ ಮುಂದಿನ ಚುನಾವಣೆಯಲ್ಲಿ ಯಶವಂತಪುರ ಕ್ಷೇತ್ರದ ಜನರೇ ಉತ್ತರ ನೀಡುತ್ತಾರೆ.

ಅಭಿವೃದ್ಧಿಯ ಆಧಾರದ ಮೇಲೆ ಅವರು ಗೆಲ್ಲುತ್ತಿಲ್ಲ, ಬದಲಾಗಿ ಒಂದು ವರ್ಗದ ಮುಗ್ಧ ಜನರಿಗೆ ರಾತ್ರೋರಾತ್ರಿ ಕೂಪನ್ ಮತ್ತು ಫುಡ್ ಕಿಟ್ ಕೊಟ್ಟು ವೋಟ್ ಹಾಕಿಸಿಕೊಳ್ಳುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

ಇದೇ ವೇಳೆ ಕುಮಾರಸ್ವಾಮಿ ಅವರ ಅವಧಿಯಲ್ಲಿ ಚನ್ನಪಟ್ಟಣದಲ್ಲಿ 1,200 ಕೋಟಿ ರೂಪಾಯಿ ವೆಚ್ಚದ ಅಭಿವೃದ್ಧಿ ಕೆಲಸಗಳಾಗಿವೆ ಎಂದು ಸಮರ್ಥಿಸಿಕೊಂಡ ನಿಖಿಲ್, 'ಸೋಮಶೇಖರ್ ಅವರಿಗೆ ಮಾಹಿತಿ ಕೊರತೆ ಇದ್ದರೆ, ಚನ್ನಪಟ್ಟಣದಲ್ಲಿ ಆಗಿರುವ ಅಭಿವೃದ್ಧಿ ಕೆಲಸಗಳ ಪಟ್ಟಿಯನ್ನು ನಾನೇ ಅವರ ಮನೆಗೆ ‘ಕೊರಿಯರ್’ ಮಾಡುತ್ತೇನೆ' ಎಂದು ವ್ಯಂಗ್ಯವಾಡಿದರು.

ಸಚಿವ ಜಮೀರ್ ಅಹಮ್ಮದ್ ಜೆಡಿಎಸ್‌ಗೆ ಮರಳುತ್ತಾರೆ ಎಂಬ ಸುದ್ದಿಯ ಬಗ್ಗೆ ಕೇಳಿದ ಪ್ರಶ್ನೆಗೆ, 'ಇದು ನನಗೆ ಹೊಸ ವಿಷಯ. ಕೇವಲ ಮಾಧ್ಯಮಗಳಲ್ಲಿ ಈ ಬಗ್ಗೆ ನೋಡಿದ್ದೇನೆ ಅಷ್ಟೇ, ನನ್ನ ಬಳಿ ಯಾವುದೇ ಅಧಿಕೃತ ಮಾಹಿತಿ ಇಲ್ಲ' ಎಂದು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com