'ಮಾತೃಶಕ್ತಿಗೆ ಅಪಮಾನ': 3 ದಶಕಗಳ ನಂತರವೂ ಮರುಕಳಿಸಿದ ಕರಾಳ ಇತಿಹಾಸ; ಕೊಂಚವೂ ಬದಲಾಗದ ಕಾಂಗ್ರೆಸ್ ಪಕ್ಷದ ಮಹಿಳಾ ವಿರೋಧಿ ಮನಸ್ಥಿತಿ'!

ಮಹಿಳಾ ಮೀಸಲು ಮಸೂದೆಯನ್ನು ಸೋಲಿಸಿದ ಕೂಟದ ಶಕ್ತಿಗಳನ್ನು ರಾಷ್ಟ್ರದ ನಾರಿಶಕ್ತಿ ಎಂದಿಗೂ ಕ್ಷಮಿಸುವುದಿಲ್ಲ. ಇದು ಮಾತೃಶಕ್ತಿಗೆ ಆಗಿರುವ ಅಪಮಾನ. ಇದಕ್ಕೆ ಕಾರಣರಾದ ಎಲ್ಲರೂ ತಕ್ಕ ಶಾಸ್ತಿ ಅನುಭವಿಸಬೇಕಾಗುತ್ತದೆ.
HD kumaraswamy
ಎಚ್.ಡಿ ಕುಮಾರಸ್ವಾಮಿ
Updated on

ಬೆಂಗಳೂರು: ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ ಹಿನ್ನಡೆ ಉಂಟಾದ ನಂತರ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಕಾಂಗ್ರೆಸ್ ಪಕ್ಷದ ವಿರುದ್ಧ ಹರಿಹಾಯಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ಕಾಂಗ್ರೆಸ್ ಮಹಿಳಾ ವಿರೋಧಿ ನೀತಿ ಬಗ್ಗೆ ಕಿಡಿ ಕಾರಿದ್ದಾರೆ.

1996 ಮತ್ತು 2026; ಕರಾಳ ಇತಿಹಾಸ ಮರುಕಳಿಸಿದೆ, ಮೂರು ದಶಕಗಳ ನಂತರವೂ ಕಾಂಗ್ರೆಸ್ ಪಕ್ಷದ ಮಹಿಳಾ ವಿರೋಧಿ ಮನಸ್ಥಿತಿ ಕೊಂಚವೂ ಬದಲಾಗಿಲ್ಲ ಎನ್ನುವುದಕ್ಕೆ ಲೋಕಸಭೆ ಮತ್ತೊಮ್ಮೆ ಸಾಕ್ಷಿಯಾಯಿತು.

ಅಂದು: ಶ್ರೀ ಎಚ್.ಡಿ ದೇವೇಗೌಡ ಅವರ ನೇತೃತ್ವದ ಸಂಯುಕ್ತ ರಂಗ ಸರಕಾರವು ಲೋಕಸಭೆ, ವಿಧಾನಸಭೆಗಳಲ್ಲಿ ಮಹಿಳೆಯರಿಗೆ 33% ಮೀಸಲು ನೀಡುವ ಕ್ರಾಂತಿಕಾರಿ ನಿರ್ಧಾರ ಕೈಗೊಂಡು ಸಂಸತ್ತಿನಲ್ಲಿ ಮಸೂದೆ ಮಂಡಿಸಿತ್ತು. ಅಂದು ಇದೇ ಕಾಂಗ್ರೆಸ್ ಮತ್ತು ಅದರ ಸಹಚರ ಶಕ್ತಿಗಳು ಆ ಪ್ರಯತ್ನವನ್ನು ಸಂಘಟಿತವಾಗಿ ವಿಫಲಗೊಳಿಸಿದ್ದವು.

ಇಂದು: ಆವತ್ತು ಮಹಿಳೆಯರಿಗೆ ಆಗಿದ್ದ ಐತಿಹಾಸಿಕ ಅನ್ಯಾಯ ಸರಿಪಡಿಸಲು ಗೌರವಾನ್ವಿತ ಪ್ರಧಾನಿಗಳಾದ ನರೇಂದ್ರ ಮೋದಿ ಅವರು ದಿಟ್ಟಹೆಜ್ಜೆ ಇರಿಸಿದ್ದರು. ಪುನಾ ಅದೇ ಕಾಂಗ್ರೆಸ್ ಹಾಗೂ ಅದರ ಮಿತ್ರಪಕ್ಷಗಳು ಸೇರಿ ಸನ್ಮಾನ್ಯ ಮೋದಿ ಅವರ ಪ್ರಯತ್ನಕ್ಕೆ ತಡೆಯೊಡ್ಡಿವೆ ಎಂದು ಬರೆದು ಕೊಂಡಿದ್ದಾರೆ.

ಮಹಿಳಾ ಮೀಸಲು ಮಸೂದೆಯನ್ನು ಸೋಲಿಸಿದ ಕೂಟದ ಶಕ್ತಿಗಳನ್ನು ರಾಷ್ಟ್ರದ ನಾರಿಶಕ್ತಿ ಎಂದಿಗೂ ಕ್ಷಮಿಸುವುದಿಲ್ಲ. ಇದು ಮಾತೃಶಕ್ತಿಗೆ ಆಗಿರುವ ಅಪಮಾನ. ಇದಕ್ಕೆ ಕಾರಣರಾದ ಎಲ್ಲರೂ ತಕ್ಕ ಶಾಸ್ತಿ ಅನುಭವಿಸಬೇಕಾಗುತ್ತದೆ.

ರಾಷ್ಟ್ರದ ನಾರಿಶಕ್ತಿಗೆ ನನ್ನ ಮನವಿ ಇಷ್ಟೇ, ನಿರಾಶೆ ಬೇಕಿಲ್ಲ. ಶ್ರೀ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಮುಂದೊಂದು ದಿನ ನಿಮಗೆ ಅಗ್ರಮನ್ನಣೆ ಸಿಕ್ಕೇ ಸಿಗುತ್ತದೆ. 33% ಮಹಿಳಾ ಮೀಸಲು ಗುರಿ ಸಾಧಿಸುವುದು ಶತಸಿದ್ಧ ಎಂದು ಹೇಳಿದ್ದಾರೆ.

HD kumaraswamy
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲು; ಮೂರನೇ ಎರಡರಷ್ಟು ಬಹುಮತ ಪಡೆಯುವಲ್ಲಿ NDA ವಿಫಲ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com