'ದಾವಣಗೆರೆ ಉಪಚುನಾವಣೆ ನಂತರ ಕಾಂಗ್ರೆಸ್ ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಸರಿಯಲ್ಲ': ಬಿ.ಕೆ ಹರಿಪ್ರಸಾದ್

ದಾವಣಗೆರೆ ಉಪಚುನಾವಣೆಯ ನಂತರ ಪಕ್ಷದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಪಕ್ಷಕ್ಕೆ ಒಳ್ಳೆಯದಲ್ಲ ಎಂದು ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿರುವ ಹರಿಪ್ರಸಾದ್ ದೆಹಲಿಯಲ್ಲಿ ಪತ್ರಕರ್ತರ ಜೊತೆ ಮಾತನಾಡುತ್ತಾ ಹೇಳಿದರು.
B K Hariprasad
ಬಿ ಕೆ ಹರಿಪ್ರಸಾದ್
Updated on

ನವದೆಹಲಿ: ದಾವಣಗೆರೆ ಉಪಚುನಾವಣೆಯ ಸಂದರ್ಭದಲ್ಲಿ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆ ಎಂಬ ಆರೋಪದ ಮೇರೆಗೆ ಕರ್ನಾಟಕದಲ್ಲಿ ಅಲ್ಪಸಂಖ್ಯಾತ ಸಮುದಾಯದ ನಾಯಕರ ವಿರುದ್ಧ ತೆಗೆದುಕೊಳ್ಳಲಾದ ಕ್ರಮದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್, ಯಾರ ಮೇಲಾದರೂ ಕ್ರಮ ಕೈಗೊಳ್ಳುವ ಮೊದಲು ರಾಜ್ಯ ಘಟಕವು ಸರಿಯಾದ ವಿಧಾನವನ್ನು ಅನುಸರಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ದಾವಣಗೆರೆ ಉಪಚುನಾವಣೆಯ ನಂತರ ಪಕ್ಷದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಪಕ್ಷಕ್ಕೆ ಒಳ್ಳೆಯದಲ್ಲ ಎಂದು ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿರುವ ಹರಿಪ್ರಸಾದ್ ದೆಹಲಿಯಲ್ಲಿ ಪತ್ರಕರ್ತರ ಜೊತೆ ಮಾತನಾಡುತ್ತಾ ಹೇಳಿದರು.

ರಾಜ್ಯ ಕಾಂಗ್ರೆಸ್‌ನಲ್ಲಿ ಮಾಜಿ ರಾಜ್ಯಸಭಾ ಉಪಾಧ್ಯಕ್ಷ ಎ.ಆರ್. ರೆಹಮಾನ್ ಖಾನ್ ಅವರ ನೇತೃತ್ವದಲ್ಲಿ ಶಿಸ್ತು ಸಮಿತಿ ಇದೆ. ಯಾರಾದರೂ ಸದಸ್ಯರು ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವುದು ಕಂಡುಬಂದರೆ, ಆ ವಿಷಯವನ್ನು ಸಮಿತಿಗೆ ಒಪ್ಪಿಸಬೇಕು. ಸಮಿತಿ ಸಂಬಂಧಿತ ಸದಸ್ಯರಿಂದ ಸ್ಪಷ್ಟೀಕರಣ ಕೇಳಿ, ನಂತರ ಸೂಕ್ತ ಕ್ರಮಕ್ಕೆ ಶಿಫಾರಸು ಮಾಡುತ್ತದೆ. ಕರ್ನಾಟಕ ಘಟಕವು ಈ ಪ್ರಕ್ರಿಯೆಯನ್ನು ಅನುಸರಿಸಬೇಕಿತ್ತು ಎಂದು ಅವರು ಹೇಳಿದರು.

B K Hariprasad
ದಾವಣಗೆರೆ ದಂಗಲ್: ದೆಹಲಿ ನಾಯಕರ ಸೂಚನೆ ಮೇರೆಗೆ ಮುಸ್ಲಿಂ ನಾಯಕರ ವಿರುದ್ಧ ಕ್ರಮ; ಡಿಕೆಶಿ

ಹಿರಿಯ ನಾಯಕ ಹಾಗೂ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಬಿ.ಝಡ್. ಜಮೀರ್ ಅಹ್ಮದ್ ಖಾನ್ ಅವರ ವಿರುದ್ಧವೂ ಕ್ರಮ ಕೈಗೊಳ್ಳುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗಳು ನಡೆಯುತ್ತಿವೆ. ಅವರು ಹಿರಿಯ ನಾಯಕರು ಮತ್ತು ಅಲ್ಪಸಂಖ್ಯಾತ ಸಮುದಾಯದಲ್ಲಿ ಅಪಾರ ಜನಪ್ರಿಯತೆಯನ್ನು ಹೊಂದಿದ್ದಾರೆ. ಕೆಲವು ಸ್ವಾರ್ಥಪರ ವಲಯಗಳು ಜಮೀರ್ ಅಹ್ಮದ್ ಅವರ ರಾಜೀನಾಮೆ ಬಗ್ಗೆ ವದಂತಿಗಳನ್ನು ಹರಡುತ್ತಿವೆ. ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲಾಗುತ್ತಿದೆಯೇ ಇಲ್ಲವೇ ಎಂಬುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಬೇಕು. ಈ ಬಗ್ಗೆ ಸ್ಪಷ್ಟನೆ ನೀಡುವುದರಿಂದ ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿರುವ ಚರ್ಚೆಗೆ ಅಂತ್ಯ ಬೀಳಬಹುದು ಎಂದು ಹರಿಪ್ರಸಾದ್ ಹೇಳಿದರು.

ಹರಿಯಾಣ ಕಾಂಗ್ರೆಸ್‌ನ ಉಸ್ತುವಾರಿ ಹೊತ್ತಿರುವ ಅವರು, ಹರಿಯಾಣದಲ್ಲಿಯೂ ಕೆಲವು ಶಾಸಕರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ಅದು ಸಹ ಸರಿಯಾದ ವಿಧಾನವನ್ನು ಅನುಸರಿಸಿದ ನಂತರವೇ ಕೈಗೊಳ್ಳಲಾಯಿತು ಎಂದರು.

ದಾವಣಗೆರೆ ಉಪಚುನಾವಣೆಯ ವೇಳೆ ಪಕ್ಷ ವಿರೋಧಿ ಚಟುವಟಿಕೆಗಳ ಕುರಿತು ಬಂದ ದೂರುಗಳ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಅವರನ್ನು ಪದಚ್ಯುತಗೊಳಿಸಿದ್ದು, ಕಾಂಗ್ರೆಸ್ ರಾಜ್ಯ ಘಟಕವು ಎಂಎಲ್ಸಿ ಅಬ್ದುಲ್ ಜಬ್ಬಾರ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತು ಮಾಡಿದೆ.

B K Hariprasad
Watch | ಸಿದ್ದರಾಮಯ್ಯ 'ಅಸಹಾಯಕ ಪರಿಸ್ಥಿತಿ'! ಡಿಕೆಶಿ ಹಾದಿ ತಪ್ಪುತ್ತಿದ್ದಾರೆ: ಕೆ.ಎನ್ ರಾಜಣ್ಣ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com