ಕಾಂಗ್ರೆಸ್‌ ಲೆಟರ್‌ಹೆಡ್‌ನಲ್ಲಿ ಸ್ಪೀಕರ್‌ ಹೆಸರು; ಮತ್ತೊಂದು ಕೆಟ್ಟ ಸಂಪ್ರದಾಯಕ್ಕೆ ನಾಂದಿ: ಸುರೇಶ್‌ ಕುಮಾರ್‌ ಕಿಡಿ

ವಿಧಾನಸಭೆಯ ಮಾನ್ಯ ಸಭಾಧ್ಯಕ್ಷರು, ಮಾನ್ಯ ಉಪಸಭಾಧ್ಯಕ್ಷರು ಹಾಗೂ ವಿಧಾನ ಪರಿಷತ್ತಿನ ಮಾನ್ಯ ಸಭಾಪತಿಗಳು ಮತ್ತು ಉಪಸಭಾಪತಿ ಹುದ್ದೆಗಳು ಯಾವುದೇ ರಾಜಕೀಯ ಪಕ್ಷದ ವ್ಯಾಪ್ತಿಗೆ ಸೀಮಿತವಾಗದ, ಅತ್ಯುನ್ನತ ಸಾಂವಿಧಾನಿಕ ಸ್ಥಾನಗಳಾಗಿವೆ.
BJP MLA Suresh Kumar slams Karnataka govt over Speaker's name on Congress letterhead
ಸುರೇಶ್ ಕುಮಾರ್
Updated on

ಬೆಂಗಳೂರು: ಬಹುನಿರೀಕ್ಷಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ಸೋಮವಾರ ವಿಸ್ತರಣೆಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ 20 ನೂತನ ಸಚಿವರ ಹೆಸರನ್ನು ಹಾಗೂ ವಿಧಾನಸಭೆ ಸ್ಪೀಕರ್ ಮತ್ತು ವಿಧಾನ ಪರಿಷತ್ ಸಭಾಧ್ಯಕ್ಷರನ್ನು ಹೆಸರನ್ನು ಪಕ್ಷದ ಲೆಟರ್‌ಹೆಡ್‌ನಲ್ಲಿ ಪ್ರಕಟಿಸಿದೆ.

ಕಾಂಗ್ರೆಸ್ ಲೆಟರ್‌ಹೆಡ್‌ನಲ್ಲಿ ಸ್ಪೀಕರ್, ಡೆಪ್ಯುಟಿ ಸ್ಪೀಕರ್, ಸಭಾಪತಿ, ಉಪಸಭಾಪತಿ ಹುದ್ದೆಗಳಿಗೆ ಹೆಸರು ಆಯ್ಕೆ ಮಾಡಿ ಪ್ರಕಟಿಸಿರುವ ವಿಚಾರಕ್ಕೆ ಬಿಜೆಪಿ ಹಿರಿಯ ಶಾಸಕ ಸುರೇಶ್‌ ಕುಮಾರ್‌ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಮತ್ತೊಂದು ಕೆಟ್ಟ ಸಂಪ್ರದಾಯಕ್ಕೆ ಕಾಂಗ್ರೆಸ್‌ ಪಕ್ಷ ನಾಂದಿ ಹಾಡಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ವಿಧಾನಸಭೆಯ ಮಾನ್ಯ ಸಭಾಧ್ಯಕ್ಷರು, ಮಾನ್ಯ ಉಪಸಭಾಧ್ಯಕ್ಷರು ಹಾಗೂ ವಿಧಾನ ಪರಿಷತ್ತಿನ ಮಾನ್ಯ ಸಭಾಪತಿಗಳು ಮತ್ತು ಉಪಸಭಾಪತಿ ಹುದ್ದೆಗಳು ಯಾವುದೇ ರಾಜಕೀಯ ಪಕ್ಷದ ವ್ಯಾಪ್ತಿಗೆ ಸೀಮಿತವಾಗದ, ಅತ್ಯುನ್ನತ ಸಾಂವಿಧಾನಿಕ ಸ್ಥಾನಗಳಾಗಿವೆ. ಈ ಹುದ್ದೆಗಳು ತಮ್ಮದೇ ಆದ ಘನತೆ, ಗೌರವ, ನಿಷ್ಪಕ್ಷಪಾತತೆ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಪ್ರತಿನಿಧಿಸುವ ಪರಂಪರೆಯನ್ನು ಹೊಂದಿವೆ. ಆದರೆ, ಕಾಂಗ್ರೆಸ್ ತನ್ನ ಅಧಿಕೃತ ಪಕ್ಷದ ಪತ್ರ ಶೀರ್ಷಿಕೆಯಲ್ಲಿ(ಲೆಟರ್‌ಹೆಡ್) ಈ ಸಾಂವಿಧಾನಿಕ ಹುದ್ದೆಗಳ ಹೆಸರನ್ನು ಬಳಸಿರುವುದು ಅತ್ಯಂತ ಆಕ್ಷೇಪಾರ್ಹ. ಇಂತಹ ನಡೆ ಈ ಹುದ್ದೆಗಳ ಪಕ್ಷಾತೀತ ಸ್ವರೂಪಕ್ಕೆ ಧಕ್ಕೆ ತರುವುದಲ್ಲದೆ, ಅವುಗಳ ಘನತೆ ಮತ್ತು ಗೌರವಕ್ಕೂ ಕಳಂಕ ತರುವ ಪ್ರಯತ್ನವಾಗಿದೆ ಎಂದು ಟೀಕಿಸಿದ್ದಾರೆ.

