'ನಮ್ಮ ವಿರುದ್ಧ ಶಿಸ್ತು ಕ್ರಮ ಕೈಗೊಂಡಿದ್ದೇಕೆ?': ಕಾಂಗ್ರೆಸ್ ಹೈಕಮಾಂಡ್ ಗೆ ಮುಸ್ಲಿಂ ನಾಯಕರ ಪತ್ರ

ನಿನ್ನೆ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕರ್ನಾಟಕ ರಾಜ್ಯ ಮುಸ್ಲಿಂ ಸಂಘಟನೆಗಳ ಫೆಡರೇಷನ್ ಪ್ರತಿನಿಧಿಗಳು, ಸೋನಿಯಾ ಗಾಂಧಿ ಸೇರಿದಂತೆ ಕಾಂಗ್ರೆಸ್ ಹೈಕಮಾಂಡ್‌ಗೆ ಬರೆದ ಪತ್ರಗಳ ಪ್ರತಿಗಳನ್ನು ಬಿಡುಗಡೆ ಮಾಡಿದರು.
Abdul Jabbar
ಅಬ್ದುಲ್ ಜಬ್ಬಾರ್
Updated on

ಬೆಂಗಳೂರು: ದಾವಣಗೆರೆ ದಕ್ಷಿಣ ಉಪಚುನಾವಣೆಯ ನಂತರ, ಕಾಂಗ್ರೆಸ್ ಪಕ್ಷವು ಇಬ್ಬರು ಎಂಎಲ್ಸಿಗಳಾದ ಕೆ. ಅಬ್ದುಲ್ ಜಬ್ಬಾರ್ (ಪಕ್ಷದಿಂದ ಅಮಾನತು) ಮತ್ತು ನಸೀರ್ ಅಹ್ಮದ್ (ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ವಜಾ) ವಿರುದ್ಧ ತೆಗೆದುಕೊಂಡ ಶಿಸ್ತು ಕ್ರಮದ ವಿಚಾರವಾಗಿ ರಾಜ್ಯದ ಮುಸ್ಲಿಂ ನಾಯಕತ್ವದಲ್ಲಿ ಭಿನ್ನಾಭಿಪ್ರಾಯಗಳು ಮುಂದುವರಿದಿವೆ. ಕೆಲವರು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಈ ಕಠಿಣ ಕ್ರಮಕ್ಕೆ ಹೊಣೆಗಾರರನ್ನಾಗಿ ಆರೋಪಿಸುತ್ತಿದ್ದರೆ, ಮತ್ತೊಂದು ಗುಂಪು ಡಿ ಕೆ ಶಿವಕುಮಾರ್ ಅವರನ್ನು ಬೆಂಬಲಿಸುತ್ತಿದೆ.

ನಿನ್ನೆ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕರ್ನಾಟಕ ರಾಜ್ಯ ಮುಸ್ಲಿಂ ಸಂಘಟನೆಗಳ ಫೆಡರೇಷನ್ ಪ್ರತಿನಿಧಿಗಳು, ಸೋನಿಯಾ ಗಾಂಧಿ ಸೇರಿದಂತೆ ಕಾಂಗ್ರೆಸ್ ಹೈಕಮಾಂಡ್‌ಗೆ ಬರೆದ ಪತ್ರಗಳ ಪ್ರತಿಗಳನ್ನು ಬಿಡುಗಡೆ ಮಾಡಿದರು. 2023ರಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಮುಸ್ಲಿಂ ಸಮುದಾಯ ಪ್ರಮುಖ ಪಾತ್ರ ವಹಿಸಿದ್ದರೂ, ಪಕ್ಷವು ಅವರ ಬಗ್ಗೆ ನಿರ್ಲಕ್ಷ್ಯ ತೋರಿಸುತ್ತಿದೆ ಎಂದು ಆರೋಪಿಸಿದರು.

Abdul Jabbar
'ಸಿದ್ದರಾಮಯ್ಯ ಆಪ್ತರನ್ನು ಡಿ.ಕೆ ಶಿವಕುಮಾರ್ ಹುಡುಕಿ ಹೊಡೆದು ಹಾಕುತ್ತಿದ್ದಾರೆ, ಗೇಟ್ ಪಾಸ್ ಕೊಡೋದ್ರಲ್ಲಿ ಸಕ್ಸಸ್ ಕೂಡ ಆಗುತ್ತಿದ್ದಾರೆ': R ಅಶೋಕ್ ವ್ಯಂಗ್ಯ

