ಆಗಸ್ಟ್ 13ರಿಂದ ವಿಧಾನಮಂಡಲ ಅಧಿವೇಶನ: ಟಿ.ಬಿ ಜಯಚಂದ್ರ ಹಂಗಾಮಿ ಸಭಾಧ್ಯಕ್ಷ

ಆಗಸ್ಟ್ 13 ರಿಂದ 27ರ ವರೆಗೆ 10 ದಿನಗಳ ಕಾಲ ನಡೆಯಲಿರುವ ಮಳೆಗಾಲದ ವಿಧಾನಮಂಡಲ ಅಧಿವೇಶನವನ್ನ ಟಿಬಿ ಜಯಚಂದ್ರ ನಡೆಸಿಕೊಡಲಿದ್ದಾರೆ.
TB Jayachandra
ಟಿ.ಬಿ. ಜಯಚಂದ್ರonline desk
Updated on

ಬೆಂಗಳೂರು: ಆ.13 ರಿಂದ ರಾಜ್ಯ ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು, ಹಂಗಾಮಿ ಸಭಾಧ್ಯಕ್ಷರಾಗಿ ಆ.10 ರಿಂದ ಹಿರಿಯ ಕಾಂಗ್ರೆಸ್ ನಾಯಕ, ಶಿರಾ ಶಾಸಕ, ಮಾಜಿ ಸಚಿವ ಟಿಬಿ ಜಯಚಂದ್ರ (TB Jayachandra) ಕಾರ್ಯನಿರ್ವಹಿಸಲಿದ್ದಾರೆ.

ಆಗಸ್ಟ್ 13 ರಿಂದ 27ರ ವರೆಗೆ 10 ದಿನಗಳ ಕಾಲ ನಡೆಯಲಿರುವ ಮಳೆಗಾಲದ ವಿಧಾನಮಂಡಲ ಅಧಿವೇಶನವನ್ನ ಟಿಬಿ ಜಯಚಂದ್ರ ನಡೆಸಿಕೊಡಲಿದ್ದಾರೆ.

ಅಧಿವೇಶನದ ಮೊದಲ ದಿನವಾದ ಗುರುವಾರ, ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಸಚಿವರಾಗಿದ್ದ ಡಿ ಸುಧಾಕರ್, ಮಾಜಿ ಪ್ರಧಾನಿ ದೇವೇಗೌಡ (HD Devegowda) ಅವರ ಪತ್ನಿ ಚೆನ್ನಮ್ಮ ದೇವೇಗೌಡ ಸೇರಿದಂತೆ ಇತ್ತೀಚಿಗೆ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಗುತ್ತದೆ. ಶುಕ್ರವಾರದಿಂದ ನಿಗದಿತ ವೇಳಾಪಟ್ಟಿಯಂತೆ ಕಲಾಪ ನಡೆಯಲಿದೆ.

TB Jayachandra
ಸಚಿವ ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ನಲ್ಲಿ ಆಂತರಿಕ ಬಿಕ್ಕಟ್ಟು; ತಲೆಕೆಳಗಾದ ಹೈಕಮಾಂಡ್ ಲೆಕ್ಕಾಚಾರ?

ಕಳೆದ ಸೋಮವಾರ ನಡೆದ ಮೊದಲ ಸಂಪುಟ ವಿಸ್ತರಣೆಯಲ್ಲಿ ಸಚಿವರಾದ 19 ಸಚಿವರಿಗೆ ಖಾತೆಗಳನ್ನ ಹಂಚಿಕೆ ಮಾಡಬೇಕಿದ್ದು, ಅಧಿವೇಶನ ಆರಂಭಕ್ಕೆ ಮುನ್ನ ಸಚಿವರುಗಳಿಗೆ ಖಾತೆಗಳನ್ನು ಹಂಚುವ ಸಂಭವವಿದೆ.

ಮುಂಗಾರು ಮಳೆ ಸಕಾಲಕ್ಕೆ ರಾಜ್ಯದಲ್ಲಿ ಉಂಟಾಗಿರುವ ಬರ ಪರಿಸ್ಥಿತಿ, ತಮಿಳುನಾಡಿಗೆ ಕಾವೇರಿ ನೀರು ಹರಿಸುವಿಕೆ, ಬಿಡದಿ ಟೌನ್‌ಶಿಪ್‌ ವಿಷಯಗಳು ಸದನಗಳಲ್ಲಿ ತೀವ್ರ ಚರ್ಚೆಯಾಗುವ ನಿರೀಕ್ಷೆಗಳಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com