MLC ಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣ ವಚನ ಸ್ವೀಕಾರ; Video

ಈ ಸಂದರ್ಭದಲ್ಲಿ ಸಿಎಂ ಡಿ ಕೆ ಶಿವಕುಮಾರ್ ಉಪಸ್ಥಿತರಿದ್ದರು. ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ಬಳಿಕ ಸಭಾಪತಿ ಹೊರಟ್ಟಿಯವರನ್ನು ಸಿಎಂ ಡಿ ಕೆ ಶಿವಕುಮಾರ್, ಸಚಿವ ನರೇಂದ್ರ ಸ್ವಾಮಿ ಹಾಗೂ ಸಲೀಂ ಅಹ್ಮದ್ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
Gayatri Shante Gowda oath taking
ಗಾಯತ್ರಿ ಶಾಂತೇಗೌಡ ಪ್ರಮಾಣ ವಚನ
Updated on

ಬೆಂಗಳೂರು: ವಿಧಾನ ಪರಿಷತ್ ಸದಸ್ಯರಾಗಿ ಗಾಯತ್ರಿ ಶಾಂತೇಗೌಡ ಇಂದು ಶುಕ್ರವಾರ ಅಧಿಕಾರ ಸ್ವೀಕರಿಸಿದ್ದಾರೆ. ಸಭಾಪತಿ ಬಸವರಾಜ ಹೊರಟ್ಟಿ ಕೊಠಡಿಯಲ್ಲಿ ಇಂದು ಬೆಳಗ್ಗೆ ನಡೆದ ಕಾರ್ಯಕ್ರಮದಲ್ಲಿ ಭಗವಂತನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಸಿಎಂ ಡಿ ಕೆ ಶಿವಕುಮಾರ್ ಉಪಸ್ಥಿತರಿದ್ದರು. ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ಬಳಿಕ ಸಭಾಪತಿ ಹೊರಟ್ಟಿಯವರನ್ನು ಸಿಎಂ ಡಿ ಕೆ ಶಿವಕುಮಾರ್, ಸಚಿವ ನರೇಂದ್ರ ಸ್ವಾಮಿ ಹಾಗೂ ಸಲೀಂ ಅಹ್ಮದ್ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಗಾಯತ್ರಿ ಶಾಂತೇಗೌಡ ಅವರು ಸಚಿವ ಸಂಪುಟಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ನಿರೀಕ್ಷಿಸಲಾಗಿದ್ದರೂ, ಕೊನೆಯ ಕ್ಷಣದಲ್ಲಿ ಅವರ ಹೆಸರನ್ನು ಕೈಬಿಡಲಾಗಿತ್ತು.ಎಂಎಲ್‌ಸಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ, ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಬಗ್ಗೆ ಸ್ಪಷ್ಟನೆ ಸಿಗುವ ಸಾಧ್ಯತೆಯಿದೆ.

Gayatri Shante Gowda oath taking
MLC ಯಾಗಿ ಗಾಯತ್ರಿ ಶಾಂತೇಗೌಡ ಇಂದು ಪ್ರಮಾಣವಚನ: ಸಂಪುಟಕ್ಕೆ ಸೇರ್ಪಡೆ ಕುರಿತು ನಿರ್ಧಾರ ಎಂದು?

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com