ಕೆಪಿಸಿಸಿ ಅಧ್ಯಕ್ಷರು ಮುಸಲ್ಮಾನರಿಗೆ ಕಾಂಗ್ರೆಸ್ ನೀಡಿದಷ್ಟು ರಕ್ಷಣೆ ಬೇರೆ ಯಾವ ಪಕ್ಷವೂ ನೀಡಿಲ್ಲ ಎಂದು ಹೇಳಿದ್ದಾರೆ. ಇದು ತೀವ್ರ ಖಂಡನೀಯ. ರಕ್ಷಣೆ ಎಂಬುದು ಈ ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಂವಿಧಾನ ನೀಡಿದ ಹಕ್ಕು. ಅದು ಯಾವುದೇ ಪಕ್ಷವು ನೀಡುವ ಅನುಗ್ರಹವಲ್ಲ. ರಕ್ಷಣೆ ನೀಡುವುದು ಸರ್ಕಾರದ ಕರ್ತವ್ಯ. ಧರ್ಮನಿರಪೇಕ್ಷ ಸರ್ಕಾರಕ್ಕಾಗಿ ನೀಡಿದ ಬೆಂಬಲವನ್ನು ಮುಸ್ಲಿಮರ ದುರ್ಬಲತೆ ಎಂದು ಕಾಂಗ್ರೆಸ್ ಭಾವಿಸಿದರೆ ಅಥವಾ ಅವರಿಗೆ ಬೇರೆ ಆಯ್ಕೆ ಇಲ್ಲ ಎಂದುಕೊಂಡರೆ, ಅದು ಪಕ್ಷಕ್ಕೆ ರಾಜಕೀಯವಾಗಿ ದುಬಾರಿ ಆಗಲಿದೆ ಎಂದು ಎಚ್ಚರಿಕೆ ನೀಡಿದರು. ರಾಜ್ಯದ ವಿವಿಧ ಭಾಗಗಳಿಂದ 50ಕ್ಕೂ ಹೆಚ್ಚು ಮಂದಿ ಈ ಹೇಳಿಕೆಗೆ ಸಹಿ ಹಾಕಿದ್ದರು.

ಇದಕ್ಕೆ ವಿರುದ್ಧವಾಗಿ, ಮತ್ತೊಂದು ಮುಸ್ಲಿಂ ನಾಯಕರ ಗುಂಪು ಮತ್ತು ಕೆಪಿಸಿಸಿ ಪದಾಧಿಕಾರಿಗಳು, ಎಂಎಲ್ಸಿಗಳ ವಿರುದ್ಧ ತೆಗೆದುಕೊಂಡ ಕ್ರಮವನ್ನು ಸಮರ್ಥಿಸಿದರು. ಈ ನಾಯಕರು ಪಕ್ಷವಿರೋಧಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದು, ಅದು ಬಿಜೆಪಿಗೆ ಲಾಭವಾಗುತ್ತದೆ. ಈ ಪರಿಸ್ಥಿತಿ ಮುಸ್ಲಿಂ ನಾಯಕತ್ವದ ಒಂದು ವಿಭಾಗದ ವೈಫಲ್ಯದ ಫಲಿತಾಂಶ. ಅವರು ಅಲ್ಪಸಂಖ್ಯಾತ ಅಭ್ಯರ್ಥಿಗೆ ಟಿಕೆಟ್ ಪಡೆಯಲು ವಿಫಲರಾದರು ಎಂದು ಹೇಳಿದರು.

Abdul Jabbar
ಸಿದ್ದರಾಮಯ್ಯ 'ಅಸಹಾಯಕ ಪರಿಸ್ಥಿತಿ'ಯಲ್ಲಿದ್ದಾರೆ, ಡಿಕೆಶಿ ಹಾದಿ ತಪ್ಪುತ್ತಿದ್ದಾರೆ: ಕಾಂಗ್ರೆಸ್ ಶಾಸಕ KN Rajanna; Video

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಹಲವು ಮುಸ್ಲಿಂ ಅಭ್ಯರ್ಥಿಗಳಲ್ಲಿ ಒಬ್ಬರನ್ನು ಪರಿಗಣಿಸಲು ಸಿದ್ಧವಾಗಿತ್ತು. ಆದರೆ ನಾಯಕತ್ವವು ಇತರ ಅರ್ಹ ಅಭ್ಯರ್ಥಿಗಳನ್ನು ಕಡೆಗಣಿಸಿ ಕೇವಲ ಅಬ್ದುಲ್ ಜಬ್ಬಾರ್ ಅವರ ಹೆಸರನ್ನೇ ಮುಂದಿಟ್ಟಿತು ಎಂದು ಆರೋಪಿಸಿದರು.

ಪಕ್ಷದ ಕಾರ್ಯಕರ್ತರ ನಡುವೆ ಕೆಲವು ವ್ಯಕ್ತಿಗಳು ನೇರವಾಗಿ ಅಥವಾ ಪರೋಕ್ಷವಾಗಿ ಪಕ್ಷವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆ ಎಂಬುದು ಎಲ್ಲರಿಗೂ ತಿಳಿದ ವಿಷಯ. ಈ ಗುಂಪುಗಳು ಮುಸ್ಲಿಂ ಮತದಾರರೊಳಗೆ ಭೇದವನ್ನು ಉಂಟುಮಾಡಿ, ಗೊಂದಲ ಸೃಷ್ಟಿಸಿ, ಬೆಂಬಲಿಗರನ್ನು ತಪ್ಪುದಾರಿಗೆಳೆಯುವ ಮೂಲಕ ಅಂತಿಮವಾಗಿ ಬಿಜೆಪಿಗೆ ಲಾಭವಾಗುವಂತೆ ಮಾಡಿವೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com