ಮೇ 20ರೊಳಗೆ ಸಚಿವ ಸಂಪುಟ ವಿಸ್ತರಣೆ: ಈಗಿರುವ ಶೇ.50 ಸಚಿವರನ್ನು ಕೈಬಿಡಿ; ಸಲೀಂ ಆಹ್ಮದ್

ಸಿಎಂ ಸಿದ್ದರಾಮಯ್ಯ ಅವರಿಗೆ ಎಲ್ಲರೂ ಆಪ್ತರು. ಅವರು ತಮ್ಮ ಮಂತ್ರಿ ಮಂಡಲದ ಸಭೆ ಮತ್ತು ಶಾಸಕರ ಸಭೆ ಮಾಡುತ್ತಾರೆ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದರು.
Saleem Ahmed
ಸಲೀಂ ಅಹ್ಮದ್
Updated on

ಹುಬ್ಬಳ್ಳಿ: ಎಲ್ಲ ಹಿರಿಯ ಶಾಸಕರು ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಮಾಡಿದ್ದಾರೆ. ಮೇ 20ರೊಳಗೆ ಸಚಿವ ಸಂಪುಟ ವಿಸ್ತರಣೆಯಾಗುವ ವಿಶ್ವಾಸವಿದೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದರು.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಈ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಮತ್ತು ಹೈಕಮಾಂಡ್ ತೀರ್ಮಾನವೇ ಅಂತಿಮವಾಗಿದೆ. ಸಿಎಂ ಸಿದ್ದರಾಮಯ್ಯ ಅವರಿಗೆ ಎಲ್ಲರೂ ಆಪ್ತರು. ಅವರು ತಮ್ಮ ಮಂತ್ರಿ ಮಂಡಲದ ಸಭೆ ಮತ್ತು ಶಾಸಕರ ಸಭೆ ಮಾಡುತ್ತಾರೆ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದರು.

ನಾಯಕತ್ವ ಬದಲಾವಣೆ ಮಾತೇ ಇಲ್ಲ. ಈ ಕುರಿತು ಮಾತನಾಡದಂತೆ ಹೈಕಮಾಂಡ್ ಸೂಚನೆ ನೀಡಿದೆ. ಹೀಗಾಗಿ ಈ ಬಗ್ಗೆ ಯಾವುದೇ ಹೇಳಿಕೆ ನೀಡುವುದಿಲ್ಲ. ವಿವಿಧ ರಾಜ್ಯಗಳು ಹಾಗೂ ರಾಜ್ಯದಲ್ಲಿನ ಉಪ ಚುನಾವಣೆ ಫಲಿತಾಂಶ ಮೇ 4ರಂದು ಬರಲಿದ್ದು, ನಂತರ ಸಂಪುಟ ವಿಸ್ತರಣೆ ವಿಷಯ ಚರ್ಚೆಗೆ ಬರಲಿದೆ.

ಈಗಿರುವ ಶೇ.50 ಸಚಿವರನ್ನು ಪಕ್ಷದ ಕೆಲಸಕ್ಕೆ ನಿಯೋಜನೆ ಮಾಡಬೇಕು. ಉಳಿದವರಿಗೆ ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದೇವೆ. ಈ ಬಗ್ಗೆ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ. ಹೈಕಮಾಂಡ್ ಕೈಗೊಳ್ಳುವ ನಿರ್ಧಾರಕ್ಕೆ ನಾವು ಬದ್ಧ ಎಂದು ವಿಧಾನ ಪರಿಷತ್‌ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದರು.

Saleem Ahmed
ನಾಯಕತ್ವ ಬದಲಾವಣೆ, ಸಚಿವ ಸಂಪುಟ ವಿಸ್ತರಣೆ ಸೇರಿದಂತೆ ಎಲ್ಲವನ್ನೂ ತೀರ್ಮಾನ ಮಾಡುವುದು ಹೈಕಮಾಂಡ್: ಪರಮೇಶ್ವರ್'ಗೆ ಡಿ.ಕೆ ಸುರೇಶ್ ತಿರುಗೇಟು

ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದವರ ವಿರುದ್ಧ ಕ್ರಮಕ್ಕೆ ಸಚಿವ ಜಮೀರ್ ಅಹಮದ್ ಖಾನ್ ಒತ್ತಾಯಿಸಿದ್ದಾರೆ. ಇದು ನಾನು ಸೇರಿದಂತೆ ಪ್ರತಿಯೊಬ್ಬ ಕಾರ್ಯಕರ್ತನ ಒತ್ತಾಯವಾಗಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com