ನಾಲ್ಕು ವೋಟಿಗೋಸ್ಕರ ದೇಶದ್ರೋಹಿಗಳನ್ನು ಬ್ರದರ್ಸ್ ಎನ್ನುವ ಸ್ವಾರ್ಥಿಗಳು CM ಆಗಲು ಹೊರಟಿರುವುದು ರಾಜ್ಯದ ದುರಂತ!

ದೇಶದ ಭದ್ರತೆಗಿಂತ ಕಾಂಗ್ರೆಸ್‌ಗೆ ವೋಟ್ ಬ್ಯಾಂಕ್ ರಾಜಕಾರಣವೇ ಮುಖ್ಯವಾಗಿದೆ. ಕಾಂಗ್ರೆಸ್‌ ಇನ್ನಾದರೂ ಮತಾಂಧರನ್ನು ತಮ್ಮ ಬ್ರದರ್ಸ್‌ ಎಂದು ಸಮರ್ಥನೆ ಮಾಡಿಕೊಳ್ಳುವುದನ್ನು ಬಿಡಬೇಕಿದೆ.
R Ashok
ಆರ್ ಅಶೋಕ್
Updated on

ಬೆಂಗಳೂರು: ನಾಲ್ಕು ವೋಟಿಗೋಸ್ಕರ ದೇಶದ್ರೋಹಿಗಳನ್ನು ಬ್ರದರ್ಸ್ ಎಂದು ಸಮರ್ಥನೆ ಮಾಡಿಕೊಳ್ಳುವ ಸ್ವಾರ್ಥಿಗಳು ನಾಡಿನ ಸಿಎಂ ಆಗಲು ಹೊರಟಿರುವುದು ಕರ್ನಾಟಕದ ದುರಂತ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿದ್ದಾರೆ.

ಈ ಸಂಬಂಧ ಟ್ಟೀಟ್ ಮಾಡಿರುವ ಅವರು. ಅಂದು ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟವನ್ನು ಕೇವಲ 'ಡೈವರ್ಶನ್ ಪಾಲಿಟಿಕ್ಸ್' ಎಂದು ಲೇವಡಿ ಮಾಡಿ ಉಗ್ರರ ಪರ ನಿಂತಿದ್ದ ಡಿ.ಕೆ ಶಿವಕುಮಾರ್ ಹಾಗೂ ಕಾಂಗ್ರೆಸ್ ನಾಯಕರಿಗೆ ಈಗ ಸತ್ಯದ ದರ್ಶನವಾಗಿದೆ ಎಂದಿದ್ದಾರೆ.

ಈ ಪ್ರಕರಣದ ಉಗ್ರ ಶಾರೀಕ್‌ನ ಕೃತ್ಯ ಸಾಬೀತಾಗಿದ್ದು, NIA ನ್ಯಾಯಾಲಯ ಆತನಿಗೆ 10 ವರ್ಷಗಳ ಕಠಿಣ ಶಿಕ್ಷೆ ವಿಧಿಸಿದೆ. ರಾಷ್ಟ್ರೀಯ ಭದ್ರತೆಯಂತಹ ಗಂಭೀರ ವಿಚಾರದಲ್ಲೂ ಕೇವಲ ತುಷ್ಟೀಕರಣ ಮತ್ತು ಓಲೈಕೆ ರಾಜಕಾರಣ ಮಾಡುವ ಕರ್ನಾಟಕ ಕಾಂಗ್ರೆಸ್ ನೈಜ ಮುಖವಾಡ ಕಳಚಿದೆ ಎಂದಿದ್ದಾರೆ.

ದೇಶದ ಭದ್ರತೆಗಿಂತ ಕಾಂಗ್ರೆಸ್‌ಗೆ ವೋಟ್ ಬ್ಯಾಂಕ್ ರಾಜಕಾರಣವೇ ಮುಖ್ಯವಾಗಿದೆ. ಕಾಂಗ್ರೆಸ್‌ ಇನ್ನಾದರೂ ಮತಾಂಧರನ್ನು ತಮ್ಮ ಬ್ರದರ್ಸ್‌ ಎಂದು ಸಮರ್ಥನೆ ಮಾಡಿಕೊಳ್ಳುವುದನ್ನು ಬಿಡಬೇಕಿದೆ ಎಂದು ಅಶೋಕ್ ಆಗ್ರಹಿಸಿದ್ದಾರೆ.

R Ashok
Watch | ಮಂಗಳೂರು ಕುಕ್ಕರ್‌ ಬಾಂಬ್ ಬ್ಲಾಸ್ಟ್! ಉಗ್ರ ಶಾರಿಕ್‌ಗೆ 10 ವರ್ಷ ಜೈಲು ಶಿಕ್ಷೆ!

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com