ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮುಂಗಾರು ಅಧಿವೇಶನ ಮುಗಿದ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಕುರಿತು ಚರ್ಚೆ ಆರಂಭವಾಗಿದ್ದು, ಈ ಬಾರಿ ಮೂರರಿಂದ ಐದು ಸಚಿವರನ್ನು ಸಂಪುಟದಿಂದ ಕೈಬಿಡುವ ಸಾಧ್ಯತೆ ಇದೆ.
CM DK Shivakumar
ಸಿಎಂ ಡಿಕೆ ಶಿವಕುಮಾರ್
Updated on

ಬೆಂಗಳೂರು: ವಿಧಾನಮಂಡಲ ಮುಂಗಾರು ಅಧಿವೇಶನಕ್ಕೆ ಮೂರು ದಿನಗಳ ಮೊದಲೇ ಮುಗಿದ ಬೆನ್ನಲ್ಲೇ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟದಲ್ಲಿ ಮತ್ತೆ ಭಾರಿ ಬದಲಾವಣೆಯಾಗುವ ಕುರಿತ ಚರ್ಚೆ ಆರಂಭವಾಗಿದೆ.

ಆಗಸ್ಟ್​​ 13ರಿಂದ ಆಗಸ್ಟ್ 27ರ ವರೆಗೆ ಮುಂಗಾರು ಅಧಿವೇಶನ ನಡೆಸಲು ಆರಂಭದಲ್ಲಿ ತೀರ್ಮಾನಿಸಲಾಗಿತ್ತು. ಆದರೆ ಪ್ರತಿಪಕ್ಷಗಳ ಪ್ರತಿಭಟನೆ ಮತ್ತು ಗದ್ದಲದ ಹಿನ್ನಲೆಯಲ್ಲಿ ಮೂರು ದಿನಗಳ ಮುಂಚಿತವಾಗಿಯೇ ಸೋಮವಾರೇ ವಿಧಾನಸಭೆ ಮತ್ತು ವಿಧಾನ ಪರಿಷತ್​​ ಕಲಾಪಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ.

ಇದರ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಕುರಿತು ಚರ್ಚೆ ಆರಂಭವಾಗಿದ್ದು, ಈ ಬಾರಿ ಮೂರರಿಂದ ಐದು ಸಚಿವರನ್ನು ಸಂಪುಟದಿಂದ ಕೈಬಿಟ್ಟು, ಹೊಸಬರಿಗೆ ಅವಕಾಶ ನೀಡುವ ಬಗ್ಗೆ ಹೈಕಮಾಂಡ್ ಮಟ್ಟದಲ್ಲಿ ಚರ್ಚೆ ನಡೆದಿದೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.

CM DK Shivakumar
ಸಂಪುಟ ವಿಸ್ತರಣೆ: ಬೆಟ್ಟ ಅಗೆದು ಇಲಿ ಹಿಡಿದ ಕಥೆ (ನೇರ ನೋಟ)

ಈಗಾಗಲೇ ರಾಜ್ಯದ ನಾಯಕರೊಂದಿಗೆ ಹೈಕಮಾಂಡ್ ನಾಯಕರು ಮಾತುಕತೆ ನಡೆಸಿದ್ದು, ಹಿರಿಯ ಸಚಿವರನ್ನು ಸಂಪುಟದಿಂದ ಕೈಬಿಡುವ ಬಗ್ಗೆಯೂ ಚರ್ಚೆ ನಡೆದಿದೆ ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಹೈಕಮಾಂಡ್ ಬುಲಾವ್ ನೀಡುವ ಸಾಧ್ಯತೆ ಇದ್ದು, ಗುರುವಾರ ಸಿಎಂ ದೆಹಲಿಗೆ ತೆರಳುವ ನಿರೀಕ್ಷೆಯಿದೆ. ಅಂದು ಹೈಕಮಾಂಡ್ ನಾಯಕರೊಂದಿಗೆ ಸಂಪುಟ ಪುನಾರಚನೆ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ.

ಸಚಿವ ಸ್ಥಾನಕ್ಕಾಗಿ ಕೆಲವು ಹಿರಿಯ ನಾಯಕರು ಈಗಾಗಲೇ ಪಟ್ಟು ಹಿಡಿದಿದ್ದಾರೆ. ಇದೇ ವೇಳೆ ಸಂಪುಟದಿಂದ ಕೈಬಿಡಲಾಗುತ್ತದೆ ಎಂಬ ಚರ್ಚೆಯಿಂದ ಕೆಲ ನಾಯಕರು ಅಸಮಾಧಾನಗೊಂಡಿದ್ದಾರೆ. ಹೀಗಾಗಿ ಸಂಪುಟ ಪುನಾರಚನೆಯ ಮೂಲಕ ಓರ್ವ ಮಹಿಳೆಗೆ ಹಾಗೂ ಅಸಮಾಧಾನಗೊಂಡಿರುವ ನಾಯಕರಿಗೆ ಅವಕಾಶ ನೀಡುವ ಸಾಧ್ಯತೆಯ ಬಗ್ಗೆಯೂ ಚರ್ಚೆ ನಡೆಯುತ್ತಿದೆ.

ಸಂಪುಟದಲ್ಲಿ ಹಿರಿತನಕ್ಕೆ ಆದ್ಯತೆ ನೀಡದಿರುವುದು ಹಾಗೂ ಜಾತಿ ಸಮೀಕರಣದ ವಿಚಾರದಲ್ಲೂ ಕೆಲ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಅಲ್ಲದೆ, ಜನತಾ ಪರಿವಾರದ ಹಿನ್ನೆಲೆಯ 17 ಮಂದಿಗೆ ಸಚಿವ ಸ್ಥಾನ ನೀಡಿರುವುದೇಕೆ ಎಂಬ ಪ್ರಶ್ನೆಯನ್ನೂ ಕೆಲವರು ಎತ್ತಿದ್ದಾರೆ.

ಹೀಗಾಗಿ, ಸಿಎಂ ಡಿಕೆ ಶಿವಕುಮಾರ್ ಹಾಗೂ ಹೈಕಮಾಂಡ್ ನಾಯಕರ ನಡುವಿನ ಮಾತುಕತೆ ಬಳಿಕ ಸಂಪುಟ ಸರ್ಜರಿ ಕುರಿತು ಸ್ಪಷ್ಟ ಚಿತ್ರಣ ಹೊರಬೀಳುವ ಸಾಧ್ಯತೆಯಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com