BJP MLA Suresh Kumar slams Karnataka govt over Speaker's name on Congress letterhead
ಸಂಪುಟ ವಿಸ್ತರಣೆಯಲ್ಲಿ ಬಿಗ್ ಟ್ವಿಸ್ಟ್: ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 19 ಶಾಸಕರು; ಕೊನೆ ಕ್ಷಣದಲ್ಲಿ ಒಬ್ಬರಿಗೆ ಕೊಕ್!
ಕಾಂಗ್ರೆಸ್‌ ಲೆಟರ್‌ಹೆಡ್‌
ಕಾಂಗ್ರೆಸ್‌ ಲೆಟರ್‌ಹೆಡ್‌

ನನಗೆ ಗೊತ್ತಿರುವಂತೆ ಮುಂದೆ ಆಯ್ಕೆಯಾಗಬೇಕಿರುವ ಸಭಾಧ್ಯಕ್ಷರ, ಉಪಸಭಾಧ್ಯಕ್ಷರ, ಸಭಾಪತಿಗಳ ಹಾಗೂ ಉಪ ಸಭಾಪತಿಗಳ ಹೆಸರುಗಳನ್ನು ಆಳುವ ಪಕ್ಷದ ಲೆಟರ್ ಹೆಡ್ ನಲ್ಲಿ ದೆಹಲಿಯಿಂದಲೇ ಕಳುಹಿಸುತ್ತಿರುವುದು ಇದೇ ಮೊದಲ ಬಾರಿ ಎಂದು ಸುರೇಶ್ ಕುಮಾರ್ ಅವರು ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇದು ಕೇವಲ ಸಂಸದೀಯ ಸಂಪ್ರದಾಯಗಳ ಉಲ್ಲಂಘನೆಯಷ್ಟೇ ಅಲ್ಲ; ಸಾಂವಿಧಾನಿಕ ಮೌಲ್ಯಗಳು ಮತ್ತು ಪ್ರಜಾಪ್ರಭುತ್ವದ ಮೂಲಭೂತ ತತ್ವಗಳ ಮೇಲಿನ ನಿರ್ಲಕ್ಷ್ಯದ ಪ್ರತೀಕವಾಗಿದೆ.

ಬಾಯಲ್ಲಿ ಸಂವಿಧಾನದ ರಕ್ಷಣೆ ಎಂದು ಹೇಳಿಕೊಂಡು, ಆಚರಣೆಯಲ್ಲಿ ಸಾಂವಿಧಾನಿಕ ಸಂಸ್ಥೆಗಳು ಮತ್ತು ಉನ್ನತ ಹುದ್ದೆಗಳನ್ನು ಪಕ್ಷದ ರಾಜಕೀಯ ಉದ್ದೇಶಗಳಿಗೆ ಬಳಸಿಕೊಳ್ಳುವ ಕಾಂಗ್ರೆಸ್‌ನ ದ್ವಂದ್ವ ನೀತಿ ಮತ್ತೊಮ್ಮೆ ಬಹಿರಂಗವಾಗಿದೆ ಎಂದು ಕಿಡಿ ಕಾರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com