JDS ಜೊತೆ ಸಮಾಲೋಚಿಸದೆ ಪರಿಷತ್ ಚುನಾವಣೆಗೆ ಅಭ್ಯರ್ಥಿ ಘೋಷಣೆ: BJP ಹೈಕಮಾಂಡ್ ಗೆ HDK ದೂರು!

ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಮತ್ತು ಪಕ್ಷದ ಮಾಜಿ ಅಧ್ಯಕ್ಷ ಜೆ ಪಿ ನಡ್ಡಾ ಅವರೊಂದಿಗೆ ಈ ಬಗ್ಗೆ ಚರ್ಚಿಸಿದ್ದಾರೆ. ನಾವು ಬಿಜೆಪಿಯ ಪ್ರತಿಕ್ರಿಯೆಗಾಗಿ ಕಾಯುತ್ತಿದ್ದೇವೆ ಎಂದು ಹೇಳಿದರು.
HD Kumaraswamy
ಎಚ್‌ಡಿ ಕುಮಾರಸ್ವಾಮಿ
Updated on

ಬೆಂಗಳೂರು: ಈ ವರ್ಷದ ಕೊನೆಯಲ್ಲಿ ಚುನಾವಣೆ ನಡೆಯಲಿರುವ ಮೂರು ಕೌನ್ಸಿಲ್ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸುವ ಬಿಜೆಪಿಯ ಏಕಪಕ್ಷೀಯ ನಿರ್ಧಾರವು ಅದರ ಮೈತ್ರಿ ಪಾಲುದಾರ ಜೆಡಿಎಸ್ ಪಕ್ಷಕ್ಕೆ ಇರಿಸು-ಮುರಿಸು ಉಂಟು ಮಾಡಿದೆ.

ಈ ಸಂಬಂಧ ಪ್ರಾದೇಶಿಕ ಪಕ್ಷದ ಕರ್ನಾಟಕ ಅಧ್ಯಕ್ಷ ಮತ್ತು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಬಿಜೆಪಿ ಹೈಕಮಾಂಡ್ ಮುಂದೆ ಈ ವಿಷಯ ಪ್ರಸ್ತಾಪಿಸಿದ್ದಾರೆ ಎನ್ನಲಾಗಿದೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿ (ಎಸ್) ನಾಯಕ ನಿಖಿಲ್ ಕುಮಾರಸ್ವಾಮಿ, ಎಚ್ ಡಿ ಕುಮಾರಸ್ವಾಮಿ ಅವರು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಮತ್ತು ಪಕ್ಷದ ಮಾಜಿ ಅಧ್ಯಕ್ಷ ಜೆ ಪಿ ನಡ್ಡಾ ಅವರೊಂದಿಗೆ ಈ ಬಗ್ಗೆ ಚರ್ಚಿಸಿದ್ದಾರೆ. ನಾವು ಬಿಜೆಪಿಯ ಪ್ರತಿಕ್ರಿಯೆಗಾಗಿ ಕಾಯುತ್ತಿದ್ದೇವೆ ಎಂದು ಹೇಳಿದರು.

ಮಾರ್ಚ್‌ನಲ್ಲಿ ಬಿಜೆಪಿ ತನ್ನ ಮೂರು ಕೌನ್ಸಿಲ್ ಸ್ಥಾನಗಳಿಗೆ, ಆಗ್ನೇಯ ಪದವೀಧರರ ಕ್ಷೇತ್ರ, ಈಶಾನ್ಯ ಶಿಕ್ಷಕರ ಕ್ಷೇತ್ರ ಮತ್ತು ಪಶ್ಚಿಮ ಪದವೀಧರರ ಕ್ಷೇತ್ರ - ಅಭ್ಯರ್ಥಿಗಳನ್ನು ಘೋಷಿಸಿತು, ವರದಿಯ ಪ್ರಕಾರ, ಜೆಡಿಎಸ್ ನಾಯಕರೊಂದಿಗೆ ಸಮಾಲೋಚಿಸದೆ ಅಭ್ಯರ್ಥಿ ಘೋಷಿಸಿದೆ.

ಬುಧವಾರ ನಡೆದ ತನ್ನ ಕೋರ್ ಕಮಿಟಿ ಸಭೆಯಲ್ಲಿ, ಸುಪ್ರೀಂ ಕೋರ್ಟ್‌ನ ಆದೇಶಗಳಿಗೆ ಅನುಗುಣವಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಪಾಲಿಕೆ ನಿಗಮಗಳಿಗೆ ಚುನಾವಣೆ ನಡೆಸಲು ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಲು ಜೆಡಿ (ಎಸ್) ನಿರ್ಧಾರ ತೆಗೆದುಕೊಂಡಿದೆ ಎಂದು ತಿಳಿದುಬಂದಿದೆ.

HD Kumaraswamy
2028ಕ್ಕೆ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರುವುದು ನಿಶ್ಚಿತ; CM ಅಭ್ಯರ್ಥಿಗಳ ಪಟ್ಟಿಯಲ್ಲಿ ನನ್ನ ಹೆಸರೂ ಇದೆ: ಆರ್. ಅಶೋಕ್

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com